NIMHANS: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026 | ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಬೆಂಗಳೂರಿನ ಪ್ರತಿಷ್ಠಿತ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಧಿಸೂಚನೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

NIMHANS Recruitment 2026

ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಕಂಪ್ಯೂಟರ್ ಜ್ಞಾನ, ವೈದ್ಯಕೀಯ ಯೋಜನೆ ಹಾಗೂ ಡೇಟಾ ನಿರ್ವಹಣೆ ಕೆಲಸದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಮತ್ತು ಸಂಶೋಧನಾ ವಾತಾವರಣದಲ್ಲಿ ಕೆಲಸ ಮಾಡಲು ಅವಕಾಶ ದೊರೆಯಲಿದ್ದು, ಉತ್ತಮ ವೇತನದ ಜೊತೆಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಪಡೆದುಕೊಳ್ಳಬಹುದಾಗಿದೆ. ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳು ಪ್ರಸ್ತುತ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಇಮೇಲ್ ಮೂಲಕ ಅರ್ಜಿ ಸಲ್ಲಿಸಿ.

NIMHANS

ಹುದ್ದೆಯ ವಿವರಣಾತ್ಮಕ ನೋಟ:

ಸಂಸ್ಥೆಯ ಹೆಸರು ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು
ಹುದ್ದೆಗಳ ಹೆಸರು ಡೇಟಾ ಎಂಟ್ರಿ ಆಪರೇಟರ್
ಹುದ್ದೆಗಳ ಸಂಖ್ಯೆ 3 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು, ದೆಹಲಿ ಮತ್ತು ಪುದಚೇರಿ
ಅರ್ಜಿ ಸಲ್ಲಿಸುವ ವಿಧಾನ ಇಮೇಲ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಸ್ತುತ 2026 ನೇ ಸಾಲಿನಲ್ಲಿ ಬೆಗಳೂರು, ದೆಹಲಿ ಹಾಗೂ ಪುದಚೇರಿಯಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಒಂದು ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಒಪ್ಪಂದದ ಆಧಾರದ ಮೇಲೆ ನಡೆಯುತ್ತದೆ.

ಹುದ್ದೆಯ ವಿವರ:

ನಿಮ್ಹಾನ್ಸ್ ಸಂಸ್ಥೆಯು ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 3 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ನಿಮ್ಹಾನ್ಸ್, ಬೆಂಗಳೂರು1 ಹುದ್ದೆಗಳು
ಆರ್.ಎಂ.ಎಲ್, ನವದೆಹಲಿ 1 ಹುದ್ದೆಗಳು
ಜಿಪ್ಮರ್, ಪುದಚೇರಿ 1 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ:

  • ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಹೋಮಿಯೋಪತಿ, ಯುನಾನಿ, ಆಯುರ್ವೇದ, ಫಾರ್ಮಕಾಲಜಿ ಅಥವಾ ತತ್ಸಮಾನ ವೈದ್ಯಕೀಯ ಪದ್ಧತಿಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಇತರೆ ಕೌಶಲ್ಯಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಂಗ್ಲಿಷ್ ಭಾಷೆಯಲ್ಲಿ ಹೆಚ್ಚಿನ ಹಿಡಿತ ಇರಬೇಕು ಹಾಗೂ ಆಯಾ ಉದ್ಯೋಗ ಸ್ಥಳಕ್ಕೆ ಅನುಗುಣವಾದ ಪ್ರಾದೇಶಿಕ ಭಾಷೆಗಳ ಜ್ಞಾನವನ್ನು ಹೊಂದಿರಬೇಕು.
  • ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕನ್ನಡ ಹಾಗೂ ದೆಹಲಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಿಂದಿ ಹಾಗೂ ಪುದಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಮಿಳು ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ.
  • ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವಿಶೇಷವಾಗಿ ಎಂಎಸ್ ಆಫೀಸ್ ಬಗ್ಗೆ ಹಾಗೂ SPSS ಬೆಗ್ಗೆ ಹೆಚ್ಚಿನ ತಿಳುವಳಿಕೆ ಹೊಂದಿರಬೇಕು.
  • ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ನಿಮ್ಹಾನ್ಸ್ ಪ್ರಕಟಿಸಿರುವ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಈ ಒಂದು ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯುವುದರಿಂದ ವಯೋಮಿತಿ ಸಡಿಲಿಕೆ ಬೆಗ್ಗೆ ಅಧಿಕೃತವಾದ ಮಾಹಿತಿ ಲಭ್ಯವಿಲ್ಲ.

ಅರ್ಜಿ ಶುಲ್ಕದ ವಿವರ:

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಿದೆ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಡೇಟಾ ಎಂಟ್ರಿ ಆಪರೇಟರ್ ಆಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ವೇತನವನ್ನು ನಿಗದಿಪಡಿಸಲಾಗುತ್ತದೆ. ಈ ಹುದ್ದೆಯು ಆರಂಭದಲ್ಲಿ 6 ತಿಂಗಳ ಅವಧಿಗೆ ಇರುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆಗೆ ಅನುಗುಣವಾಗಿ ಕೊನೆಯಲ್ಲಿ ಗರಿಷ್ಟ 3 ವರ್ಷಗಳ ಅವಧಿಗೆ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಹಂತಗಳು ಈ ಕೆಳಕಂಡಂತಿದೆ.

  • ಆಸಕ್ತ ಅಭ್ಯರ್ಥಿಗಳು ನಿಮ್ಹಾನ್ಸ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ನಿಮ್ಮ ಇತ್ತೀಚಿನ ರೆಸೂಮ್ ಅನ್ನು ಸಿದ್ಧಪಡಿಸಿಕೊಳ್ಳಿ ಹಾಗೂ ಶೈಕ್ಷಣಿಕ ಪ್ರಮಾಣಪತ್ರ, ಜನ್ಮ ದಿನಾಂಕದ ಪುರಾವೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  • ನಂತರ ಈ ಎಲ್ಲ ದಾಖಲೆಗಳನ್ನು [email protected] ಇಮೇಲ್ ವಿಳಾಸಕ್ಕೆ ಕಳುಹಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಪರಿಶೀಲಿಸಿ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಸಂದರ್ಶನ ಅಥವಾ ಲಿಖಿತ ಪರೀಕ್ಷೆ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಇಮೇಲ್ ಮೂಲಕ ಸಂದರ್ಶನ ಅಥವಾ ಲಿಖಿತ ಪರೀಕ್ಷೆಗೆ ಕರೆಯಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

  • ದಾಖಲೆ ಪರಿಶೀಲನೆ:

ಕೊನೆಯದಾಗಿ ಲಿಖಿತ ಪರೀಕ್ಷೆಯಲ್ಲಿ ನಿಗದಿತ ಅಂಕವನ್ನು ಗಳಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಕರೆಯಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಸೂಚನೆ ಹೊರಡಿಸಿದ ದಿನಾಂಕ 04-05-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ04-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ನಿಮ್ಹಾನ್ಸ್ ಪ್ರಸ್ತುತ ಸಾಲಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇದು ಶಾಶ್ವತ ಸರ್ಕಾರಿ ಉದ್ಯೋಗವಲ್ಲ ಬದಲಾಗಿ ಒಪ್ಪಂದದ ಆಧಾರದ ಮೇಲೆ ನಡೆಯುವ ನೇಮಕಾತಿ ಆಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ ಇಂದೇ ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment