CPCRI: ₹42,000/- ವೇತನ! ಕೇಂದ್ರ ತೋಟಗಾರಿಕೆ ಸಂಸ್ಥೆಯಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗಳ ಭರ್ಜರಿ ನೇಮಕಾತಿ!

ನಮಸ್ಕಾರ ಸ್ನೇಹಿತರೆ, ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಳ ತಾಲ್ಲೂಕಿನ ವಿಟ್ಲಾದಲ್ಲಿನ ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ II ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

CPCRI Recruitment in Kannada

ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಯುಂಗ್ ಪ್ರೊಫೆಷನಲ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಪ್ರಸ್ತುತ ಈ ಒಂದು ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ನೀಡಲಾಗಿದ್ದು, ಈ ಒಂದು ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

CPCRI

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆ
ಹುದ್ದೆಯ ಹೆಸರು ಯಂಗ್ ಪ್ರೊಫೆಷನಲ್ II
ಹುದ್ದೆಯ ಸಂಖ್ಯೆ ಒಂದು ಹುದ್ದೆ
ಉದ್ಯೋಗ ಸ್ಥಳ ದಕ್ಷಿಣ ಕನ್ನಡ – ಕರ್ನಾಟಕ
ಆಯ್ಕೆ ವಿಧಾನ ನೇರ ನೇಮಕಾತಿ

ಹುದ್ದೆಯ ಬಗ್ಗೆ:

ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯು 2026 ನೇ ಸಾಲಿನ ನೇಮಕಾತಿಯಲ್ಲಿ ಯಂಗ್ ಪ್ರೊಫೆಷನಲ್ II ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಲ್ಲಿ MSc ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಕನಿಷ್ಠ 21 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯು 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಂದು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಯಂಗ್ ಪ್ರೊಫೆಷನಲ್ II 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ II ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ M.Sc (ಹಿಸ್ಟಾರಿಕಲ್) ಅಥವಾ M.Sc (ಅಗ್ರಿಕಲ್ಚರ್) ಅಥವಾ M.Sc (ಸಸ್ಯಶಾಸ್ತ್ರ) ಅಥವಾ M.Sc (ಜೈವಿಕ ರಸಾಯನಶಾಸ್ತ್ರ) ಅಥವಾ M.Sc (ಆಹಾರ ತಂತ್ರಜ್ಞಾನ) ಅಥವಾ M.Sc (ಜೈವಿಕ ತಂತ್ರಜ್ಞಾನ) ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ತೋಟಗಾರಿಕಾ ಬೆಳೆಗಳು, ತಳಿಶಾಸ್ತ್ರ ಮತ್ತು ಸಸ್ಯ ತಳಿ ಅಭಿವೃದ್ಧಿ, ಜೈವಿಕ ರಸಾಯನಶಾಸ್ತ್ರ ಅಥವಾ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಪಿಹೆಚ್.ಡಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1-04-2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ, ಯಂಗ್ ಪ್ರೊಫೆಷನಲ್ II ಹುದ್ದೆಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಯಂಗ್ ಪ್ರೊಫೆಷನಲ್ II ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೇ ಸಂಬಂಧಿತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಯುಂಗ್ ಪ್ರೊಫೆಷನಲ್ II ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 42,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಅಂಕಪಟ್ಟಿ
  • ವಯಸ್ಸಿನ ಪುರಾವೆ
  • ಆಧಾರ್ ಕಾರ್ಡ್
  • ಶೈಕ್ಷಣಿಕ ಪ್ರಮಾಣಪತ್ರ
  • ಒಂದು ಪಾಸ್ ಪೋರ್ಟ್ ಅಳತೆಯ ಫೋಟೋ
  • ರೆಸೂಮ್

ಅರ್ಜಿ ಸಲ್ಲಿಸುವುದು ಹೇಗೆ?

  • ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ನಂತರ ಅರ್ಜಿ ನಮೂನೆಯಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಈ ಕೆಳಗೆ ನೀಡಲಾದ ವಿಳಾಸಕ್ಕೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ICAR – CPCRI, ಪ್ರಾದೇಶಿಕ ನಿಲ್ದಾಣ, ವಿಟ್ಟಲ್, ಬಂಟ್ವಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ವಾಕ್ – ಇನ್ ಸಂದರ್ಶನ ನಡೆಯುವ ದಿನಾಂಕ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 24-03-2026
ನೇರ ಸಂದರ್ಶನ ನಡೆಯುವ ದಿನಾಂಕ 13-04-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯು ಯಂಗ್ ಪ್ರೊಫೆಷನಲ್ II ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 13-04-2026 ರಂದು ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment