ನಮಸ್ಕಾರ ಸ್ನೇಹಿತರೆ, ಭಾರತೀಯ ಜೀವ ವಿಮಾ ನಿಗಮದ ಅಂಗಸಂಸ್ಥೆಯಾಗಿರುವ LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಸ್ಥಿರವಾದ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದೆ.
LIC HFL Recruitment in Kannada
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 16-04-2026 ದಿಂದಲೇ ಪ್ರಾರಂಭಗೊಂಡಿದೆ. ಈ ಒಂದು ಹುದ್ದೆಯು ಭಾರತದ ವಿವಿಧ ರಾಜ್ಯಗಳಲ್ಲಿ ಹಂಚಿಕೆಯಾಗಿದ್ದು, ಅವುಗಳ ಬಗ್ಗೆ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಹಾಗೂ ಯಾವುದೇ ವಿಷಯದಲ್ಲಿ ಪೂರ್ಣಾವಧಿಯ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ಕಿರು ಪರಿಚಯ:
| ನೇಮಕಾತಿ ಸಂಸ್ಥೆ | LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಜೂನಿಯರ್ ಅಸಿಸ್ಟೆಂಟ್ |
| ಹುದ್ದೆಯ ಸಂಖ್ಯೆ | 180 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
ಹುದ್ದೆಯ ಸಂಪೂರ್ಣ ವಿವರ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭಾರತದ ವಿವಿಧ ರಾಜ್ಯಗಳಲ್ಲಿ ಹಂಚಿಕೆ ಮಾಡಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ಕರ್ನಾಟಕ:
- ಒಟ್ಟು 29 ಹುದ್ದೆಗಳು ಲಭ್ಯವಿದ್ದು, ಇದರಲ್ಲಿ ಬೆಂಗಳೂರಿಗೆ 23 ಹುದ್ದೆಗಳು, ಮಂಗಳೂರು, ಮೈಸೂರು, ರಾಯಚೂರು, ಹಾಸನ, ಗುಲ್ಬರ್ಗ ಹಾಗೂ ಬೆಳಗಾವಿಯಲ್ಲಿ ತಲಾ 1 ಹುದ್ದೆಗಳು ಖಾಲಿ ಇದೆ.
- ತಮಿಳುನಾಡು:
- ಕೊಯಮತ್ತೂರು ಹಾಗೂ ಚೆನ್ನೈ ಸೇರಿದಂತೆ ವಿವಿಧ ನಗರಗಳಲ್ಲಿ 21 ಹುದ್ದೆಗಳು ಖಾಲಿ ಇದೆ.
- ಮಹಾರಾಷ್ಟ್ರ:
- ನಾಗ್ಪುರ, ನಾಸಿಕ್, ಮುಂಬೈ, ಪುಣೆ ಸೇರಿದಂತೆ ಇನ್ನಿತರ ನಗರಗಳಲ್ಲಿ ಒಟ್ಟು 25 ಹುದ್ದೆಗಳು ಖಾಲಿ ಇದೆ.
- ತೆಲಂಗಾಣ:
- ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇದೆ.
- ಮಧ್ಯಪ್ರದೇಶ:
- ಇಂದೋರ್ ಮತ್ತು ಭೋಪಾಲ್ ಸೇರಿದಂತೆ ಒಟ್ಟು 18 ಹುದ್ದೆಗಳು ಖಾಲಿ ಇದೆ.
- ಪಶ್ಚಿಮ ಬಂಗಾಳ:
- ಕೋಲ್ಕತ್ತಾ ಮತ್ತು ಸಿಲಿಗುರಿ ನಗರಗಳಲ್ಲಿ 9 ಹುದ್ದೆಗಳು ಖಾಲಿ ಇದೆ.
- ಆಂಧ್ರಪ್ರದೇಶ:
- ವೈಜಾಗ್, ವಿಜಯವಾಡ, ತಿರುಪತಿ ಸೇರಿದಂತೆ ಒಟ್ಟು 8 ಹುದ್ದೆಗಳು ಖಾಲಿ ಇದೆ.
- ಉಳಿದಂತೆ, ಉತ್ತರಪ್ರದೇಶದಲ್ಲಿ 13 ಹುದ್ದೆಗಳು, ಬಿಹಾರ ಮತ್ತು ಒಡಿಶಾದಲ್ಲಿ ತಲಾ 7 ಹುದ್ದೆಗಳು ಹಾಗೂ ಛತ್ತೀಸ್ ಗಢ, ಅಸ್ಸಾಂ ಹಾಗೂ ದೆಹಲಿಯಲ್ಲಿ ತಲಾ 3 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪೂರ್ಣ ಅವಧಿಯ ಪದವಿಯಲ್ಲಿ ಕನಿಷ್ಠ 55% ಅಂಕಗಳೊಂದಿದೆ ಉತ್ತೀರ್ಣರಾಗಿರಬೇಕು. ಹಾಗೂ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಅಭ್ಯರ್ಥಿಗಳ ವಯೋಮಿತಿಯನ್ನು ಏಪ್ರಿಲ್ 1, 2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು 2, ಏಪ್ರಿಲ್ 1996 ರ ಒಳಗೆ ಹಾಗೂ 1, ಏಪ್ರಿಲ್ 2005 ರ ನಂತರ ಜನಿಸಿರಬಾರದು.
- ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ಕೆಲವು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ.
- ಎಲ್ಲ ವರ್ಗಗಳ ಅಭ್ಯರ್ಥಿಗಳು: ರೂ. 800/- + 18% GST ಪಾವತಿಸಬೇಕಾಗುತ್ತದೆ
ವೇತನ ಶ್ರೇಣಿ:
- ವರ್ಗ 1 ರ ನಗರಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 4,98,108/- ಸಂಭಾವನೆಯನ್ನು ನೀಡಲಾಗುವುದು.
- ವರ್ಗ 2 ರ ನಗರಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 4,78,908/- ಸಂಭಾವನೆಯನ್ನು ನೀಡಲಾಗುವುದು.
- ವರ್ಗ 3 ರ ನಗರಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 4,64,508/- ಸಂಭಾವನೆಯನ್ನು ನೀಡಲಾಗುವುದು.
- ಇವುಗಳ ಜೊತೆಗೆ ಪ್ರತಿ ಪ್ರತಿ ಕೆಲಸದ ದಿನಕ್ಕೆ 210 ರೂಪಾಯಿಗಳಂತೆ ಊಟದ ಕೂಪನ್ ಸೌಲಭ್ಯಗಳು ಇರುತ್ತದೆ. ಹಾಗೂ ಸಿಬ್ಬಂದಿ ವಸತಿ ಸಾಲ ಯೋಜನೆ ಹಾಗೂ ಗ್ರಾಚುಯಿಟಿ ಕೂಡ ಲಭ್ಯವಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅಭ್ಯರ್ಥಿಗಳು ಮೊದಲು LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ನ್ಯೂ ರಿಜಿಸ್ಟ್ರೇಷನ್ ಕ್ಲಿಕ್ ಮಾಡಿ ನಿಮ್ಮ ಹೆಸರು, ಈ ಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಅನ್ನು ನಮೂದಿಸಿ.
- ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
- ನಂತರ ನಿಮ್ಮ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಿಗದಿತ ಹಸ್ತ ಪ್ರತಿಯನ್ನು ಹಾಗೂ ಎಡಗೈ ಹೆಬ್ಬೆರಳಿನ ಗುರುತನ್ನು ಅಪ್ಲೋಡ್ ಮಾಡಿ.
- ನೇಮಕಾತಿಗೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ:
ಆನ್ಲೈನ್ ಪರೀಕ್ಷೆಯು ವಸ್ತುನಿಷ್ಠ ಮಾದರಿಯಲ್ಲಿ ಒಟ್ಟು 200 ಅಂಕಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆಗಳು ಕಾಲಾವಕಾಶ ಇರುತ್ತದೆ. ಈ ಒಂದು ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆ, ಕಂಪ್ಯೂಟರ್ ಕೌಶಲ್ಯಗಳು, ಸಾಮಾನ್ಯ ಅರಿವು, ತಾರ್ಕಿಕ ಚಿಂತನೆ ಸಂಖ್ಯಾತ್ಮಕ ಸಾಮರ್ಥ್ಯಗಳ ಕುರಿತು ತಲಾ 40 ಅಂಕಗಳ ಪ್ರಶ್ನೆಗಳು ಇರುತ್ತದೆ. ಹಾಗೆಯೇ ಪ್ರತಿ ತಪ್ಪು ಉತ್ತರಕ್ಕೆ 0.25 ನೆಗೆಟಿವ್ ಅಂಕಗಳು ಇರುತ್ತದೆ.
- ಸಂದರ್ಶನ:
ಆನ್ಲೈನ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಅಂತಿಮ ಆಯ್ಕೆ:
ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 16-04-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 16-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಕೆಲಸ ಮಾಡುವುದು ಕೇವಲ ಒಂದು ಉದ್ಯೋಗ ಮಾತ್ರ ಆಗಿರದೆ ಗೌರವಾನ್ವಿತ ವೃತ್ತಿಜೀವನವಾಗಿದೆ. ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಆಸಕ್ತಿ ಹೊಂದಿದ್ದರೆ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- SSC: ರೂ. 1,51,100/- ವೇತನ! 3000+ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ Apply ಮಾಡಿ
- Vikas Bank: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ! ಏಪ್ರಿಲ್ 24 ಕೊನೆಯ ದಿನಾಂಕ
- Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ
- BMRCL: ರೂ. 2 ಲಕ್ಷ ವೇತನ! ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ