DCC Bank: ರೂ. 83,700/- ವೇತನ! ಬಳ್ಳಾರಿ ಜಿಲ್ಲಾ ಸಹಕಾರ ಬ್ಯಾಂಕ್ ಭರ್ಜರಿ ನೇಮಕಾತಿ 2026 । ಮೇ 6 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೆನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳುವ ಆಸಕ್ತಿಯನ್ನು ಹೊಂದಿದ್ದೀರಾ? ಸರ್ಕಾರಿ ಸ್ವಾಮ್ಯದ ಸಂಸ್ಥೆಯಡಿಯಲ್ಲಿ ಕೆಲಸ ಮಾಡುವುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಒದಗಿಬಂದಿದೆ.

DCC Bank Recruitment in Kannada

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವು ಖಾಲಿ ಇರುವ ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಸೇರಿದಂತೆ ಒಟ್ಟು 82 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಇನ್ನಿತರ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ ಹಾಗೂ ಸ್ಥಳೀಯೇತರ ವೃಂದಗಳ ಅಡಿಯಲ್ಲಿ ವರ್ಗಿಕರಿಸಲಾಗಿದ್ದು, ಈ ಒಂದು ನೇಮಕಾತಿಗೆ ಸಂಬಂಧಿಸಿದ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

DCC Bank

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ, ಹೊಸಪೇಟೆ
ಹುದ್ದೆಯ ಹೆಸರು ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 82 ಹುದ್ದೆಗಳು
ಉದ್ಯೋಗ ಸ್ಥಳ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಖಾಲಿ ಇರುವ ಒಟ್ಟು 82 ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC, ದ್ವಿತೀಯ PUC ಹಾಗೂ ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವು ನೇಮಕಾತಿ ಅಧಿಸೂಚನೆಯಲ್ಲಿ ಹೊರಡಿಸಿದ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು 22 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು 28 ಹುದ್ದೆಗಳು
ಕಿರಿಯ ಸೇವಕರು 31 ಹುದ್ದೆಗಳು
ವಾಹನ ಚಾಲಕರು 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ವ್ಯವಸ್ಥಾಪಕರು ಅಥವಾ ಪ್ರಥಮ ದರ್ಜೆ ಸಹಾಯಕರು:
    • ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
    • ಅಭ್ಯರ್ಥಿಗಳು ಕಂಪ್ಯೂಟರ್ ನಿರ್ವಹಣಾ ಜ್ಞಾನವನ್ನು ಹೊಂದಿರಬೇಕು.
    • ಇವುಗಳೊಂದಿಗೆ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.
  • ದ್ವಿತೀಯ ದರ್ಜೆ ಸಹಾಯಕರು:
    • ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ PUC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
    • ಜೊತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನವನ್ನು ಹಾಗೂ ಕನ್ನಡ ಭಾಷಾ ಪ್ರಾವೀಣ್ಯತೆಯನ್ನು ಹೊಂದಿರಬೇಕು.
  • ಕಿರಿಯ ಸೇವಕರು:
    • ಕಿರಿಯ ಸೇವಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಆಯ್ಕೆ ಮಾಡಿಕೊಂಡಿರಬೇಕು.
  • ವಾಹನ ಚಾಲಕರು:
    • ವಾಹನ ಚಾಲಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಆಯ್ಕೆ ಮಾಡಿಕೊಂಡಿರಬೇಕು.
    • ಚಾಲ್ತಿಯಲ್ಲಿರುವ ಕಾನೂನುಬದ್ಧ ಲಘು ಅಥವಾ ಭಾರೀ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಇತರೆ ಹಿಂದುಳಿದ ವರ್ಗಗಳಾದ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ
  • ಪ್ರವರ್ಗ – I, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
  • ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷ

ಅರ್ಜಿ ಶುಲ್ಕ:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮದಲ್ಲಿ ಖಾಲಿ ಇರುವ ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು ಕಿರಿಯ ಸೇವಕರು ಹಾಗೂ ವಾಹನ ಚಾಲಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ವರ್ಗಗಳು ಅರ್ಜಿ ಶುಲ್ಕ ವಿವರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-I ಅಭ್ಯರ್ಥಿಗಳಿಗೆ ರೂ. 500/-
ಸಾಮಾನ್ಯ ವರ್ಗ, ಇತರ ಹಿಂದುಳಿದ ವರ್ಗಗಳಾದ 2A, 2B, 3A, 3B ಅಭ್ಯರ್ಥಿಗಳಿಗೆ ರೂ. 1,000/-

ಅಭ್ಯರ್ಥಿಗಳು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ವಿಧಾನವನ್ನು ಬಳಸಿ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.

ವೇತನ ಶ್ರೇಣಿ:

  • ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,425/- ದಿಂದ ರೂ. 83,700/- ವೇತನವನ್ನು ನೀಡಲಾಗುತ್ತದೆ.
  • ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 31,400/- ದಿಂದ ರೂ. 67,700/- ವೇತನವನ್ನು ನೀಡಲಾಗುತ್ತದೆ
  • ಕಿರಿಯ ಸೇವಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,600/- ದಿಂದ ರೂ. 52,800/- ವೇತನವನ್ನು ನೀಡಲಾಗುತ್ತದೆ.
  • ವಾಹನ ಚಾಲಕಾ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 31,775/- ದಿಂದ ರೂ. 61,300/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • BDCC ರಿಕ್ರೂಟ್ಮೆಂಟ್ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
  • ನೋಂದಣಿ ಪ್ರಕಿಯೆ ಪೂರ್ಣಗೊಂಡ ನಂತರ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ.
  • ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಯ ಭಾವಚಿತ್ರ, ಸಹಿ, ಶೈಕ್ಷಣಿಕ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ನಿಮ್ಮ ವರ್ಗಕ್ಕೆ ಸಂಬಂಧಿಸಿದ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಬಹು ಆಯ್ಕೆ ಆಧಾರಿತ ಲಿಖಿತ ಪರೀಕ್ಷೆಯನ್ನು ಮಾಡಲಾಗುವುದು. ವ್ಯವಸ್ಥಾಪಕರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಒಟ್ಟು 200 ಅಂಕಗಳ ಪರೀಕ್ಷೆಯನ್ನು ಮಾಡಲಾಗುವುದು. ಹಾಗೂ ಕಿರಿಯ ಸೇವಕರು ಹಾಗೂ ವಾಹನ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಒಟ್ಟು 100 ಅಂಕಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ಸಂದರ್ಶನ:

ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನಕ್ಕೆ ಒಟ್ಟು 15 ಅಂಕಗಳನ್ನು ನಿಗದಿಪಡಿಸಲಾಗುತ್ತದೆ.

  • ಅಂತಿಮ ಆಯ್ಕೆ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಸರ್ಕಾರದ ಮೀಸಲಾತಿ ನಿಯಮಗಳ ಆಧಾರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 06-04-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 06-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-05-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 06-05-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2026 ನೇ ಸಾಲಿನಲ್ಲಿ ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ವಾಹನ ಚಾಲಕ ಹಾಗೂ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಎಂದು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ


ಇತರೆ ಪ್ರಮುಖ ಲಿಂಕುಗಳು:

Leave a Comment