ನಮಸ್ಕಾರ ರೈತರೇ, ನಿಮ್ಮ ಕೃಷಿ ಭೂಮಿಗೆ ಸರಿಯಾದ ನೀರಾವರಿ ಸೌಲಭ್ಯಗಳಿಲ್ಲವೇ? ನೀವು ಮಳೆಯನ್ನೇ ನಂಬಿಕೊಂಡು ಕೃಷಿ ಚಟುವಟಿಕೆಯನ್ನು ನಡೆಸುತಿದ್ದೀರಾ? ನೀರಿನ ಅಭಾವದಿಂದಾಗಿ ಸರಿಯಾದ ಇಳುವರಿ ಸಿಗುತ್ತಿಲ್ಲವೇ? ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ.
Free Borewell for Farmers
ಕರ್ನಾಟಕ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗೆಂದೇ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಒಂದು ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ನಮ್ಮ ದೇಶವು ಕೃಷಿ ಪ್ರಧಾನವಾಗಿದ್ದು, ಇಲ್ಲಿನ ಸಾಕಷ್ಟು ರೈತರು ಕೃಷಿಯನ್ನೇ ತಮ್ಮ ಜೀವನಾಧಾರವನ್ನಾಗಿಸಿಕೊಂಡಿದ್ದಾರೆ.
ಮಳೆಯ ನೀರಿನ ಮೇಲೆ ಅವಲಂಬಿತರಾಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಹಾಗೂ ಸ್ಥಿರವಾದ ನೀರಾವರಿ ಸೌಲಭ್ಯವನ್ನು ಕಲ್ಪಿಸುವುದು ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಗಂಗಾ ಕಲ್ಯಾಣ ಯೋಜನೆಯ ಅವಲೋಕನ:
| ಯೋಜನೆಯನ್ನು ಅನುಷ್ಠಾನ ಗೊಳಿಸಿದ ಸರ್ಕಾರ | ಕರ್ನಾಟಕ ಸರ್ಕಾರ |
| ಯೋಜನೆಯ ಹೆಸರು | ಗಂಗಾ ಕಲ್ಯಾಣ ಯೋಜನೆ |
| ಅರ್ಹ ಫಲಾನುಭವಿಗಳು | ಸಣ್ಣ ಮತ್ತು ಅತಿ ಸಣ್ಣ ರೈತರು |
| ಯೋಜನೆಯ ಲಾಭ | ಉಚಿತ ಬೋರ್ವೆಲ್ ಕೊರೆಸಿ ವಿದ್ಯುತ್ ಸಂಪರ್ಕ ಕಲ್ಪಿಸುವುದು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಗಂಗಾ ಕಲ್ಯಾಣ ಯೋಜನೆ ಎಂದರೇನು?
ಗಂಗಾ ಕಲ್ಯಾಣ ಯೋಜನೆಯು ಕರ್ನಾಟಕ ಸರ್ಕಾರವು ಜಾರಿಗೊಳಿಸಿದ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು, ಈ ಯೋಜನೆಯು ಮುಖ್ಯವಾಗಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಹಾಗೂ ಇನ್ನಿತರ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಿ, ಮೋಟರ್ ಅಳವಡಿಸಿ, ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಯೋಜನೆಯಾಗಿದೆ. ಕನಿಷ್ಠ 1.2 ಎಕ್ಕರೆಯಿಂದ ಗರಿಷ್ಟ 5 ಎಕ್ಕರೆ ಜಮೀನನ್ನು ಹೊಂದಿರುವ ರೈತರು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಯೋಜನೆಯ ಉದ್ದೇಶ:
- ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ:
ತಮ್ಮ ಸ್ವಂತ ಖರ್ಚಿನಲ್ಲೇ ಬೋರ್ವೆಲ್ ಕೊರೆಸಲು ಸಾಧ್ಯವಿಲ್ಲದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ಬೋರ್ವೆಲ್ ಕೊರೆಸಿಕೊಡುವ ಮೂಲಕ ನೀರಾವರಿ ಸೌಲಭ್ಯವನ್ನು ಕಲ್ಪಿಸಿ ಸ್ಥಿರ ಆದಾಯವನ್ನು ಗಳಿಸಲು ಅವಕಾಶ ಕಲ್ಪಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವುದು.
- ಶಾಶ್ವತ ನೀರಾವರಿ ಸೌಲಭ್ಯಗಳನ್ನು ಒದಗಿಸುವುದು:
ಮಳೆಯ ನೀರನ್ನೇ ನಂಬಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಸಾಕಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಬೋರ್ವೆಲ್ ಕೊರೆಸಿಕೊಡುವ ಮೂಲಕ ಶಾಶ್ವತ ನೀರಾವರಿ ಸಂಪರ್ಕವನ್ನು ಕಲ್ಪಿಸಿಕೊಡುವುದು. ಇದರಿಂದಾಗಿ ರೈತರು ವರ್ಷದ ಎಲ್ಲಾ ಸಮಯದಲ್ಲೂ ಕೂಡ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬಹುದಾಗಿದೆ.
- ಆಧುನಿಕ ಕೃಷಿ ತಂತಜ್ಞಾನಕ್ಕೆ ಪ್ರೋತ್ಸಾಹ:
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಿಕೊಡುವ ಜೊತೆಗೆ ತಮ್ಮ ಕೃಷಿ ಚಟುವಟಿಕೆಯಲ್ಲಿ ಹನಿ ನೀರಾವರಿಯಂತಹ ಆಧುನಿಕ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವುದು.
- ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು:
ನೀರಿನ ಕೊರತೆಯಿಂದ ವರ್ಷಕ್ಕೆ ಕೇವಲ ಒಂದೇ ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ಶಾಶ್ವತ ನೀರಾವರಿ ಸಂಪರ್ಕವನ್ನು ಕಲ್ಪಿಸುವ ಮೂಲಕ ವರ್ಷವಿಡೀ ಬೆಳೆಗಳನ್ನು ಬೆಳೆಯಲು ಅನುವು ಮಾಡಿಕೊಡುವುದು. ಇದರಿಂದಾಗಿ ರೈತರು ಬೆಳೆದ ಬೆಳೆಗಳ ಇಳುವರಿಯು ಹೆಚ್ಚುತ್ತದೆ ಹಾಗೂ ಹೆಚ್ಚಿನ ಆದಾಯವನ್ನು ಗಳಿಸಬಹುದಾಗಿದೆ.
ಯೋಜನೆಯಡಿಯಲ್ಲಿ ಸಿಗುವ ಪ್ರಮುಖ ಸೌಲಭ್ಯಗಳು:
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಾಕಷ್ಟು ಸೌಲಭ್ಯಗಳು ದೊರೆಯಲಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ಮೊದಲ ಹಂತದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗುರುತಿಸಲ್ಪಟ್ಟ ತಮ್ಮ ಜಮೀನಿನಲ್ಲಿ ವೈಜ್ಞಾನಿಕವಾಗಿ ಬೋರ್ವೆಲ್ ಗಳನ್ನು ಕೊರೆಸಿಕೊಡಲಾಗುವುದು.
- ನಂತರ ಉತ್ತಮ ಗುಣಮಟ್ಟದ ಪಂಪ್ಸೆಟ್ ಹಾಗೂ ಸಬ್ಮರ್ಸಿಬಲ್ ಪ್ಯಾನಲ್ ಬೋರ್ಡ್ ಗಳನ್ನು ನೀಡಲಾಗುವುದು.
- ಕೊರೆಸಿದ ಬೋರ್ವೆಲ್ ಗೆ ಹೆಸ್ಕಾಂ ಅಥವಾ ಮೆಸ್ಕಾಂ ಮೂಲಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡಲಾಗುವುದು.
ಈ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಯಾವುದೇ ವೆಚ್ಚವನ್ನು ಭರಿಸುವ ಅಗತ್ಯವಿಲ್ಲ.
ಯೋಜನೆಯಡಿಯಲ್ಲಿ ಸಿಗುವ ಸಹಾಯಧನ ವಿವರ:
ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಿಗೆ ಅನುಗುಣವಾಗಿ ಸಹಾಯಧನವನ್ನು ನಿಗದಿಪಡಿಸಿದೆ.
- ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ರೂ. 3.75 ಲಕ್ಷ ಸಹಾಯಧನವನ್ನು ನಿಗದಿಪಡಿಸಿದೆ.
- ಇತರೆ ಜಿಲ್ಲೆಗಳಿಗೆ ರೂ. 2.25 ಲಕ್ಷ ಸಹಾಯಧನವನ್ನು ನಿಗದಿಪಡಿಸಿದೆ.
ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಫಲಾನುಭವಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಹಾಗೂ ಇನ್ನಿತರ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದವರಾಗಿರಬೇಕು.
- ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
- ಅರ್ಜಿದಾರರು ಕನಿಷ್ಠ ವರ್ಷದಿಂದ ಗರಿಷ್ಟ ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷ ಮೀರಿರಬಾರದು.
- ಫಲಾನುಭವಿಗಳು ಕನಿಷ್ಠ 1 ಎಕ್ಕರೆ 20 ಕುಂಟೆ ಎಕ್ಕರೆಯಿಂದ 5 ಎಕ್ಕರೆ ಜಮೀನನ್ನು ಹೊಂದಿರಬೇಕು. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಗಳಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರು ಕನಿಷ್ಠ 1 ಜಮೀನನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಇತ್ತೀಚಿನ ಆರ್,ಟಿ.ಸಿ ಪ್ರತಿ
- ಸಣ್ಣ ಮತ್ತು ಅತಿ ಸಣ್ಣ ರೈತರ ಹಿಡುವಳಿದಾರ ಪ್ರಮಾಣಪತ್ರ
- ಭೂ ಕಂದಾಯ ಪಾವತಿಸಿದ ರಶೀದಿ
- ಸ್ವಯಂ ಘೋಷಣಾ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಅರ್ಹ ಮತ್ತು ಆಸಕ್ತ ಫಲಾನುಭವಿಗಳು ಸೇವಾ ಸಿಂಧೂ ಅಥವಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
- ನಿಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಗಂಗಾ ಕಲ್ಯಾಣ ಯೋಜನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ,
- ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಜಮೀನಿನ ವಿವರ, ಬ್ಯಾಂಕ್ ಕತೆಯ ವಿವರವನ್ನು ನಿಖರವಾಗಿ ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದ್ದು, ಬಡ ಮತ್ತು ಮಾಧ್ಯಮ ವರ್ಗಗಳ ರೈತರಿಗೆ ಶಾಶ್ವತ ನೀರಾವರಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ನೀವು ಕೂಡ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರವನ್ನು ಹೊಂದಿದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಮ್ಮ ಜಿಲ್ಲೆಗೆ ಅನುಗುಣವಾಗಿ ಸಹಾಯಧನವನ್ನು ಪಡೆದುಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- Student Reward: ರೂ. 6000 – 12,000 ಸಹಾಯಧನ! ವಿದ್ಯಾರ್ಥಿಗಳಿಗೆ ಸರ್ಕಾರದ ದೊಡ್ಡ ಗಿಫ್ಟ್!
- Labour: ₹60,000 ಸ್ಕಾಲರ್ಶಿಪ್! ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗಿಫ್ಟ್! ಇಂದೇ ಅಪ್ಲೈ ಮಾಡಿ
- Scheme: ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ₹2000 + 3 ಉಚಿತ ಸಿಲಿಂಡರ್!