NIMHANS: ಬೆಂಗಳೂರಿನ ನಿಮ್ಹಾನ್ಸ್ ನೇಮಕಾತಿ 2026! ನೇರ ಸಂದರ್ಶನ + ಅರ್ಜಿ ಶುಲ್ಕ ಇಲ್ಲ

ನಮಸ್ಕಾರ ಸ್ನೇಹಿತರೆ, ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬೆಂಗಳೂರಿನ ಪ್ರತಿಷ್ಠಿತ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

NIMHANS Recruitment in Kannada

ವೃತ್ತಿಪರ ಅನುಭವವನ್ನು ಹೊಂದಿರುವ, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಹಾಗೂ ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಅಭ್ಯರ್ಥಿಗಳು ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕು ಎಂದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗಳು ದಿನಾಂಕ 09-04-2026 ರಂದು ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

NIMHANS

ಹುದ್ದೆಯ ಕಿರು ಪರಿಚಯ:

ನೇಮಕಾತಿ ಸಂಸ್ಥೆ ರಾಷ್ಟ್ರಿಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಹುದ್ದೆಯ ಹೆಸರು ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್
ಹುದ್ದೆಯ ಸಂಖ್ಯೆ 1 ಹುದ್ದೆ
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ
ಆಯ್ಕೆ ವಿಧಾನ ನೇರ ಸಂದರ್ಶನ

ಹುದ್ದೆಯ ಬಗ್ಗೆ:

ರಾಷ್ಟ್ರಿಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಲ್ಲಿ ವಿಜ್ಞಾನ ವಿಷಯದಲ್ಲಿ 2nd PUC ಅಲ್ಲಿ ಉತ್ತೀರ್ಣರಾಗಿ ವೃತ್ತಿಪರ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಾಗೆಯೇ ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ವೈದ್ಯಕೀಯ ಸಂಶೋಧನಾ ದತ್ತಾಂಶ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಹುದ್ದೆಯ ಸಂಕ್ಷಿಪ್ತ ವಿವರ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಸ್ತುತ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ, ಒಂದು ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ವಿಜ್ಞಾನ ವಿಷಯದಲ್ಲಿ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ನಲ್ಲಿ ಪ್ರತಿ ಗಂಟೆಗೆ ಕನಿಷ್ಠ 8000 ಕೀ ಡಿಪ್ರೆಶನ್ ವೇಗವನ್ನು ಹೊಂದಿರಬೇಕು.
  • ಮಾನ್ಯತೆ ಪಡೆದ ಸಂಸ್ಥೆಯಲ್ಲಿ DOEACC ‘A’ ಮಟ್ಟದ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ EDP ಕೆಲಸದಲ್ಲಿ ಕನಿಷ್ಠ 2 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಕನ್ನಡ ಹಾಗೂ ಇಂಗ್ಲಿಷ್ ಭಾಷಾ ಜ್ಞಾನ, ವೈದ್ಯಕೀಯ ಸಂಶೋಧನಾ ಯೋಜನೆಯಡಿಯಲ್ಲಿ ಹಾಗೂ ಆರೋಗ್ಯ ಕೇಂದ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಕೆಲವು ನಿಯಮಗಳ ಪ್ರಕಾರ, ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹಾಗಾಗಿ ಅಭ್ಯರ್ಥಿಗಳು ನೇರವಾಗಿ ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

ವೇತನ ಶ್ರೇಣಿ:

ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000/- ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ವಯಸ್ಸಿನ ಪುರಾವೆ
  • ಅನುಭವ ಪ್ರಮಾಣಪತ್ರ
  • ಜಾತಿ ಪ್ರಮಾಣಪತ್ರ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ರಾಷ್ಟ್ರಿಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಳ್ಳಿ.
  • ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದರೆ, ನಿಮ್ಮ ನವೀಕೃತ ರೆಸೂಮ್ ಅನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ ಹಾಗೂ ಈ ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ ನೇರ ಸಂದರ್ಶನ ನಡೆಯುವ ದಿನದಂದು ಸಮಯಕ್ಕೆ ಸರಿಯಾಗಿ ಈ ಎಲ್ಲ ದಾಖಲೆಗಳೊಂದಿಗೆ ಭಾಗವಹಿಸಿ.
  • ಮುಖ್ಯವಾಗಿ, ಸಂದರ್ಶನ ನಡೆಯುವ 30 ನಿಮಿಷದ ಒಳಗೆ ನಿಮ್ಮ ಹೆಸರನ್ನು ಕಡ್ಡಾಯವಾಗಿ ನೊಂದಾಯಿಸಿಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.

  • ಸಂದರ್ಶನ:

ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕವನ್ನು ಗಳಿಸಿದರೆ ಮಾತ್ರ ಈ ಒಂದು ಹಂತಕ್ಕೆ ಆಯ್ಕೆಯಾಗುತ್ತಾರೆ.

ನೇರ ಸಂದರ್ಶನ ನಡೆಯುವ ದಿನಾಂಕ ಮತ್ತು ಸ್ಥಳ:

  • ಸಂದರ್ಶನ ನಡೆಯುವ ದಿನಾಂಕ: 09-04-2026
  • ಸಂದರ್ಶನ ನಡೆಯುವ ಸಮಯ: ಬೆಳಿಗ್ಗೆ 10:30 AM
  • ಸಂದರ್ಶನ ನಡೆಯುವ ಸ್ಥಳ: ಬೋರ್ಡ್ ರೂಮ್ ಅಂಡ್ ಎಕ್ಸಾಮ್ ಹಾಲ್, 4 ನೇ ಮಹಡಿ, NBRC ಬಿಲ್ಡಿಂಗ್, ನಿಮ್ಹಾನ್ಸ್, ಬೆಂಗಳೂರು – 560 029

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಬೆಂಗಳೂರಿನ ಪ್ರತಿಷ್ಠಿತ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಯ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕೇವಲ PUC ಅಲ್ಲಿ ಉತ್ತೀರ್ಣರಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನೀನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ನಿಗದಿತ ದಿನಾಂಕದಂದು ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಿ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment