ಕಾರ್ಮಿಕರ (Labour) ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ! ದಿನವಿಡೀ ನಿರ್ಮಾಣ ಕಾರ್ಯದಲ್ಲೇ ತೊಡಗಿಕೊಂಡಿರುವ ಪರಿಶ್ರಮ ಪಡುವ ನಿರ್ಮಾಣ ಕಾರ್ಮಿಕರು ಇನ್ನು ಮುಂದೆ ತಮ್ಮ ಮಕ್ಕಳ ಶೈಕ್ಷಣಿಕ ಖರ್ಚುಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಸರ್ಕಾರವು ಕಾರ್ಮಿಕರ ಮಕ್ಕಳಿಗೆ ಬೃಹತ್ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದೆ.
Scholarship for Labourers’ Children
ಆರ್ಥಿಕ ಸಮಸ್ಯೆಯಿಂದಾಗಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರವು ಈ ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕಾರ್ಮಿಕರ ಮೇಲಿನ ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುವ ಪ್ರಯತ್ಮ ಮಾಡಿದೆ.
ಈ ಒಂದು ಯೋಜನೆಯಡಿಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಈ ಒಂದು ಶೈಕ್ಷಣಿಕ ನೆರವು ಸಿಗಲಿದ್ದು, ಇದು ಕೇವಲ ಹಣಕಾಸಿನ ನೆರವು ಮಾತ್ರವಲ್ಲದೆ, ಕಾರ್ಮಿಕರ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಕಾರ್ಮಿಕ ಮಕ್ಕಳ ಶೈಕ್ಷಣಿಕ ಧನಸಹಾಯ ಯೋಜನೆ |
| ಅರ್ಹ ಫಲಾನುಭವಿಗಳು | ಕಾರ್ಮಿಕರ ಮಕ್ಕಳು |
| ವಿದ್ಯಾರ್ಥಿವೇತನದ ಒಟ್ಟು ಮೊತ್ತ | ರೂ. 60,000 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಯೋಜನೆಯ ಉದ್ದೇಶ:
- ಶೈಕ್ಷಣಿಕ ಪ್ರೋತ್ಸಾಹ:
ಹಣಕಾಸಿನ ಸಮಸ್ಯೆಯಿಂದ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಆರ್ಥಿಕ ನೆರವನ್ನು ಒದಗಿಸುವುದು. ಇದರಿಂದಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ವೆಚ್ಚವನ್ನು ಭರಿಸುವ ಕುರಿತು ಚಿಂತಿಸದೆ ನಿಶ್ಚಿತೆಯಿಂದ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ.
- ಸಮಾನವಕಾಶವನ್ನು ಕಲ್ಪಿಸುವುದು:
ಕಾರ್ಮಿಕರ ಮಕ್ಕಳು ಕೇವಲ ಅಸಂಘಟಿತ ವಲಯದ ಕೆಲಸಕ್ಕೆ ಮಾತ್ರ ಸೀಮಿತವಾಗಿರದೆ, ಉತ್ತಮ ಶಿಕ್ಷಣವನ್ನು ಪಡೆದು ಒಳ್ಳೆಯ ಉದ್ಯೋಗವನ್ನು ಪಡೆದು ಗೌರವಯುತ ಜೀವನವನ್ನು ನಡೆಸಲು ಅವಕಾಶ ಕಲ್ಪಿಸುವುದು.
- ಆರ್ಥಿಕ ಹೊರೆ ಕಡಿಮೆ ಮಾಡುವುದು:
ಸಾಕಷ್ಟು ಬಡ ಕಾರ್ಮಿಕರು ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸಲು ಕಷ್ಟಪಡುತ್ತಾರೆ. ಅಂತಹ ಕಾರ್ಮಿಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸಲು ರೂ. 60,000 ದ ವರೆಗೆ ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು.
- ಆಧುನಿಕ ಶಿಕ್ಷಣಕ್ಕೆ ಒತ್ತು ನೀಡುವುದು:
ಕಾರ್ಮಿಕರ ಮಕ್ಕಳು ಇಂಜಿನಿಯರಿಂಗ್, ಐಟಿಐ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿ, ಖಾಯಂ ಉದ್ಯೋಗವನ್ನು ಪಡೆದುಕೊಳ್ಳುವಂತೆ ಮಾಡುವುದು.
ಯೋಜನೆಯ ಅನುಕೂಲಗಳು:
- ವಿದ್ಯಾರ್ಥಿಗಳು ತಮ್ಮ ಕನಸಿನ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿವೇತನವು ನೆರವಾಗಲಿದೆ.
- ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಶಿಕ್ಷಣಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನವನ್ನು ನಿಗದಿಪಡಿಸಿರುವುದರಿಂದ ವಿವಿಧ ಕೋರ್ಸ್ ಗಳಿಗೆ ಹೆಚ್ಚುವರಿ ಶುಲ್ಕಗಳಿದ್ದರೂ ಕೂಡ ಅವುಗಳನ್ನು ಭರಿಸಲು ಸಹಾಯವಾಗುತ್ತದೆ.
- ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಲ್ಲಿ ಅಂದರೆ 5 ನೇ ತರಗತಿಯಿಂದ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ವರೆಗೂ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದಾಗಿದೆ.
- ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಪೂರಗೊಳಿಸುವ ವರೆಗೂ ಈ ಒಂದು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದಾಗಿದ್ದು, ಈ ಯೋಜನೆಯಡಿಯಲ್ಲಿ ಸಿಗುವ ಸಹಾಯಧನವು ನೇರವಾಗಿ ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ವಿದ್ಯಾರ್ಥಿವೇತನದ ಮೊತ್ತದ ವಿವರ:
- ಪದವಿ ಮತ್ತು ಡಿಪ್ಲೊಮಾ ಕೋರ್ಸ್ ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ರೂ. 10,000 ದಿಂದ ರೂ. 20,000 ದ ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
- ಸ್ನಾತಕೋತ್ತರ ಪದವಿಯನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ರೂ. 30,000 ದಿಂದ ರೂ. 50,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
- ಇಂಜಿನಿಯರಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ರೂ. 40,000 ದಿಂದ ರೂ. 50,000 ದ ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
- ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ರೂ. 60,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು:
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಮಕ್ಕಳ ಪೋಷಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು.
- ಕಾರ್ಮಿಕರ ಕಾರ್ಡ್ ಪ್ರಸ್ತುತ ಚಾಲ್ತಿಯಲ್ಲಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ನಿಗದಿತ ಮಿತಿಗಿಂತ ಕಡಿಮೆ ಇರಬೇಕು.
- ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದುಕೊಂಡಿರಬೇಕು.
- ವಿದ್ಯಾರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಪೋಷಕರ ಲೇಬರ್ ಕಾರ್ಡ್
- ಪ್ರಸ್ತುತ ಶಾಲಾ ಅಥವಾ ಕಾಲೇಜಿನ ಶುಲ್ಕ ರಶೀದಿ
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ಕಾರ್ಮಿಕರ ವೇತನ ದೃಢೀಕರಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ವ್ಯಾಸಂಗ ದೃಢೀಕರಣ ಪತ್ರ
- ಹಾಗೂ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಷಿಪ್ ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕೆಳಗೆ ನೀಡಲಾದ ಹಂತವನ್ನು ಅನುಸರಿಸಿ ಅರ್ಜಿ ಸಲ್ಲಿಸಿ.
- ಅರ್ಹ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಂತರ ಅಲ್ಲಿ ನೀಡಲಾದ ಸ್ಕಾಲರ್ಷಿಪ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ವಿದ್ಯಾರ್ಥಿಗಳ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ತರಗತಿ ಅಥವಾ ಕೋರ್ಸ್ ಗಳ ವಿವರವನ್ನು ಭರ್ತಿಮಾಡಿ.
- ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ಸೂಚನೆ:
- ಮುಖ್ಯವಾಗಿ ಪೋಷಕರ ಕಾರ್ಮಿಕರ ಕಾರ್ಡ್ ಚಾಲ್ತಿಯಲ್ಲಿರಬೇಕು. ಹಾಗಾಗಿ ಪ್ರತಿ ವರ್ಷ ಲೇಬರ್ ಕಾರ್ಡ್ ಅನ್ನು ನವೀಕರಿಸಿಕೊಳ್ಳಿ.
- ಒಂದು ಶೈಕ್ಷಣಿಕ ವರ್ಷದಲ್ಲಿ ಒಂದೇ ಒಂದು ಯೋಜನೆಯಡಿಯಲ್ಲಿ ಮಾತ್ರ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು.
- ಅರ್ಜಿ ಸಲ್ಲಿಸುವ ನೀಡಿರುವ ಎಲ್ಲ ದಾಖಲೆಗಳು ಸರಿಯಾಗಿರಬೇಕು ಇಲ್ಲದ್ದಿದ್ದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ಇಲ್ಲದ್ದಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ.
- ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಮಾತ್ರ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಅಂತಿಮ ಮಾತು:
ಕಾರ್ಮಿಕರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಕಾರ್ಮಿಕರ ಮಕ್ಕಳಿಗೆ ಕೋರ್ಸ್ ಗಳಿಗೆ ಅನುಗುಣವಾಗಿ ವಿದ್ಯಾರ್ಥಿವೇತನವನ್ನು ನೀಡುವುದಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ನೀವು ಕೂಲಿ ಕಾರ್ಮಿಕರಾಗಿದ್ದು, ನಿಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಆರ್ಥಿಕ ನೆರವು ಅಗತ್ಯವಾಗಿದ್ದರೆ ಈ ಒಂದು ಯೋಜನೆಗೆ ಅರ್ಜಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಿ.