PACS: ಕೃಷಿ ಪತ್ತಿನ ಸಹಕಾರ ಸಂಘ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ! ಇಂದೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೆಂಗಳೂರಿನಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿದ್ದಿರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಬೆಂಗಳೂರಿನ ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2026 ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

PACS Recruitment in Kannada

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬಿಕಾಂ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 15-05-2026 ಕೊನೆಯ ದಿನಾಂಕವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗೆಯೇ ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

PACS

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಗಳ ಹೆಸರು ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ನಿಯಮಿತ
ಹುದ್ದೆಗಳ ಹೆಸರು ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳು
ಹುದ್ದೆಗಳ ಸಂಖ್ಯೆ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ ಬ್ಯಾಟರಾಯನಪುರ – ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ವಿವರ:

ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ನೇಮಕಾತಿ ಅಧಿಸೂಚನೆಯಲ್ಲಿ, ಪ್ರಮುಖ ಎರಡು ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಅಕೌಂಟೆಂಟ್
  • ಅಸಿಸ್ಟೆಂಟ್ ಗೋಡೌನ್ ಕೀಪರ್

ಶೈಕ್ಷಣಿಕ ಅರ್ಹತೆ:

  • ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿ ಹೊಂದಿರಬೇಕು.
  • ಅಕೌಂಟೆಂಟ್ ವಿಭಾಗದಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ವಿಶೇಷವಾಗಿ ಟ್ಯಾಲಿ, ಹಾಗೂ ಸಹಕಾರ ಸಂಘಗಳಲ್ಲಿ ಬಳಸುವ ಸಾಫ್ಟ್ವೇರ್ ಬಗ್ಗೆ ಮಾಹಿತಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಜೊತೆಗೆ ಎಂಎಸ್ ಆಫೀಸ್ ಹಾಗೂ ಇಂಟರ್ನೆಟ್ ಬಳಕೆಯ ಬಗ್ಗೆ ಮಾಹಿತಿ ಹೊಂದಿರಬೇಕು.
  • ಕನ್ನಡ ಭಾಷೆಯನ್ನು ಓದಲು ಹಾಗೂ ಬರೆಯಲು ಸ್ಪಷ್ಟವಾಗಿ ಬರಬೇಕು.

ವಯೋಮಿತಿ ವಿವರ:

ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 40 ವರ್ಷ
  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳಿಗೆ: 38 ವರ್ಷ

ಅರ್ಜಿ ಶುಲ್ಕ:

ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ನೇಮಕಾತಿ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ನಿಖರವಾದ ಮಾಹಿತಿ ನೀಡಿಲ್ಲ. ಹಾಗಾಗಿ ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೆ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷದ ಸೇವಾ ಅವಧಿಯಲ್ಲಿ ಮಾಸಿಕ ರೂ. 21,000 ವೇತನವನ್ನು ನೀಡಲಾಗುತ್ತದೆ. ಮೊದಲ ವರ್ಷದ ಯಶಸ್ವಿ ಸೇವೆಯ ನಂತರ ಅಭ್ಯರ್ಥಿಗಳಿಗೆ ಸಹಕಾರಿ ಸಂಘಗಳ ನಿಬಂಧನೆಗಳ ಪ್ರಕಾರ ವೇತನವನ್ನು ಪರಿಷ್ಕರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಐಡಿ ಪ್ರೂಫ್, ರೆಸೂಮ್ಬಿ, ಕಾಂ ಅಂಕಪಟ್ಟಿ, ಆಧಾರ್ ಕಾರ್ಡ್, ಕಂಪ್ಯೂಟರ್ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಿದ್ಧ ಪಡಿಸಿಕೊಂಡು ನಂತರ ಕಚೇರಿಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದು ಅಗತ್ಯ ವಿವರಗಳನ್ನು ಭರ್ತಿಮಾಡಿ ನೇರವಾಗಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಸಂಘದ ಕಚೇರಿಗೆ ಸಲ್ಲಿಸಿ.
  • ಅರ್ಜಿ ಸಲ್ಲಿಸುವ ವಿಳಾಸ: ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಬಿಬಿ ರಸ್ತೆ, ಬ್ಯಾಟರಾಯನಪುರ, ಬೆಂಗಳೂರು – 560 092

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ಬಿಕಾಂ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಅಭ್ಯರ್ಥಿಗಳು ಹೊಂದಿರುವ ಕಂಪ್ಯೂಟರ್ ಜ್ಞಾನ ಹಾಗೂ ಅಕೌಂಟಿಂಗ್ ಕೌಶಲ್ಯವನ್ನು ಪರಿಶೀಲನೆ ನಡೆಸಲಾಗುತ್ತದೆ. ಅಂತರ ಅಂತಿಮವಾಗಿ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ನಿರ್ವಹಿಸಬೇಕಾದ ಪ್ರಮುಖ ಪಾತ್ರಗಳು:

  • ಅಕೌಂಟೇನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಸಹಕಾರಿ ಸಂಘದ ಆರ್ಥಿಕ ವ್ಯವಹಾರವನ್ನು ನಿರ್ವಹಿಸಬೇಕಾಗುತ್ತದೆ.
  • ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ದಾಸ್ತಾನು ಹಾಗೂ ಕೃಷಿ ಉತ್ಪನ್ನಗಳ ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ ಈಗಾಗಲೇ ಆರಂಭಗೊಂಡಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಕೌಂಟೆಂಟ್ ಹಾಗೂ ಅಸಿಸ್ಟೆಂಟ್ ಗೋಡೌನ್ ಕೀಪರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸಿಸುತ್ತಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment