Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ

ನಮಸ್ಕಾರ ಸ್ನೇಹಿತರೆ, ನೀವೇನಾದರೂ SSLC ಯಲ್ಲಿ ಪಾಸ್ ಆಗಿದೀರಾ? ಎಲ್ಲಾ ಕಡೆ ಉದ್ಯೋಗ ಹುಡುಕಿ ಹುಡುಕಿ ಸಾಕಾಯ್ತ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಕೇಂದ್ರ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನಿರುದ್ಯೋಗಿ ಯುವಕ ಯುವತಿಯರಿಗೆ ಬೃಹತ್ ನೇಮಕಾತಿ ಅವಕಾಶವನ್ನು ಕಲ್ಪಿಸಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Post Office Job Recruitment in Kannada

ಕೇಂದ್ರ ಸರ್ಕಾರದ ಅಂಚೆ ಇಲಾಖೆಯು ನಂಜನಗೂಡು ಅಂಚೆ ವಿಭಾಗದಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿಗಳ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಚಾಲನೆ ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಈ ಒಂದು ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

Post Office

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಭಾರತೀಯ ಅಂಚೆ ಇಲಾಖೆ (ನಂಜನಗೂಡು ವಿಭಾಗ)
ಹುದ್ದೆಯ ಹೆಸರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿಗಳು
ಹುದ್ದೆಯ ಸಂಖ್ಯೆ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ ನಂಜನಗೂಡು, ಯಳಂದೂರು, ಗುಂಡ್ಲುಪೇಟೆ, ಚಾಮರಾಜನಗರ, ಕೊಳ್ಳೇಗಾಲ ತಾಲ್ಲೂಕುಗಳು
ನೇಮಕಾತಿ ವಿಧಾನ ನೇರ ಸಂದರ್ಶನ

ಹುದ್ದೆಯ ಬಗ್ಗೆ:

ಭಾರತೀಯ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗಳು ಖಾಲಿ ಇದ್ದು, ಈ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜಸ್ಟ್ SSLC ಅಲ್ಲಿ ಉತ್ತೀರ್ಣರಾಗಿ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಭಾರತೀಯ ಅಂಚೆ ಇಲಾಖೆ (ನಂಜನಗೂಡು ವಿಭಾಗ) ಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳು ಕಮಿಷನ್ ಆಧಾರಿತವಾಗಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಪೂರ್ವ ಕಲಿಕಾ ಅಥವಾ ಅರೆ ಕಲಿಕಾ ಕೆಲಸವನ್ನು ನಿರ್ವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಯೋಜನೆಯನ್ನು ಸಾರ್ವಜನಿಕರಿಗೆ ಪರಿಚಯಿಸಿ, ವಿಮೆಯನ್ನು ಮಾಡಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ.

ಶೈಕ್ಷಣಿಕ ಅರ್ಹತೆ:

  • ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳಿಗೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ಬರಬೇಕು.
  • ವಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
  • ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿದ್ದರೆ, ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ನಿವೃತ್ತ ಶಿಕ್ಷಕರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯ ಇರುವುದಿಲ್ಲ. ನೇರವಾಗಿ ನಿಗದಿತ ವಿಳಾಸಕ್ಕೆ ಭೇಟಿ ನೀಡಿ ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

ಇಲ್ಲಿ ಗಮನಿಸಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ, ಅಭ್ಯರ್ಥಿಗಳು ಆಯ್ಕೆಯಾದ ನಂತರ ಸೆಕ್ಯೂರಿಟಿ ಡೆಪಾಸಿಟ್ ರೂಪದಲ್ಲಿ ರೂ. 5000 ಮೌಲ್ಯದ ರಾಷ್ಟೀಯ ಉಳಿತಾಯ ಪ್ರಮಾಣಪತ್ರ ಅಥವಾ ಕಿಸಾನ್ ವಿಕಾಸ್ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ವೇತನ ಶ್ರೇಣಿ:

ಈ ಒಂದು ಹುದ್ದೆಯು ಕಮಿಷನ್ ಆಧಾರಿತವಾಗಿದ್ದು, ಆಯ್ಕೆಯ ಅಭ್ಯರ್ಥಿಗಳು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹಧನವನ್ನು ಪಡೆದುಕೊಳ್ಳಬಹುದಾಗಿದೆ.

ನೀವು ಎಷ್ಟು ಜನರಿಗೆ ವಿಮಾ ಪಾಲಿಸಿಯನ್ನು ಮಾಡಿಸುತ್ತಿರೋ ಅದಕ್ಕೆ ಅನುಗುಣವಾಗಿ ಇಲಾಖೆಯು ಪ್ರೋತ್ಸಾಹಧನವನ್ನು ನೀಡಲಿದೆ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ವಯಸ್ಸಿನ ಪುರಾವೆ
  • ವಾಸಸ್ಥಳ ಪ್ರಮಾಣಪತ್ರ
  • ಶೈಕ್ಷಣಿಕ ಪ್ರಮಾಣಪತ್ರ
  • SSLC ಅಂಕಪಟ್ಟಿ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು ನಿಗದಿತ ದಿನಾಂಕದಂದು ನೇರ ಸಂದರ್ಶನಕ್ಕೆ ಭಾಗವಹಿಸಬೇಕಾಗುತ್ತದೆ. ಸಂದರ್ಶನಕ್ಕೆ ಭಾಗವಹಿಸುವ ಸಂದರ್ಭದಲ್ಲಿ ಈ ಕೆಳಗೆ ನೀಡಲಾದ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕಾಗುತ್ತದೆ

  • ಈ ಒಂದು ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳು ಆಧಾರ್ ಕಾರ್ಡ್, SSLC ಅಂಕ ಪಟ್ಟಿ, ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಮುಖ್ಯವಾಗಿ ರೂ. 5000 ಮೌಲ್ಯದ ರಾಷ್ಟೀಯ ಉಳಿತಾಯ ಪ್ರಮಾಣಪತ್ರದೊಂದಿಗೆ ನಂಜನಗೂಡು ವಿಭಾಗೀಯ ಅಂಚೆ ಕಚೇರಿಗೆ ಭೇಟಿ ನೀಡಿ.
  • ಅಲ್ಲಿ ನೀಡುವ ಅರ್ಜಿಯನ್ನು ಭರ್ತಿ ಮಾಡಿ ಈ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸಲ್ಲಿಸಿ.
  • ನಂತರ ಇಲಾಖೆಯು ನಡೆಸುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ದಾಖಲೆಗಳ ಪರಿಶೀಲನೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಹಾಗೂ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಪರಿಶೀಲಿಸಲಾಗುತ್ತದೆ.

  • ಸ್ಥಳೀಯ ನಿವಾಸಿ ದೃಢೀಕರಣ:

ಅಭ್ಯರ್ಥಿಗಳು ನಂಜನಗೂಡು, ಯಳಂದೂರು, ಗುಂಡ್ಲುಪೇಟೆ, ಚಾಮರಾಜನಗರ, ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ವಾಸವಿದ್ದರೆ ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

  • ನೇರ ಸಂದರ್ಶನ:

ಅಭ್ಯರ್ಥಿಗಳು ವಿಮಾ ಕ್ಷೇತ್ರದ ಬಗ್ಗೆ ಹೊಂದಿರುವ ಆಸಕ್ತಿ ಹಾಗೂ ಸಂವಹನ ಕೌಶಲ್ಯವನ್ನು ನೇರ ಸಂದರ್ಶನದಲ್ಲಿ ಅಳೆಯಲಾಗುತ್ತದೆ.

  • ತರಬೇತಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಮಾ ಯೋಜನೆಗಳ ಬಗ್ಗೆ ಹಾಗೂ ಗ್ರಾಹಕರನ್ನು ಹೇಗೆ ಸೆಳೆಯಬೇಕು ಎನ್ನುವ ಕುರಿತು ಕಿರು ತರಬೇತಿಯನ್ನು ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇರ ಸಂದರ್ಶನ ನಡೆಯುವ ದಿನಾಂಕ 28-04-2026
ಸಂದರ್ಶನ ಪ್ರಾರಂಭಗೊಳ್ಳುವ ಸಮಯ ಬೆಳಿಗ್ಗೆ 11:00 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ ವಿಭಾಗೀಯ ಅಂಚೆ ಕಚೇರಿ, ನಂಜನಗೂಡು

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಭಾರತೀಯ ಅಂಚೆ ಇಲಾಖೆಯು ನಂಜನಗೂಡು ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಅಂಚೆ ಇಲಾಖೆಯು ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 28 ಏಪ್ರಿಲ್ 2026 ರಂದು ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಿ ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.


ಇತರೆ ಪ್ರಮುಖ ಲಿಂಕುಗಳು:

Leave a Comment