ನಮಸ್ಕಾರ ರೈತಭಾಂದವರೇ, ನೀವೇನಾದರೂ ನಿಮ್ಮ ಜಮೀನಿನಲ್ಲಿ ಹೊಸದಾಗಿ ಅಡಿಕೆ ಗಿಡಗಳನ್ನು ನಡಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೆ ಸರ್ಕಾರದ ಕೆಡೆಯಿಂದ ಭರ್ಜರಿ ಗುಡ್ ನ್ಯೂಸ್! ಸರ್ಕಾರವು ಅಡಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರುವ ರೈತರಿಗೆ ಅತ್ಯಾಕರ್ಷಕ ಸಹಾಯಧನವನ್ನು ನೀಡುತ್ತಿದ್ದು, ಅವರು ಎಷ್ಟು ಎಕರೆ ಜಮೀನಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ ಎನ್ನುವುದಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ.
Arecanut Farming Subsidy
ಯಾವುದೇ ರೈತರು ತಮ್ಮ ಕೃಷಿ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆದರೆ ಹಲವಾರು ವರ್ಷಗಳ ಕಾಲ ಉತ್ತಮ ಆದಾಯವನ್ನು ಗಳಿಸುವ ಮೂಲಕ ಅತಿ ಹೆಚ್ಚು ಲಾಭವನ್ನು ಗಳಿಸಬಹುದಾಗಿದೆ. ಸರ್ಕಾರವು ಈ ಒಂದು ಸಹಾಯಧನವನ್ನು ಒದಗಿಸುವ ಉದ್ದೇಶ ತೋಟಗಾರಿಕಾ ಬೆಳೆಗಳನ್ನು ಉತ್ತೇಜಿಸುವುದು ಹಾಗೂ ರೈತರಿಗೆ ಸ್ಥಿರವಾದ ಆದಾಯವನ್ನು ಒದಗಿಸುವ ಮೂಲಕ ರೈತರ ಆದಾಯ ಮಟ್ಟವನ್ನು ಹೆಚ್ಚಿಸುವುದಾಗಿದೆ.
ಸರ್ಕಾರದ ಸಹಾಯಧನವನ್ನು ಪಡೆಯಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಪ್ರತಿ ಎಕರೆಅಡಿಕೆ ಬೆಳೆಗಳನ್ನು ಬೆಳೆದರೆ ಸಿಗುವ ಸಹಾಯಧನವೆಷ್ಟು? ಅರ್ಹ ಫಲಾನುಭವಿಗಳು ಯಾರು? ಈ ಎಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಅಡಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ಸಹಾಯಧನ ಯೋಜನೆ |
| ಭೂಮಿಯ ಮಿತಿ | 0.50 ಎಕರೆಯಿಂದ 2 ಎಕರೆ ವರೆಗೆ ಸಹಾಯಧನ ಲಭ್ಯವಾಗಲಿದೆ |
| ಅರ್ಹ ಫಲಾನುಭವಿಗಳು | ಅಡಿಕೆ ತೋಟವನ್ನು ನಿರ್ಮಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು |
| ಯೋಜನೆಯ ಉದ್ದೇಶ | ಆಡಿಕೆ ಬೆಳೆಗಳನ್ನು ಉತ್ತೇಜಿಸಿ, ರೈತರಿಗೆ ಸ್ಥಿರ ಆದಾಯ ಮೂಲವನ್ನು ಸೃಷ್ಟಿಸಿಕೊಡುವುದು. |
ಯೋಜನೆಯ ಬಗ್ಗೆ:
ಕರ್ನಾಟಕ ಸರ್ಕಾರವು ತಮ್ಮ ರಾಜ್ಯದಲ್ಲಿ ಅಡಿಕೆ ತೋಟಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ಅತ್ಯಾಕರ್ಷಕ ಸಹಾಯಧನವನ್ನು ಒದಗಿಸುತ್ತಿದ್ದು, ಅರ್ಧ ಎಕರೆ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರಿಂದ ಹಿಡಿದು 2 ಎಕರೆ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ಸಹಾಯಧನವನ್ನು ಒದಗಿಸಲಾಗುತ್ತದೆ.
ಇಲ್ಲಿ ಒಟ್ಟು ರೂ. 40,000/- ದಿಂದ ರೂ. 1,20,000/- ವರೆಗೆ ಸಹಾಯಧನವನ್ನು ನೀಡುತ್ತಿದ್ದು, ಇದರಿಂದಾಗಿ ರೈತರಿಗೆ ಅಡಿಕೆ ಬೆಳೆಗಳನ್ನು ಬೆಳೆಯಲು ಅಗತ್ಯವಾಗುವ ಆರಂಭಿಕ ವೆಚ್ಚವನ್ನು ಭರಿಸಲು ನೆರವಾಗುತ್ತದೆ. ಜೊತೆಗೆ ತೋಟಗಾರಿಕೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಭರಿಸಲು ಸಹ ನೆರವಾಗುತ್ತದೆ.
ಯೋಜನೆಯ ಉದ್ದೇಶ:
- ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ಉತ್ತೇಜನ:
ಅರ್ಹ ಫಲಾನುಭವಿ ರೈತರಿಗೆ ಸಹಾಯಧನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ವ್ಯಾಪ್ತಿಯನ್ನು ಹೆಚಿಸುವುದು ಹಾಗೂ ರೈತರಿಗೆ ಅಡಿಕೆ ಬೆಳೆಗಳಂತಹ ಬಹುವಾರ್ಷಿಕ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡುವ ಮೂಲಕ ಹೆಚ್ಚಿನ ಲಾಭವನ್ನು ಗಳಿಸಲು ಅವಕಾಶ ಕಲ್ಪಿಸುವುದು
- ರೈತರ ಆದಾಯದ ಮಟ್ಟವನ್ನು ಹೆಚಿಸುವುದು:
ಅಡಿಕೆಯು ದೀರ್ಘಕಾಲದ ವಾಣಿಜ್ಯ ಬೆಳೆಯಾಗಿರುವುದರಿಂದ, ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸಹಾಯಧನವನ್ನು ಒದಗಿಸುವ ಮೂಲಕ ದೀರ್ಘ ಕಾಲದ ವೆರೆಗೆ ಸ್ಥಿರ ಆದಾಯವನ್ನು ಗಳಿಸಲು ಅವಕಾಶ ಕಲ್ಪಿಸಿ ಅವರ ಜೀವನ ಮಟ್ಟವನ್ನು ಸುಧಾರಿಸುವುದು.
- ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸುವುದು:
ಅಡಿಕೆ ಬೆಳೆಗಳನ್ನು ತಮ್ಮ ಜಮೀನಿನಲ್ಲಿ ನೆಡಬೇಕೆಂದಿದ್ದರೂ ಕೂಡ ಹಣಕಾಸಿನ ಅಡೆತಡೆಗಳಿಂದ ಸಾಧ್ಯವಾಗದ ಗ್ರಾಮೀಣ ಭಾಗದ ರೈತರಿಗೆ ವಿಶೇಷವಾಗಿ ಬಡ ರೈತರಿಗೆ ಅಡಿಕೆ ಬೆಳೆಗಳನ್ನು ಬೆಳೆಯಲು ಸಹಾಯಧನವನ್ನು ಒದಗಿಸುವ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
- ಆಧುನಿಕ ಕೃಷಿ ಪದ್ಧತಿ ಹಾಗೂ ಹನಿ ನೀರಾವರಿಯನ್ನು ಪ್ರೋತ್ಸಾಹಿಸುವುದು:
ತಮ್ಮ ಸ್ವಂತ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಪದ್ದತಿಯನ್ನು ಅಳವಡಿಸುವುದು ಕಡ್ಡಾಯಗೊಳಿಸುವ ಮೂಲಕ ಶೇಕಡಾ ಅರ್ಧದಷ್ಟು ನೀರು ಪೋಲಾಗುವುದನ್ನು ತಡೆದು ಅಂತರ್ಜಲ ಮಟ್ಟವನ್ನು ಸುಧಾರಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಯೋಜನೆಯಡಿಯಲ್ಲಿ ಸಿಗುವ ಸಹಾಯಧನದ ವಿವರ:
ತಮ್ಮ ಸ್ವಂತ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರುವ ರೈತರಿಗೆ ಅವರು ಎಷ್ಟು ಎಕರೆ ಜಮೀನಿನಲ್ಲಿ ಅಡಿಕೆ ತೋಟಗಾರಿಕೆಯನ್ನು ನಿರ್ಮಿಸುತ್ತಾರೆ ಎನ್ನುವುದಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡುತ್ತಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- 0.50 ಎಕರೆ:
0.50 ಎಕರೆ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಗೆ ರೂ. 40,000 ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.
- 1 ಎಕರೆ:
1 ಎಕರೆ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಗೆ ರೂ. 40,000 ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.
- 2 ಎಕರೆ:
2 ಎಕರೆ ಜಮೀನಿನಲ್ಲಿ ಅಡಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಗೆ ರೂ. 40,000 ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.
ಈ ಯೋಜನೆಯ ಪ್ರಯೋಜನ:
- ಈ ಒಂದು ಯೋಜನೆಯಡಿಯಲ್ಲಿ ರೈತರಿಗೆ ಅಡಿಕೆ ಕೃಷಿ ಸ್ಥಾಪನೆಗೆ ಆರ್ಥಿಕ ನೆರವು ದೊರಕುತ್ತದೆ. ಇದರಿಂದ ಆರಂಭಿಕ ಹೂಡಿಕೆಯ ಭಾರ ಕಡಿಮೆಯಾಗುತ್ತದೆ.
- ಅಡಿಕೆ ಬೆಳೆಯು ದೀರ್ಘಕಾಲದ ವಾಣಿಜ್ಯ ಬೆಳೆಯಾಗಿರುವುದರಿಂದ, ಫಲಾನುಭವಿ ರೈತರು ದೀರ್ಘಕಾಲದ ವೆರೆಗೆ ಸ್ಥಿರವಾದ ಹಾಗೂ ಹೆಚ್ಚಿನ ಆದಾಯವನ್ನು ಗಳಿಸುವ ಮೂಲಕ ಸ್ವಾವಲಂಬಿ ಜೀವನವನ್ನು ನಡೆಸಬಹುದಾಗಿದೆ.
- ಗ್ರಾಮೀಣ ಪ್ರದೇಶದ ರೈತರು ಸರ್ಕಾರದಿಂದ ಅಡಿಕೆ ಬೆಳೆಗಳನ್ನು ಬೆಳೆಯಲು ಆರ್ಥಿಕ ನೆರವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಜಮೀನಿನಲ್ಲೇ ತೋಟಗಾರಿಕೆಯನ್ನು ಸ್ಥಾಪಿಸಿ ಸ್ಥಿರ ಉದ್ಯೋಗವನ್ನು ಕಂಡುಕೊಳ್ಳಬಹುದು.
- ರೈತರ ಜೀವನ ಮಟ್ಟ ಹಾಗೂ ಆರ್ಥಿಕ ಸಮಸ್ಯೆಯು ಕಡಿಮೆಯಾಗಿ ಗೌರವಯುತ ಜೀವನವನ್ನು ನಡೆಸಲು ಸಹಾಯವಾಗುತ್ತದೆ.
ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಅರ್ಹ ರೈತರು ಯಾರು?
- ಫಲಾನುಭವಿಗಳು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ರೈತರು ಕಡ್ಡಾಯವಾಗಿ ಕರ್ನಾಟಕ ಸರ್ಕಾರದ FRUITS ಪೋರ್ಟಲ್ ನಲ್ಲಿ ನೋಂದಾಯಿತರಾಗಿರಬೇಕು.
- ರೈತರು ಸ್ವಂತವಾಗಿ ಜಮೀನನ್ನು ಹೊಂದಿದ್ದು, ಆ ಜಮೀನಿ ತಮ್ಮ ಹೆಸರಿನಲ್ಲೇ ಇರಬೇಕು.
- ರೈತರು ಕಡ್ಡಾಯವಾಗಿ ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯವನ್ನು ಹೊಂದಿರಬೇಕು.
- ಇದುವರೆಗೂ ಸಂಬಂಧಪಟ್ಟ ಯಾವುದೇ ಸರ್ಕಾರದ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- FRUITS ಐಡಿ
- ತಮ್ಮ ಹೆಸರಿನಲ್ಲಿರುವ ಜಮೀನಿನ ಪಹಣಿ
- ಜಮೀನಿನ ಮಾಲೀಕತ್ವ ಪ್ರಮಾಣಪತ್ರ
- ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಫಲಾನುಭವಿ ರೈತರು ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು:
- ಫಲಾನುಭವಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಹೊಸ ಬಳಕೆದಾರರಾಗಿದ್ದರೆ ಮೂಲ ವಿವರಗಳನ್ನು ಬಳಸಿಕೊಂಡು ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಆಧಾರ್ ಸಂಖ್ಯೆ, FRUITS ಐಡಿ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ವಿವರಗಳನ್ನು ಇನ್ನೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು:
- ಅರ್ಹ ಫಲಾನುಭವಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.
- ಅಡಿಕೆ ಬೆಳೆಗಳನ್ನು ಬೆಳೆಯಲು ಸಹಾಯಧನ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದು.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಹೆಸರು, ವಿಳಾಸ, ಆಧಾರ್ ಸಂಖ್ಯೆ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿಮಾಡಿ.
- ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಕಚೇರಿಗೆ ಸಲ್ಲಿಸಿ.
ಕೊನೆಯ ಮಾತು:
ಸರ್ಕಾರವು ಅಡಿಕೆಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರುವ ರೈತರಿಗೆ ಸಹಾಯಧನವನ್ನು ಒದಗಿಸುತ್ತಿದ್ದು, ನೀವೇನಾದರೂ ಸ್ವಂತ ಜಮೀನನ್ನು ಹೊಂದಿದ್ದು, ಅಡಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿದ್ದೀರಾ? ಹಾಗಿದ್ದರೆ ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಯಾವುದೇ ಹೂಡಿಕೆ ಇಲ್ಲದೆ ಉತ್ತಮ ಸ್ಥಿರ ಆದಾಯವನ್ನು ಗಳಿಸಲು ಇದು ಅತ್ಯುತ್ತಮ ಅವಕಾಶವಾಗಿದೆ.