ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೇಲ್ವೆ ಸಂಸ್ಥೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ ತಮ್ಮ ಆಡಳಿತ ಮಂಡಳಿಯನ್ನು ಬಲಪಡಿಸಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.
BMRCL Recruitment in Kannada
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿದ್ದು, ಸಂಬಂಧಿತ ಕ್ಷೇತ್ರದಲ್ಲಿ 20 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27-04-2026 ಕೊನೆಯ ದಿನಾಂಕವಾಗಿದೆ.
ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಈ ಒಂದು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (BMRCL) |
| ಹುದ್ದೆಯ ಹೆಸರು | ಜನರಲ್ ಮ್ಯಾನೇಜರ್ |
| ಹುದ್ದೆಯ ಸಂಖ್ಯೆ | 01 ಹುದ್ದೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-04-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಜೂನಿಯರ್ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಗರಿಷ್ಟ 58 ವರ್ಷ ವಯೋಮಿತಿಯನ್ನು ಹೊಂದಿದ್ದು, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಮುಗಿಸಿ 20 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಹೊರಡಿಸಿದ ಹುದ್ದೆಯ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಜನರಲ್ ಮ್ಯಾನೇಜರ್ | 1 ಹುದ್ದೆ |
ವಿದ್ಯಾರ್ಹತೆ:
- ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರ್ ಪದವಿಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 8 ವರ್ಷಗಳ ಕಾಲ ಮೆಟ್ರೋ ರೈಲು ಯೋಜನೆ ಅಥವಾ ಪ್ರಾಪರ್ಟಿ ಮತ್ತು ಬಿಸಿನೆಸ್ ಎನ್ವಿರಾನ್ಮೆಂಟ್ ನಲ್ಲಿ ಹಾಗೂ ಮೆಟ್ರೋ ರೈಲು, ಬಹುಮಹಡಿ ಕಟ್ಟಡಗಳು, ಹೆದ್ದಾರಿಗಳು, ರೈಲ್ವೆ ಅಥವಾ ಆಸ್ತಿ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.
- ಒಟ್ಟಾರೆಯಾಗಿ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 20 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 58 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಆಡಳಿತಾತ್ಮಕ ಅಭಿವೃದ್ದಿಗಾಗಿ ಹಾಗೂ ವ್ಯವಹಾರಗಳ ವಿಸ್ತರಣೆಗಾಗಿ ಅನುಭವಿ ವ್ಯಕ್ತಿಗಳನ್ನು ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕ ಮಾಡಿಕೊಳ್ಳಲಿದ್ದು, ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 2,06,250 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ವಯಸ್ಸಿನ ಪುರಾವೆ
- ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಜಾತಿ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಹಾಗೂ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವಂತೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು BMRCL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಳ್ಳಿ.
- ನಂತರ, ಅರ್ಜಿ ನಮೂನೆಯಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಜನರಲ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ | 08-04-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 27-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-04-2026 |
ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಸಂಬಂಧಿತ ಕ್ಷೇತ್ರದಲ್ಲಿ 20 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನೀವೇನಾದರೂ ವೃತ್ತಿಪರ ಅನುಭವವನ್ನು ಹೊಂದಿದ್ದರೆ, ಇಂದೇ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ
- CNP: ರೂ. 1,03,000/- ವೇತನ! ಕರೆನ್ಸಿ ನೋಟ್ ಪ್ರೆಸ್ನಲ್ಲಿ ಬೃಹತ್ ನೇಮಕಾತಿ । ಮೇ 19 ಕೊನೆಯ ದಿನಾಂಕ
- CRPF: ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ಜರಿ ನೇಮಕಾತಿ! 10th ಪಾಸ್ ಆದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ
- BBMP: ಹಾವೇರಿ & ರಾಣೆಬೆನ್ನೂರು ನಗರಸಭೆಯಲ್ಲಿ ಭರ್ಜರಿ ನೇಮಕಾತಿ 2026! ಏಪ್ರಿಲ್ 30 ಕೊನೆಯ ದಿನಾಂಕ
- NHM: ₹88,000/- ವೇತನ! ರಾಷ್ಟೀಯ ಆರೋಗ್ಯ ಮಿಷನ್ ಭರ್ಜರಿ ನೇಮಕಾತಿ । ಪರೀಕ್ಷೆ ಇಲ್ಲದೇ ಸರ್ಕಾರಿ ಉದ್ಯೋಗಾವಕಾಶ!