ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026: ಈಗಲೇ ಅರ್ಜಿ ಸಲ್ಲಿಸಿ । Agriculture Department Recruitment 2026

ಕರ್ನಾಟಕ ಸರ್ಕಾರ ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಗ್ರೂಪ್ ಬಿ ವೃಂದದ ಕೃಷಿ ಅಧಿಕಾರಿ ಹುದ್ದೆಗಳು ಸೇರಿದಂತೆ ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಇನ್ನಿತರ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.

Agriculture Department Recruitment 2026

ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ರಾಜ್ಯದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಮತ್ತು ಗೌರವಾನ್ವಿತ ಸರ್ಕಾರಿ ಹುದ್ದೆಗಳನ್ನು ಪಡೆಯಲು ಈ ಒಂದು ಅವಕಾಶ ಉದ್ಯೋಗಾಕಾಂಕ್ಷಿಗಳಿಗೆ ಒದಗಿ ಬಂದಿದೆ ಹಾಗಾಗಿ ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದು ಇಂದೇ ಅರ್ಜಿ ಸಲ್ಲಿಸಿ ಪರೀಕ್ಷೆಯನ್ನ ಪಾಸ್ ಮಾಡಿ ಮುಂದಿನ ದಿನಗಳಲ್ಲಿ ನೀವು ಸಹ ಈ ಹುದ್ದೆಗಳನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ:

ಕೃಷಿ ಇಲಾಖೆಯಲ್ಲಿ ಒಟ್ಟು 945 ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-6-2026 ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ಅವಲೋಕನ:

ವಿವರಮಾಹಿತಿ
ನೇಮಕಾತಿ ಸಂಸ್ಥೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹಾಗೂ ಕರ್ನಾಟಕ ಕೃಷಿ ಇಲಾಖೆ
ಹುದ್ದೆಗಳ ಹೆಸರುಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO)
ಒಟ್ಟು ಹುದ್ದೆಗಳುಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದ ಸೇರಿ 945ಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗ ಸ್ಥಳಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು
ಅವಕಾಶದ ಸ್ವರೂಪರಾಜ್ಯ ಸರ್ಕಾರದ ಉದ್ಯೋಗ
ಅರ್ಹ ಅಭ್ಯರ್ಥಿಗಳುಕೃಷಿ ಸಂಬಂಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು
ಆಯ್ಕೆ ಪ್ರಕ್ರಿಯೆKEA ನಿಯಮಾನುಸಾರ ಪರೀಕ್ಷೆ/ದಾಖಲೆ ಪರಿಶೀಲನೆ
ನೇಮಕಾತಿಯ ವಿಶೇಷತೆಹೆಚ್ಚಿನ ಸಂಖ್ಯೆಯ ಹುದ್ದೆಗಳು ಮತ್ತು ಕರ್ನಾಟಕದಾದ್ಯಂತ ಉದ್ಯೋಗ ಅವಕಾಶ

ಮುಖ್ಯಾಂಶಗಳು:

  • ಕೃಷಿ ಇಲಾಖೆಯಲ್ಲಿ 945ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
  • AO ಹಾಗೂ AAO ಹುದ್ದೆಗಳಿಗೆ ಅರ್ಜಿ ಆಹ್ವಾನ
  • KEA ಮೂಲಕ ಆನ್‌ಲೈನ್ ಅರ್ಜಿ ಪ್ರಕ್ರಿಯೆ
  • ಕರ್ನಾಟಕದಾದ್ಯಂತ ಸರ್ಕಾರಿ ಉದ್ಯೋಗ ಅವಕಾಶ
  • ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದ ಹುದ್ದೆಗಳು ಒಳಗೊಂಡಿವೆ.

ಹುದ್ದೆಗಳ ವಿವರದ ಬಗ್ಗೆ ಮಾಹಿತಿ:

ಕರ್ನಾಟಕ ರಾಜ್ಯದ ಕೃಷಿ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ದೊರೆತಿದೆ. ಕರ್ನಾಟಕ ಕೃಷಿ ಇಲಾಖೆಯು ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದ (RPC) ವ್ಯಾಪ್ತಿಯಲ್ಲಿ ನೂರಾರು ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.

  • ಕೃಷಿ ಅಧಿಕಾರಿ (AO) – RPC ವೃಂದ
    81 ಹುದ್ದೆಗಳು
  • ಸಹಾಯಕ ಕೃಷಿ ಅಧಿಕಾರಿ (AAO) – RPC ವೃಂದ
    551 ಹುದ್ದೆಗಳು
  • ಕೃಷಿ ಅಧಿಕಾರಿ (AO) – ಕಲ್ಯಾಣ ಕರ್ನಾಟಕ (KK) ವೃಂದ
    40 ಹುದ್ದೆಗಳು
  • ಸಹಾಯಕ ಕೃಷಿ ಅಧಿಕಾರಿ (AAO) – ಕಲ್ಯಾಣ ಕರ್ನಾಟಕ (KK) ವೃಂದ
    476 ಹುದ್ದೆಗಳು

ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಪದವಿಯನ್ನು ಹೊಂದಿರಬೇಕು. ಹುದ್ದೆಗಳ ಹಂಚಿಕೆಯ ಆಧಾರದ ಮೇಲೆ ವಿದ್ಯಾರ್ಹತೆಗಳನ್ನು ಎರಡು ವಿಭಾಗಗಳಲ್ಲಿ ನಿಗದಿಪಡಿಸಲಾಗಿದೆ.

ವಯೋಮಿತಿ:

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡುವ ಸಲುವಾಗಿ ವೈಯಮಿತಿಯನ್ನ ನಿಗದಿಪಡಿಸಲಾಗಿದೆ ಕನಿಷ್ಠ 18 ವರ್ಷ ತುಂಬಿರಬೇಕು ಸರ್ಕಾರದ ಆದೇಶದ ಅನ್ವಯ ಒಂದು ಬಾರಿಗೆ ಗರಿಷ್ಠ ಐದು ವರ್ಷವನ್ನು ಸಡಿಲಿಕೆ ಮಾಡಲಾಗುತ್ತದೆ ಇದರ ಬಗ್ಗೆ ಈ ಕೆಳಗಿನ ಮಾಹಿತಿಯನ್ನು ನೀಡಲಾಗಿದೆ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿನ ಗಮನಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

  • ಸಾಮಾನ್ಯ ಅರ್ಹತೆ (General Merit): 40 ವರ್ಷಗಳು.
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 43 ವರ್ಷಗಳು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 45 ವರ್ಷಗಳು.

ವಯೋಮಿತಿಯಲ್ಲಿ ಸಡಿಲಿಕೆ:

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಮಾಜಿ ಸೈನಿಕರು, ವಿಶೇಷ ಚೇತನರು, ವಿಧವೆಯರು ಮತ್ತು ಜೀತ ಕಾರ್ಮಿಕರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಹೆಚ್ಚಿನ ರಿಯಾಯಿತಿಯನ್ನು ನೀಡಲಾಗುವುದು.

ಅರ್ಜಿ ಶುಲ್ಕದ ವಿವರ:

ಕರ್ನಾಟಕ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಾರ ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಮೊದಲು ಶುಲ್ಕದ ವಿವರಗಳನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ

ಸಾಮಾನ್ಯ ವರ್ಗ (General) ಮತ್ತು 2A, 2B, 3A, 3B ವರ್ಗಗಳ ಅಭ್ಯರ್ಥಿಗಳು ಒಟ್ಟು ₹750 ಶುಲ್ಕವನ್ನು ಪಾವತಿಸಬೇಕು. ಇದರಲ್ಲಿ ₹500 ಅರ್ಜಿ ಶುಲ್ಕ ಹಾಗೂ ₹250 ಪ್ರಕ್ರಿಯೆ ಶುಲ್ಕ ಒಳಗೊಂಡಿರುತ್ತದೆ.

ಎಸ್‌ಸಿ, ಎಸ್‌ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ

ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1, ಮಾಜಿ ಸೈನಿಕರು ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಈ ಅಭ್ಯರ್ಥಿಗಳು ಒಟ್ಟು ₹500 ಪಾವತಿಸಬೇಕು. ಇದರಲ್ಲಿ ₹250 ಅರ್ಜಿ ಶುಲ್ಕ ಮತ್ತು ₹250 ಪ್ರಕ್ರಿಯೆ ಶುಲ್ಕ ಸೇರಿರುತ್ತದೆ.

ವಿಶೇಷ ಚೇತನ ಅಭ್ಯರ್ಥಿಗಳಿಗೆ ವಿಶೇಷ ಸೌಲಭ್ಯ

ವಿಶೇಷ ಚೇತನ (PWD) ಅಭ್ಯರ್ಥಿಗಳಿಗೆ ಕೇವಲ ₹250 ಪ್ರಕ್ರಿಯೆ ಶುಲ್ಕ ಮಾತ್ರ ನಿಗದಿಪಡಿಸಲಾಗಿದೆ. ಇವರಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ.

ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಗಮನಿಸಿ

ಅಭ್ಯರ್ಥಿಗಳು 85% ಮತ್ತು 15% ಮೀಸಲಾತಿ ವರ್ಗದ ಹುದ್ದೆಗಳಿಗೆ ಒಟ್ಟಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಮೂಲ ಅರ್ಜಿ ಶುಲ್ಕದ ಜೊತೆಗೆ ಪ್ರತಿ ಹೆಚ್ಚುವರಿ ಹುದ್ದೆಗೆ ₹100 ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ.

ವೇತನಶ್ರೇಣಿ:

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ನೇಮಕಾತಿಯನ್ನು ಪಡೆದ ಅಭ್ಯರ್ಥಿಗಳಿಗೆ 2024ರ ಪರಿಸ್ಕೃತ ರಾಜ್ಯ ವೇತನದ ಅನ್ವಯ

ಕೃಷಿ ಅಧಿಕಾರಿಗೆ ತಿಂಗಳಿಗೆ 69,250 ಯಿಂದ ರೂ.1,34,200 ವೇತನವನ್ನು ನಿಗದಿಪಡಿಸಲಾಗಿದೆ

ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ತಿಂಗಳಿಗೆ 65,950 ರಿಂದ 1924,900 ವೇತನವನ್ನು ನಿಗದಿಪಡಿಸಲಾಗಿದೆ

ಇದರೊಂದಿಗೆ ಸರ್ಕಾರಿ ಇದರೊಂದಿಗೆ ಸರ್ಕಾರಿ ವಿವಿಧ ಯೋಜನೆಗಳು ಹಾಗೂ ಎರಡು ವರ್ಷಗಳ ಕಾಲ ಕಾಯಂ ಪೂರ್ವ ಅವಧಿಯಲ್ಲಿ ಇರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ – ಹಂತ ಹಂತವಾಗಿ ಸಂಪೂರ್ಣ ಮಾಹಿತಿ:

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ವಿವಿಧ ಹಂತಗಳನ್ನ ಅನುಸರಿಸುವ ಮೂಲಕ ಹಾಲಿನದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ನೇಮಕಾತಿ ಸಂಬಂಧಿತ ಎಲ್ಲಾ ಮಾಹಿತಿಗಳು ಮತ್ತು ಅರ್ಜಿ ಲಿಂಕ್ ಅಲ್ಲಿ ಲಭ್ಯವಿರುತ್ತದೆ.

ಹಂತ 2: ನೇಮಕಾತಿ ಲಿಂಕ್ ಆಯ್ಕೆ ಮಾಡಿ

ಮುಖಪುಟದಲ್ಲಿರುವ ‘ನೇಮಕಾತಿ’ (Recruitment) ವಿಭಾಗಕ್ಕೆ ತೆರಳಿ, ‘ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ-2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ

ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿರುವ ಅರ್ಹತೆ, ವಯೋಮಿತಿ, ಶುಲ್ಕ ಹಾಗೂ ಇತರೆ ನಿಯಮಗಳನ್ನು ಗಮನವಿಟ್ಟು ಓದಿಕೊಳ್ಳಿ.

ಹಂತ 4: ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ

ನಿಮ್ಮ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಸಹಿಯನ್ನು JPG/JPEG ಫಾರ್ಮ್ಯಾಟ್‌ನಲ್ಲಿ ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ.

ಹಂತ 5: ಅರ್ಜಿ ನಮೂನೆಯನ್ನು ಭರ್ತಿ ಮಾಡಿ

ಆನ್‌ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ, ಸಂಪರ್ಕ ಮಾಹಿತಿ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಿ.

ಹಂತ 6: ದಾಖಲೆಗಳನ್ನು ಅಪ್‌ಲೋಡ್ ಮಾಡಿ

ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸೂಚಿಸಿರುವ ಗಾತ್ರ ಮತ್ತು ಫಾರ್ಮ್ಯಾಟ್‌ನಲ್ಲಿ ಅಪ್‌ಲೋಡ್ ಮಾಡಿ.

ಹಂತ 7: ಅರ್ಜಿ ಶುಲ್ಕ ಪಾವತಿಸಿ

ಆನ್‌ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇತರೆ ಲಭ್ಯವಿರುವ ಡಿಜಿಟಲ್ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 8: ಅಂತಿಮ ಪರಿಶೀಲನೆ ಮಾಡಿ

ಅರ್ಜಿಯನ್ನು ಸಲ್ಲಿಸುವ ಮೊದಲು ನಮೂದಿಸಿದ ಎಲ್ಲಾ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ. ತಪ್ಪು ಮಾಹಿತಿಯಿಂದ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಇರುತ್ತದೆ.

ಹಂತ 9: ಅರ್ಜಿ ಪ್ರತಿಯನ್ನು ಉಳಿಸಿಕೊಳ್ಳಿ

ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಂಡು ಭವಿಷ್ಯದ ಬಳಕೆಗಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ವಿವಿಧ ಹಂತಗಳನ್ನು ಫಾಲೋ ಮಾಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಮುನ್ನ ಎಲ್ಲ ದಾಖಲೆಗಳನ್ನು ಸರಿಪಡಿಸಿ ಇಟ್ಟುಕೊಳ್ಳಬೇಕಾಗುತ್ತದೆ ಹಾಗೂ ಅರ್ಜಿ ಸಲ್ಲಿಸಿದ ನಂತರ ಅಂತಿಮ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಕೃಷಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯನ್ನು ನಡೆಸಲಾಗುತ್ತದೆ.

  • ಕನ್ನಡ ಭಾಷಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆ
  • ಸಾಮಾನ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆ 01
  • ನಿರ್ದಿಷ್ಟ ಪತ್ರಿಕೆ 02
  • ನಕರಾತ್ಮಕ ಮೌಲ್ಯಮಾಪನ
  • ದಾಖಲೆ ಪರಿಶೀಲರೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ

ಪ್ರಮುಖ ದಿನಾಂಕಗಳು:

ವಿವರಗಳು ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ30-05-2026
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ20-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ22-06-2026

ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ :

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಈ ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ನಡೆಸಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಓದಿಕೊಂಡು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Leave a Comment