ನಮಸ್ಕಾರ ಸ್ನೇಹಿತರೆ, ನೀವೇನಾದರೂ ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಬೇಕೆಂದಿದ್ದೀರಾ? ಅಥವಾ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್!
CRPF Recruitment in Kannada
ಕೇಂದ್ರ ಮೀಸಲು ಪೊಲೀಸ್ ಪಡೆಯು 2026 ನೇ ಸಾಲಿನಲ್ಲಿ ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.
ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ 20-04-2026 ರಿಂದ ಪ್ರಾರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 19-05-2026 ರಂದು ಕೊನೆಗೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಕೇಂದ್ರ ಮೀಸಲು ಪೊಲೀಸ್ ಪಡೆ |
| ಹುದ್ದೆಯ ಹೆಸರು | ಕಾನ್ಸ್ಟೇಬಲ್ ಟ್ರೇಡ್ಸ್ ಮನ್ |
| ಹುದ್ದೆಯ ಸಂಖ್ಯೆ | 9195 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅಧಿಕೃತ ವೆಬ್ಸೈಟ್ | https://crpf.gov.in/ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕೇಂದ್ರ ಮೀಸಲು ಪೊಲೀಸ್ ಪಡೆ ಒಟ್ಟು 9195 ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜಸ್ಟ್ 10th ನಲ್ಲಿ ಉತ್ತೀರ್ಣರಾಗಿದ್ದು, 18 ರಿಂದ 27 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಕಾನ್ಸ್ಟೇಬಲ್ (ಟ್ರೇಡ್ಸ್ ಮನ್ ಮತ್ತು ತಾಂತ್ರಿಕ) | 9175 ಹುದ್ದೆಗಳು |
| ಕಾನ್ಸ್ಟೇಬಲ್ ಟ್ರೇಡ್ಸ್ ಮನ್ (ಪಯೋನಿಯರ್ ವಿಂಗ್) | 20 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಕಾನ್ಸ್ಟೇಬಲ್ (ಚಾಲಕ):
- ಕಾನ್ಸ್ಟೇಬಲ್ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಪರೀಕ್ಷೆಯಲ್ಲಿ ಅಲ್ಲಿ ಉತ್ತೀರ್ಣರಾಗಿರಬೇಕು.
- ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
- ಕಾನ್ಸ್ಟೇಬಲ್ (ಮೋಟಾರ್ ಮೆಕ್ಯಾನಿಕ್):
- ಕಾನ್ಸ್ಟೇಬಲ್ ಮೋಟಾರ್ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಇದರೊಂದಿಗೆ ಅಭ್ಯರ್ಥಿಗಳು ಕಡ್ಡಾಯವಾಗಿ 2 ವರ್ಷಗಳ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
- ಕಾನ್ಸ್ಟೇಬಲ್ (ಇತರೆ ಹುದ್ದೆಗಳು):
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿತ ವ್ಯಾಪಾರದಲ್ಲಿ ಪ್ರಾವೀಣ್ಯತೆ ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.
- ಕಾನ್ಸ್ಟೇಬಲ್ ಟ್ರೇಡ್ಸ್ ಮನ್ (ಪಯೋನಿಯರ್ ವಿಂಗ್):
- ಕಾನ್ಸ್ಟೇಬಲ್ ಟ್ರೇಡ್ಸ್ ಮನ್ (ಪಯೋನಿಯರ್ ವಿಂಗ್) ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
- ಕಾನ್ಸ್ಟೇಬಲ್ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು
- ಕಾನ್ಸ್ಟೇಬಲ್ ಚಾಲಕ ಹುದ್ದೆಯನ್ನು ಹೊರತುಪಡಿಸಿ ಇತರೆ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 23 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಕೇಂದ್ರ ಮೀಸಲು ಪೊಲೀಸ್ ಪಡೆಯ ಕೆಲವು ನಿಯಮಗಳ ಪ್ರಕಾರ ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ ಹಾಗೂ ಇ.ಡಬ್ಲ್ಯೂ.ಎಸ್ ಅಭ್ಯರ್ಥಿಗಳಿಗೆ ರೂ. 100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ ಲೆವೆಲ್ 3 ರ ಅನ್ವಯ ಮಾಸಿಕ ರೂ. 21,700/- ದಿಂದ ರೂ. 69,100/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೇಂದ್ರ ಮೀಸಲು ಪೊಲೀಸ್ ಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಿಮ್ಮ ಹೆಸರು ಮತ್ತು ಮೊಬೈಲ್ ನಂಬರ್ ನಮೂದಿಸಿ ರಿಜಿಸ್ಟರ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ಅರ್ಹತೆ, ವೈಯಕ್ತಿಕ ವಿವರ, ನಿಮ್ಮ ಆಯ್ಕೆಯ ಹುದ್ದೆಗೆ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಪಾಸ್ ಪೋರ್ಟ್ ಅಳತೆ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ದೈಹಿಕ ದಕ್ಷತೆ ಪರೀಕ್ಷೆ:
- ಕಾನ್ಸ್ಟೇಬಲ್ (ಚಾಲಕ, ಮೋಟಾರ್ ಮೆಕ್ಯಾನಿಕಲ್, ಕಾರ್ಪೆನ್ಟರ್ ಹಾಗೂ ಇತರ ಹುದ್ದೆಗಳಿಗೆ) ಪುರುಷ ಅಭ್ಯರ್ಥಿಗಳು 5 ಕಿ.ಮೀ ಓಟವನ್ನು ಕನಿಷ್ಠ 24 ನಿಮಿಷಗಳಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳು 1.6 ಕಿ.ಮೀ ಓಟವನ್ನು ಕನಿಷ್ಠ 8.30 ನಿಮಿಷಗಳಲ್ಲಿ ಪೂರೈಸಿರಬೇಕು.
- ಕಾನ್ಸ್ಟೇಬಲ್ (ಅಡುಗೆ, ಸಫಾಯಿ ಕರ್ಮಚಾರಿ): ಪುರುಷ ಅಭ್ಯರ್ಥಿಗಳು 1.6 ಕಿ.ಮೀ ಓಟವನ್ನು 10 ನಿಮಿಷದಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳು 1.6 ಕಿ.ಮೀ ಓಟವನ್ನು 12 ನಿಮಿಷದಲ್ಲಿ ಪೂರೈಸಿರಬೇಕು.
- ಪಯೊನೀರ್ ವಿಂಗ್ ಹುದ್ದೆಗೆ ಪುರುಷ ಅಭ್ಯರ್ಥಿಗಳು 1.6 ಕಿ.ಮೀ ಓಟವನ್ನು 9 ನಿಮಿಷಗಳಲ್ಲಿ ಪೂರೈಸಿರಬೇಕು.
- ದೈಹಿಕ ಮಾನದಂಡ ಪರೀಕ್ಷೆ:
- ಪುರುಷ ಅಭ್ಯರ್ಥಿಗಳು 170 ಸೆಂ. ಮೀ ಎತ್ತರವನ್ನು ಹಾಗೂ ಮಹಿಳಾ ಅಭ್ಯರ್ಥಿಗಳು 157 ಸೆಂ. ಮೀ ಎತ್ತರವನ್ನು ಹೊಂದಿರಬೇಕು.
- ಕಂಪ್ಯೂಟರ್ ಆಧಾರಿತ ಪರೀಕ್ಷೆ:
- ದೈಹಿಕ ದಕ್ಷತೆ ಹಾಗೂ ದೈಹಿಕ ಮಾನದಂಡ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು 100 ಅಂಕಗಳ ಲಿಖಿತ ಪರೀಕ್ಷೆಯನ್ನು ಬರೆಯಲು ಅರ್ಹರಾಗಿರುತ್ತಾರೆ.
- ವ್ಯಾಪಾರ ಕೌಶಲ್ಯ ಪರೀಕ್ಷೆ:
- ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆಗೆ ಕರೆಯಲಾಗುತ್ತದೆ.
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 20-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-05-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 19-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕೊನೆಯ ಮಾತು:
ಕೇಂದ್ರ ಮೀಸಲು ಪೊಲೀಸ್ ಪಡೆ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ 9195 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಿಡಿಸಿದ್ದು, ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗಾವಕಾಶ ಕಲ್ಪಿಸಿದೆ. ಜಸ್ಟ್ 10th ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದ ವರೆಗೂ ಕಾಯದೆ ಇಂದೇ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- NIA: ₹1,42,400 ವೇತನ! ರಾಷ್ಟೀಯ ತನಿಖಾ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026 । ಮೇ 18 ಕೊನೆಯ ದಿನಾಂಕ
- MECON: ₹53,000/- ವೇತನ! ಮೆಕಾನ್ ನೇಮಕಾತಿ 2026 । ಮೇ 6 ಕೊನೆಯ ದಿನ
- BBMP: ಹಾವೇರಿ & ರಾಣೆಬೆನ್ನೂರು ನಗರಸಭೆಯಲ್ಲಿ ಭರ್ಜರಿ ನೇಮಕಾತಿ 2026! ಏಪ್ರಿಲ್ 30 ಕೊನೆಯ ದಿನಾಂಕ
- NHM: ₹88,000/- ವೇತನ! ರಾಷ್ಟೀಯ ಆರೋಗ್ಯ ಮಿಷನ್ ಭರ್ಜರಿ ನೇಮಕಾತಿ । ಪರೀಕ್ಷೆ ಇಲ್ಲದೇ ಸರ್ಕಾರಿ ಉದ್ಯೋಗಾವಕಾಶ!
- NIMHANS: ಬೆಂಗಳೂರಿನ ನಿಮ್ಹಾನ್ಸ್ ನೇಮಕಾತಿ 2026! ನೇರ ಸಂದರ್ಶನ + ಅರ್ಜಿ ಶುಲ್ಕ ಇಲ್ಲ