CESCOM: ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-05-2026

ನಮಸ್ಕಾರ ಸ್ನೇಹಿತರೇ, ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ 2026-27 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

CESC Recruitment 2026 Kannada

ಯಾವುದೇ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ವೇತನ ಎಷ್ಟು? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

CESC

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು
ಹುದ್ದೆಯ ಹೆಸರು ಪದವೀಧರ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್, ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ ಒಟ್ಟು 200 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ ಮಾತ್ರ
ಉದ್ಯೋಗ ಸ್ಥಳ ಸಿ.ಇ.ಎಸ್.ಸಿ ವ್ಯಾಪ್ತಿಯ ಜಿಲ್ಲೆಗಳು, ಮೈಸೂರು

ಹುದ್ದೆಯ ವಿವರ:

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

  • ಒಟ್ಟು 80 ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಈ ಕೆಳಗೆ ವಿಂಗಡಿಸಲಾಗಿದೆ.
    • ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಅಪ್ರೆಂಟಿಸ್: 78 ಹುದ್ದೆಗಳು
    • ಸಿವಿಲ್ ಇಂಜಿನಿಯರಿಂಗ್: 02 ಹುದ್ದೆಗಳು
  • ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್: ಒಟ್ಟು 65 ಹುದ್ದೆಗಳು
    • ಬಿಕಾಂ : 30 ಹುದ್ದೆಗಳು
    • ಬಿ.ಬಿ.ಎ : 10 ಹುದ್ದೆಗಳು
    • ಬಿ.ಸಿ.ಎ : 10 ಹುದ್ದೆಗಳು
    • ಬಿ.ಎಸ್ಸಿ : 08 ಹುದ್ದೆಗಳು
    • ಬಿ.ಎ : 07 ಹುದ್ದೆಗಳು
  • ಟೆಕ್ನಿಷಿಯನ್ ಅಪ್ರೆಂಟಿಸ್: 55 ಹುದ್ದೆಗಳು
    • ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಅಪ್ರೆಂಟಿಸ್: 53 ಹುದ್ದೆಗಳು
    • ಸಿವಿಲ್ ಇಂಜಿನಿಯರಿಂಗ್: 02 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪದವೀಧರ ಅಪ್ರೆಂಟಿಸ್:
    • ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
  • ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್:
    • ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಅಥವಾ ಬಿ.ಎ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಡಿಪ್ಲೊಮಾ ಅಪ್ರೆಂಟಿಸ್:
    • ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ 3 ವರ್ಷಗಳ ಡಿಪ್ಲೊಮಾ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಟ ವಯೋಮಿತಿಯನ್ನು ಅಪ್ರೆಂಟಿಸ್ ಶಿಪ್ ಕಾಯ್ದೆಯನ್ವಯ ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಮೀಸಲಾತಿ ನಿಯಮಗಳ ಅನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೆ ನೇರವಾಗಿ ನ್ಯಾಷನಲ್ ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಸ್ಕೀಮ್ ಪೋರ್ಟಲ್ ಮೂಲಕ ರಿಜಿಸ್ಟರ್ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ವೇತನ ಶ್ರೇಣಿ:

ಚಾಮುಂಡೇಶ್ವವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಈ ಕೆಳಗೆ ನೀಡಿರುವಂತೆ ಅತ್ಯಾಕರ್ಷಕ ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.

  • ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: ಮಾಸಿಕ ರೂ. 12,300/-
  • ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್: ಮಾಸಿಕ ರೂ. 12,300/-
  • ಡಿಪ್ಲೊಮಾ ಅಪ್ರೆಂಟಿಸ್: ಮಾಸಿಕ ರೂ. 10,900/-

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ಮೊದಲು ನ್ಯಾಷನಲ್ ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಸ್ಕೀಮ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಹೊಸ ಅಭ್ಯರ್ಥಿಗಳು ಸ್ಟೂಡೆಂಟ್ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ ಎಲ್ಲ ಅಗತ್ಯ ವಿವರಗಳನ್ನು ಭರ್ತಿ ಮಾಡಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಂಡ ನಂತರ ಲಾಗಿನ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿಮಾಡಿ.
  • ಜೊತೆಗೆ ಅಭ್ಯರ್ಥಿಗಳ ಸಹಿ, ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಪ್ರೊಫೈಲ್ ಪೂರ್ಣಗೊಳಿಸಿ.
  • ನಂತರ, ಅಪ್ಲೈ ಎಗೈನ್ಸ್ಟ್ ಅಡ್ವರ್ಟೈಸ್ಡ್ ವಾಕ್ಯಾನ್ಸಿಸ್ ವಿಭಾಗಕ್ಕೆ ಹೋಗಿ ಅಲ್ಲಿ ಚಾಮುಂಡೇಶ್ವರಿ ಎಲೆಕ್ರಿಸಿಟಿ ಸಪ್ಲೈ ಕಾರ್ಪೋರೇಶನ್ ಲಿಮಿಟೆಡ್ ಎಂದು ಸರ್ಚ್ ಮಾಡಿ.
  • ನಂತರ ಅಲ್ಲಿ ಕಾಣುವ ಅಪ್ಲೈ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ತಮ್ಮ ಪದವಿ ಮತ್ತು ಡಿಪ್ಲೊಮಾದಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವರು ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು NATS ಪೋರ್ಟಲ್ ಮೂಲಕ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

ದಾಖಲೆಗಳ ಪರಿಶೀಲನೆ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆದ ಅಭ್ಯರ್ಥಿಗಳು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಗೆ ಖುದ್ದಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ08-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29-05-2026
ಶಾರ್ಟ್ ಲಿಸ್ಟ್ ಪಟ್ಟಿಯನ್ನು ಪ್ರಕಟಿಸುವ ದಿನಾಂಕ 05-06-2026
ದಾಖಲೆಗಳನ್ನು ಪರಿಶೀಲಿಸುವ ದಿನಾಂಕ ಮತ್ತು ಸಮಯ 15-06-2026 – 19-06-2026 ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯ ವರಗೆ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 29-05-2026 ರ ಒಳಗೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದಿರೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ಪಡೆದುಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment