SSC: ರೂ. 1,51,100/- ವೇತನ! 3000+ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ Apply ಮಾಡಿ

ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗಾವಕಾಶ! ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ phase – 14 ರ ಅಡಿಯಲ್ಲಿ ಒಟ್ಟು 3003 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

SSC Recruitment in Kannada

ಈ ನೇಮಕಾತಿ ಪ್ರಕ್ರಿಯೆಯು ಜೂನಿಯರ್ ಇಂಜಿನಿಯರ್, ಸ್ಟೈನೋಗ್ರಾಫರ್, ವೈಜ್ಞಾನಿಕ ಸಹಾಯಕರು, ಪ್ರಯೋಗಾಲಯ ಅಟೆಂಡೆಂಟ್ ಹಾಗೂ ಇನ್ನಿತರ ಹುದ್ದೆಗಳಿಗೆ ಸಂಬಂಧಿಸಿದ್ದು, ಪಿಯುಸಿ ಅಥವಾ ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 13-04-2026 ರಿಂದ ಪ್ರಾರಂಭಗೊಂಡು 04-05-2026 ರಂದು ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಎಷ್ಟು? ಹಾಗೂ ಇನ್ನಿತರ ಎಲ್ಲಾ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

SSC

ಹುದ್ದೆಯ ಸಂಕ್ಷಿಪ್ತ ನೋಟ:

ನೇಮಕಾತಿ ಸಂಸ್ಥೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಯ ಹೆಸರು ಸ್ಟೈನೋಗ್ರಾಫರ್, ಜೂನಿಯರ್ ಇಂಜಿನಿಯರ್, ಪ್ರಯೋಗಾಲಯ ಅಟೆಂಡೆಂಟ್, ವೈಜ್ಞಾನಿಕ ಸಹಾಯಕರು ಹಾಗೂ ಇನ್ನು ವಿವಿಧ ಹುದ್ದೆಗಳು
ಹುದ್ದೆಯ ಸಂಖ್ಯೆ 3003 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಕ್ಷಿಪ್ತ ವಿವರ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

  • ಅಕೌಂಟೆಂಟ್
  • ಜೂನಿಯರ್ ಇಂಜಿನಿಯರ್ (ಗುಣಮಟ್ಟ ಭರವಸೆ)
  • ಟೆಕ್ನಿಕಲ್ ಆಪರೇಟರ್
  • ಡ್ರಾಫ್ಟ್ಸ್ ಮನ್
  • ಫೀಲ್ಡ್ ಅಸಿಸ್ಟೆಂಟ್
  • ರಿಸರ್ಚ್ ಅಸಿಸ್ಟೆಂಟ್
  • ಲ್ಯಾಬೋರೇಟರಿ ಅಟೆಂಡೆಂಟ್
  • ಲೈಬ್ರರಿ ಅಂಡ್ ಇನ್ಫರ್ಮೇಷನ್ ಅಸಿಸ್ಟೆಂಟ್
  • ಸ್ಟೈನೋಗ್ರಾಫರ್ ಗ್ರೇಡ್ 2
  • ಸೈನ್ಟಿಫಿಕ್ ಅಸಿಸ್ಟೆಂಟ್

ಶೈಕ್ಷಣಿಕ ಅರ್ಹತೆ:

  • ಜೂನಿಯರ್ ಇಂಜಿನಿಯರ್, ಸೈನ್ಟಿಫಿಕ್ ಅಸಿಸ್ಟೆಂಟ್ ಹಾಗೂ ಇನ್ನು ಉನ್ನತ ಮಟ್ಟದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
  • ಸ್ಟೈನೋಗ್ರಾಫರ್ ಹಾಗೂ ಇನ್ನಿತರ ತಾಂತ್ರಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಮಲ್ಟಿ ಟಾಸ್ಕಿಂಗ್ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ಜನವರಿ 1, 2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಟ 25 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವಾ ಅವಧಿ ಕಳೆದ ನಂತರ 3 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
  • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ
  • ಪಿಡಬ್ಲ್ಯೂಬಿಡಿ (SC/ ST) ಅಭ್ಯರ್ಥಿಗಳಿಗೆ 15 ವರ್ಷ

ಅರ್ಜಿ ಶುಲ್ಕ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಮಾಸ್ಟರ್ ಕಾರ್ಡ್, ವೀಸಾ, ಯುಪಿಐ ಬಳಸಿ ಪಾವತಿಸಬೇಕಾಗುತ್ತದೆ.

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 100/-
  • ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಆಯ್ಕೆಯಾದ ಹುದ್ದೆಗಳಿಗೆ ಅನ್ವಯವಾಗಿ ಪೇ ಲೆವೆಲ್ 1 ರಿಂದ ಪೇ ಲೆವೆಲ್ 8 ರ ವರೆಗೆ ವೇತನವನ್ನು ನಿಗದಿಪಡಿಸಲಾಗುವುದು. ಮಾಸಿಕ ವೇತನವು ರೂ. 18,000/- ದಿಂದ ರೂ. 1,51,100/- ರ ವರೆಗೆ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ವಿವಿಧ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

  • ಅಭ್ಯರ್ಥಿಗಳು ಮೊದಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ವೆಬ್ಸೈಟ್ ಗೆ ಭೇಟಿ.
  • ಹೊಸ ಬಳಕೆದಾರರಾಗಿದ್ದರೆ, ಒನ್ ಟೈಮ್ ರೆಜಿಸ್ಟ್ರೇಷನ್ ಪ್ರಕ್ರಿಯೆಯೆನ್ನು ಪೂರ್ಣಗೊಳಿಸಿ.
  • ಲಾಗಿನ್ ಆದ ನಂತರ Phase- XIV /2026/ selection post ಮೇಲೆ ಕ್ಲಿಕ್ ಮಾಡಿ.
  • ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
  • ನಂತರ ನಿಮ್ಮ ಲೈವ್ ಫೋಟೋವನ್ನು ಅಪ್ಲೋಡ್ ಮಾಡಿ. ಅಪ್ಲೋಡ್ ಮಾಡುವ ಫೋಟೋಗಳು ಕ್ಲಿಯರ್ ಆಗಿರಲಿ.
  • ನಿಮ್ಮ ಸಹಿಯನ್ನು ಸ್ಕ್ಯಾನ್ ಮಾಡಿ ನಂತರ ನೀವು ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಆಬ್ಜೆಕ್ಟಿವ್ ಮಾದರಿಯ ಪರೀಕ್ಷೆ ಆಗಿದ್ದು, ಈ ಒಂದು ಪರೀಕ್ಷೆಯಲ್ಲಿ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಜನರಲ್ ಇಂಟಲಿಜೆನ್ಸ್, ಜನರಲ್ ಅವೇರ್ನೆಸ್ ಹಾಗೂ ಇಂಗ್ಲಿಷ್ ಭಾಷಾ ವಿಷಯಗಳು ಒಳಗೊಂಡಿರುತ್ತದೆ.

  • ಕೌಶಲ್ಯ ಪರೀಕ್ಷೆ:

ಸ್ಟೈನೋಗ್ರಫಿ ಹಾಗೂ ಟೈಪಿಂಗ್ ಅಗತ್ಯವಿರುವ ಹುದ್ದೆಗಳಿಗೆ ಮಾತ್ರ ಈ ಒಂದು ಪರೀಕ್ಷೆ ಅನ್ವಯವಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಈ ಎಲ್ಲ ಹಂತಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಅಂತಿಮವಾಗಿ ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 13-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-05-2026
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 05-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಸ್ಟಾಫ್ ಸೆಲೆಕ್ಷನ್ ಕಮಿಷನ್ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕ 04-05-2026 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment