GESCOM: ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 5 ಕೊನೆಯ ದಿನಾಂಕ

ಕರ್ನಾಟಕ ರಾಜ್ಯದ ಪ್ರಮುಖ ವಿದ್ಯುತ್ ಸರಬರಾಜು ಸಂಸ್ಥೆಗಳಲ್ಲೊಂದಾಗಿರುವ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಸ್ತುತ 2026-27 ನೇ ಸಾಲಿನಲ್ಲಿ ಶಿಶಿಕ್ಷು ತರಬೇತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ವಲಯದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

GESCOM Recruitment 2026 in Kannada

ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ವಿದ್ಯುತ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 05-06-2026 ರ ಒಳಗೆ ನಿಗದಿತ ಇಲಾಖೆಗೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

GESCOM

ಹುದ್ದೆಯ ಕಿರು ನೋಟ:

ನೇಮಕಾತಿ ಸಂಸ್ಥೆ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುದ್ದೆಯ ಹೆಸರು ಪದವೀಧರ ಹಾಗೂ ಡಿಪ್ಲೊಮಾ ಅಪ್ರೆಂಟಿಸ್
ಹುದ್ದೆಯ ಸಂಖ್ಯೆ 275 ಹುದ್ದೆಗಳು
ಉದ್ಯೋಗ ಸ್ಥಳಜೆಸ್ಕಾಂ ವ್ಯಾಪ್ತಿ -ಗುಲ್ಬರ್ಗ
ತರಬೇತಿ ಅವಧಿ 1 ವರ್ಷ
ಅರ್ಜಿ ಸಲ್ಲಿಸುವ ಬಗೆ ಅಂಚೆ ಮೂಲಕ (ಆಫ್ಲೈನ್)

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 275 ಪದವೀಧರ ಹಾಗೂ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ವಿದ್ಯುತ್ ಕ್ಷೇತ್ರದಲ್ಲಿ ಆಡಳಿತಾತ್ಮಕ ಕಾರ್ಯ ಪದ್ಧತಿ ಹಾಗೂ ತಾಂತ್ರಿಕ ಅನುಭವ ಹೊಂದಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದು ಒಂದು ವರ್ಷದ ಶಿಶಿಕ್ಷು ತರಬೇತಿ ಆಗಿದ್ದು, ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಅತ್ಯಾಕರ್ಷಕ ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಒಟ್ಟು 275 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಡಿಪ್ಲೊಮಾ ಅಪ್ರೆಂಟಿಸ್ 100 ಹುದ್ದೆಗಳು
ಪದವೀಧರ ಅಪ್ರೆಂಟಿಸ್ 175 ಹುದ್ದೆಗಳು

ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದ್ದು ಅವುಗಳ ವಿವರ ಈ ಕೆಳಕಂಡಂತಿದೆ.

  • ಹಾಗೂ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಲ್ಲಿ 67 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಾಗೂ 33 ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
  • ಪದವೀಧರ ಅಪ್ರೆಂಟಿಸ್ ಹುದ್ದೆಗಳಲ್ಲಿ 118 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಾಗೂ 57 ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು ಅಥವಾ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ ಅಥವಾ ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು.
  • ಹಾಗೂ ಎಲ್ಲ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡವನ್ನು ಓದಲು ಹಾಗೂ ಬರೆಯಲು ಬರಬೇಕು.
  • ಅಭ್ಯರ್ಥಿಗಳು ಜನವರಿ 2022 ರ ನಂತರ ಉತ್ತೀರ್ಣರಾದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತದೆ.

ಗಮನಿಸಿ: “ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರು, ಅಥವಾ ತರಬೇತಿ ಪಡೆಯುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ ವಿವರ:

ಅಪ್ರೆಂಟಿಸ್ ಕಾಯ್ದೆ 1961 ರ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಸರ್ಕಾರದ ಮೀಸಲಾತಿ ನಿಯಮಗಳಿಗನುಗುಣವಾಗಿ ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಇಲಾಖೆಗೆ ಖುದ್ದಾಗಿ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಜೆಸ್ಕಾಂ ನ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಈ ಕೆಳಗೆ ನೀಡಿರುವ ಅತ್ಯಾಕರ್ಷಕ ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.

  • ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 8000/- ಸ್ಟೈಫಂಡ್ ನೀಡಲಾಗುತ್ತದೆ
  • ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 9000/- ಸ್ಟೈಫಂಡ್ ನೀಡಲಾಗುತ್ತದೆ.

ಅಗತ್ಯ ದಾಖಲೆಗಳು:

  • ಪದವಿ ಹಗೂ ಡಿಪ್ಲೊಮಾ ಪ್ರಮಾಣಪತ್ರ
  • SSLC ಅಂಕಪಟ್ಟಿ
  • ಶೈಕ್ಷಣಿಕ ಅಂಕಪಟ್ಟಿ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಆಧಾರ್ ಕಾರ್ಡ್
  • ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣಪತ್ರ
  • ಜನ್ಮ ದಿನಾಂಕ ಪ್ರಮಾಣಪತ್ರ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಮೊದಲು ಜೆಸ್ಕಾಂ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಹೆಸರು, ಪೋಷಕರ ಹೆಸರು, ವಿಳಾಸ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ ಅಪ್ಲಿಕೇಶನ್ ಫಾರ್ಮ್ ಮೇಲೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
  • SSLC ಅಂಕಪಟ್ಟಿ, ಪದವಿ ಹಾಗೂ ಡಿಪ್ಲೊಮಾದ ಪ್ರತಿ ಸೆಮಿಸ್ಟರ್ ಅಂಕಪಟ್ಟಿ, ಪದವಿ ಹಾಗೂ ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ನಂತರ ಇದನ್ನು ಒಂದು ಲಕೋಟೆಗೆ ಹಾಕಿ ಲಕೋಟೆಯ ಮೇಲೆ ‘2026-27ನೇ ಸಾಲಿನ ಶಿಶಿಕ್ಷು ಆಯ್ಕೆಗೆ ಪದವೀಧರರು/ ಡಿಪ್ಲೊಮಾ ಎಂದು ಬರೆಯಿರಿ.
  • ನಂತರ ಈ ಅಪ್ಲಿಕೇಶನ್ ಫಾರ್ಮ್ ಇರುವ ಲೋಕೋಟೆಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡುವ ಮೂಲಕ ಸಲ್ಲಿಸಿ
  • “ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಸಂಅ), ನಿಗಮ ಕಚೇರಿ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಸ್ಟೇಷನ್ ರಸ್ತೆ, ಕಲಬುರುಗಿ -585102.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೊಮಾದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸರ್ಕಾರದ ನಿಯಮಗಳಾದ ರೋಸ್ಟರ್ ಸಿಸ್ಟಮ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

  • ಕೊನೆಯ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ18-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಸ್ತುತ ಸಾಲಿನಲ್ಲಿ ಪದವೀಧರ ಅಪ್ರೆಂಟಿಸ್ ಹಾಗೂ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ವರ್ಷದ ಅವಧಿಯ ಶಿಶಿಕ್ಷು ತರಬೇತಿ ಆಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಿ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಬೇಕೆಂದಿದ್ದರೆ ಇಂದೇ ನಿಗದಿತ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment