ADCL: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ 2026! ಯಾವುದೇ ಪರೀಕ್ಷೆ ಇಲ್ಲ + ಅರ್ಜಿ ಶುಲ್ಕವಿಲ್ಲ

ನಮಸ್ಕಾರ ಸ್ನೇಹಿತರೆ, ಪದವಿಯನ್ನು ಮುಗಿಸಿ ಸರ್ಕಾರಿ ಸಂಸ್ಥೆಯಲ್ಲಿ ಗೌರಯುತ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದು ಆಕಾಂಕ್ಷೆ ಹೊಂದಿರುವ ಸಾವಿರಾರು ಉದ್ಯೋಗ ಪ್ರೀಯರಿಗೆ ಸುವರ್ಣಾವಕಾಶ! ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.

ADCL Recruitment in Kannada

ಕಂಪನಿ ಕಾರ್ಯದರ್ಶಿ ಕೋರ್ಸ್ ಹಾಗೂ ಕಾನೂನು ಪದವಿ ಪೂರ್ಣಗೊಳಿಸಿ, ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಜವಾಬ್ದಾರಿಯನ್ನು ನಿಭಾಯಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಕರ್ನಾಟಕದ ರಾಜಧಾನಿಯಾದ ಬೆಂಗಳೂರಿನಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವವರಿಗೆ ಇದೊಂದು ಗೋಲ್ಡನ್ ಚಾನ್ಸ್.

ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ 02-04-2026 ರಿಂದ 21-04-2026 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಈ ಒಂದು ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಒಂದು ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

ADCL

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
ಹುದ್ದೆಯ ಹೆಸರು ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳು
ಹುದ್ದೆಯ ಸಂಖ್ಯೆ 2 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ಕಿರು ಪರಿಚಯ:

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಒಟ್ಟು 2 ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ 2 ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕಾನೂನು ಪದವಿ, ಕಂಪನಿ ಕಾರ್ಯದರ್ಶಿ ಕೋರ್ಸ್ ಗಳನ್ನು ಪೂರ್ಣಗೊಳಿಸಿ, ವೃತ್ತಿಪರ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಬಿಡುಗಡೆ ಮಾಡಿದ ನೇಮಕಾತಿ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಕಂಪನಿ ಕಾರ್ಯದರ್ಶಿ 1 ಹುದ್ದೆ
ಕಾನೂನು ಸಲಹೆಗಾರ 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡ:

ಕಂಪನಿ ಕಾರ್ಯದರ್ಶಿ:

  • ಶೈಕ್ಷಣಿಕ ಅರ್ಹತೆ:
    • ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪನಿ ಕಾರ್ಯದರ್ಶಿ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು.
  • ವೃತ್ತಿ ಅನುಭವ:
    • ರಾಜ್ಯ ಸರ್ಕಾರದ ಸಾಮ್ಯದಲ್ಲಿರುವ ಇಲಾಖೆ, ಮಂಡಳಿ, ನಿಗಮ ಅಥವಾ ಸಾರ್ವಜನಿಕ ಉದ್ದಿಮೆಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಕಂಪನಿ ಕಾರ್ಯದರ್ಶಿಯಾಗಿ ಕೆಲಸದ ಅನುಭವವನ್ನು ಹೊಂದಿರಬೇಕು.
  • ಇತರೆ ಅರ್ಹತೆಗಳು:
    • ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಸಂಸ್ಥೆಯಲ್ಲಿ ಸದಸ್ಯರಾಗಿರಬೇಕು.

ಕಾನೂನು ಸಲಹೆಗಾರ:

  • ಶೈಕ್ಷಣಿಕ ಅರ್ಹತೆ:
    • ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು.
  • ವೃತ್ತಿ ಅನುಭವ:
    • ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಮಂಡಳಿ ಅಥವಾ ನಿಗಮಗಳಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
    • ರಾಜ್ಯ ಸರ್ಕಾರದ ಯಾವುದೇ ಇಲಾಖೆ, ಮಂಡಳಿ, ನಿಗಮಗಳಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
  • ಇತರೆ ಅರ್ಹತೆಗಳು:
    • ಅಭ್ಯರ್ಥಿಗಳು ನಿವೃತ್ತಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿರಬೇಕು.

ವಯೋಮಿತಿ ವಿವರ:

  • ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 80 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಕೆಲವು ನಿಯಮಗಳ ಪ್ರಕಾರ ಹಾಗೂ ಅಭ್ಯರ್ಥಿಗಳ ಸೇವಾ ಅನುಭವಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಬಿಡುಗಡೆ ಮಾಡಿದ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಕಚೇರಿಗೆ ಅಂಚೆ ಮೂಲಕ ಅಥವಾ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ವೇತನ ಶ್ರೇಣಿ:

ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ಹೊಂದಿರುವ ಅನುಭವ ಹಾಗೂ ಅರ್ಹತೆಗಳ ಆಧಾರದ ಮೇಲೆ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಪದವಿ ಪ್ರಮಾಣಪತ್ರ
  • ACS ವೃತ್ತಿಪರ ಕೋರ್ಸ್ ಪ್ರಮಾಣಪತ್ರ
  • ವಯಸ್ಸಿನ ಪುರಾವೆ
  • ಆಧಾರ್ ಕಾರ್ಡ್
  • ಅನುಭವ ಪ್ರಮಾಣಪತ್ರ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ನಿಗದಿತ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿ ಹಾಳೆಯಲ್ಲಿ ನಿಮ್ಮ ಬಯೋಡೇಟಾವನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ ಹಾಗೂ ಈ ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ ಅರ್ಜಿ ನಮೂನೆಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಲೋಕೋಟೆಗೆ ಹಾಕಿ, ಲೋಕೋಟೆಯ ಮೇಲೆ ಯಾವ ಹುದ್ದೆಗೆ ಅರ್ಜಿ ಸಲ್ಲಿಸಿರುವಿರಿ ಎಂದು ನಮೂದಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 21-04-2026 ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ನಿಗದಿತ ವಿಳಾಸ:

ವ್ಯವಸ್ಥಾಪಕ ನಿರ್ದೇಶಕರು,

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ,

9 ನೇ ಮಹಡಿ, ವಿಶ್ವೇಶ್ವರಯ್ಯ ಚಿಕ್ಕಗೋಪುರ,

ಅಂಬೇಡ್ಕರ್ ವೀಧಿ, ಬೆಂಗಳೂರು – 560 001

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಶೈಕ್ಷಣಿಕ ಅಂಕ ಹಾಗೂ ವೃತ್ತಿ ಅನುಭವಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
  • ದಾಖಲಾತಿ ಪರಿಶೀಲನೆ
  • ಕಂಪನಿ ಕಾರ್ಯದರ್ಶಿ ಹುದ್ದೆಗೆ ಕಂಪನಿ ಕಾಯ್ದೆ 2013 ರ ನಿಗಮಗಳ ಕುರಿತು ಹೊಂದಿರುವ ಜ್ಞಾನವನ್ನು ಪರಿಶೀಲಿಸಲಾಗುತ್ತದೆ.
  • ಕಾನೂನು ಸಲಹೆಗಾರ ಹುದ್ದೆಗೆ ಕೋರ್ಟ್ ಕೇಸ್ ಮ್ಯಾನೇಜ್ಮೆಂಟ್ ಸಿಸ್ಟಮ್ ನಿರ್ವಹಣೆ ಹಾಗೂ ಕಾನೂನು ಅಭಿಪ್ರಾಯ ನೀಡುವ ಸಾಮರ್ಥ್ಯವನ್ನು ಅಳೆಯಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 02-04-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 02-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-04-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 21-04-2026 ರಳಗೆ ಮೇಲೆ ತಿಳಿಸಲಾದ ಕಚೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment