AVNL: ರೂ. 1,20,000/- ವೇತನ! ರಕ್ಷಣಾ ಸಚಿವಾಲಯದಲ್ಲಿ 1213 ಹುದ್ದೆಗಳ ಬೃಹತ್ ನೇಮಕಾತಿ! ಕೊನೆಯ ದಿನಾಂಕ ಜುಲೈ 25

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದದ ಅಡಿಯಲ್ಲಿ ಬರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

AVNL Recruitment 2026


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ, ಡಿಪ್ಲೊಮಾ, ಬಿಇ/ಬಿಟೆಕ್ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೂ ಇಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹಾಗೂ ನೋನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000/- ದಿಂದ 1,20,000/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 11-07-2026 ದಿಂದ ಆರಂಭಗೊಂಡಿದ್ದು 25-07-2026 ವರೆಗೆ ಕಾಲಾವಕಾಶ ನೀಡಲಾಗಿದೆ. ಭಾರತೀಯ ಸೇನೆಗೆ ಯುದ್ಧವಾಹನಗಳನ್ನು ತಯಾರಿಸುವ ಈ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು AVNL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

AVNL

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್
ಹುದ್ದೆಯ ಹೆಸರು ಜೂನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಹಾಗೂ ಇನ್ನು ವಿವಿಧ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 1213 ಹುದ್ದೆಗಳು
ಉದ್ಯೋಗದ ಸ್ವರೂಪ ಸ್ಥಿರ ಅವಧಿಯ ಉದ್ಯೋಗ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-07-2026

ಹುದ್ದೆಯ ಕಿರು ನೋಟ:

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಒಟ್ಟು 1213 ಎಕ್ಸಿಕ್ಯೂಟಿವ್ ಹಾಗೂ ನೋನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವಿಭಾಗಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಕಾರ್ಯನಿರ್ವಾಹಕ ಹುದ್ದೆಗಳು:

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಸಹಾಯಕ ವ್ಯವಸ್ಥಾಪಕ (ಹಣಕಾಸು)2 ಹುದ್ದೆಗಳು
ಸಹಾಯಕ ವ್ಯವಸ್ಥಾಪಕ (ಸಿವಿಲ್)1 ಹುದ್ದೆ
ಸಹಾಯಕ ವ್ಯವಸ್ಥಾಪಕ (ಕಂಪನಿ ಕಾರ್ಯದರ್ಶಿ)1 ಹುದ್ದೆ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)18 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಾನಿಕ್ಸ್)30 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಮಾನವ ಸಂಪನ್ಮೂಲ)8 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಮೆಕ್ಯಾನಿಕಲ್)92 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಲೋಹಶಾಸ್ತ್ರ)8 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಅಧಿಕೃತ ಭಾಷೆ)4 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಕೃತಕ ಬುದ್ದಿಮತ್ತೆ)3 ಹುದ್ದೆಗಳು
ಜೂನಿಯರ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು)2 ಹುದ್ದೆಗಳು
ಉಪ ವ್ಯವಸ್ಥಾಪಕ (ಯಾಂತ್ರಿಕ)13 ಹುದ್ದೆಗಳು
ಉಪ ವ್ಯವಸ್ಥಾಪಕ (ವಿದ್ಯುತ್)2 ಹುದ್ದೆಗಳು
ಉಪ ವ್ಯವಸ್ಥಾಪಕ (ಎಲೆಕ್ಟ್ರಾನಿಕ್ಸ್)6 ಹುದ್ದೆಗಳು
ಉಪ ವ್ಯವಸ್ಥಾಪಕ (ಮಾಹಿತಿ ತಂತ್ರಜ್ಞಾನ)3 ಹುದ್ದೆಗಳು
ಉಪ ವ್ಯವಸ್ಥಾಪಕ (ಮಾರ್ಕೆಟಿಂಗ್)7 ಹುದ್ದೆಗಳು
ಉಪ ವ್ಯವಸ್ಥಾಪಕ (ಸಾರ್ವಜನಿಕ ಸಂಪರ್ಕ ಮತ್ತು ಕಾರ್ಪೊರೇಟ್ ಸಂವಹನ)1 ಹುದ್ದೆ
ಉಪ ವ್ಯವಸ್ಥಾಪಕ (ಕೃತಕ ಬುದ್ದಿಮತ್ತೆ)1 ಹುದ್ದೆ
ಸಲಹೆಗಾರ (ಹಣಕಾಸು ಮತ್ತು ಲೆಕ್ಕ ಪರಿಶೋಧನೆ)1 ಹುದ್ದೆ
ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ (ವ್ಯವಹಾರ ಅಭಿವೃದ್ಧಿ)2 ಹುದ್ದೆಗಳು
ಉಪ ಪ್ರಧಾನ ವ್ಯವಸ್ಥಾಪಕ (ಕಂಪನಿ ಕಾರ್ಯದರ್ಶಿ)1 ಹುದ್ದೆ
ಹಿರಿಯ ವ್ಯವಸ್ಥಾಪಕ (ಸೈಬರ್ ಭದ್ರತೆ)1 ಹುದ್ದೆ
ಹಿರಿಯ ವ್ಯವಸ್ಥಾಪಕ (ಬೌಧಿಕ ಆಸ್ತಿ)1 ಹುದ್ದೆ

ಕಾರ್ಯನಿರ್ವಾಹಕೇತರ ಹುದ್ದೆಗಳು:

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಿಷಿಯನ್)84 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ ಮೆಕ್ಯಾನಿಕ್)69 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರೋಪ್ಲೇಟರ್)4 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಫಿಟ್ಟರ್ -ಜನರಲ್)400 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಫೌಂಡ್ರಿಮೆನ್)31 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಫೋರ್ಜರಿ ಮತ್ತು ಹೀಟ್ ಟ್ರೀಟರ್)2 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಯಂತ್ರಶಿಲ್ಪಿ)216 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಮೆಕ್ಯಾನಿಕ್ ಮಷಿನ್ ಟೂಲ್ ನಿರ್ವಹಣೆ)23 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (OMHE) 66 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಪೇಂಟರ್ -ಜನರಲ್)10 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ಗುಣಮಟ್ಟ ಭರವಸೆ ಸಹಾಯಕ)44 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ (ರಿಗ್ಗರ್)1 ಹುದ್ದೆ
ಜೂನಿಯರ್ ಟೆಕ್ನಿಷಿಯನ್ (ವೆಲ್ಡರ್)55 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಜೂನಿಯರ್ ಮ್ಯಾನೇಜರ್, ಸಹಾಯಕ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳು:

ಜೂನಿಯರ್ ಮ್ಯಾನೇಜರ್, ಸಹಾಯಕ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

  • ಸಲಹೆಗಾರ:

ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಣಕಾಸು ಮತ್ತು ಲೆಕ್ಕ ಪರಿಶೋದನೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ 10 ವರ್ಷಗಳ ಅನುಭವವನ್ನು ಹೊಂದಿರಬೇಕು.

  • ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ:

ನಿವೃತ್ತಿ ಸೇನಾ ಅಧಿಕಾರಿಗಳು ಅಥವಾ ರಕ್ಷಣಾ ವಲಯ ಅಥವಾ ಸಂಬಂಧಿತ ಕ್ಷೇತದಲ್ಲಿ 15 ಕೆಲಸದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  • ಜೂನಿಯರ್ ಟೆಕ್ನಿಷಿಯನ್:

ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ಟ್ರೇಡೆಗಳಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

  • ಹಿರಿಯ ವ್ಯವಸ್ಥಾಪಕ (ಸೈಬರ್ ಭದ್ರತೆ) ಹಾಗೂ (ಬೌದ್ಧಿಕ ಆಸ್ತಿ):

ಅಭ್ಯರ್ಥಿಗಳು ಸಂಬಂಧಿತ ತಾಂತ್ರಿಕ ಪದವಿ ಜೊತೆಗೆ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

  • ಜೂನಿಯರ್ ಟೆಕ್ನಿಷಿಯನ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಸೀನಿಯರ್ ಮ್ಯಾನೇಜರ್, ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ, ಉಪ ಪ್ರಧಾನ ವ್ಯವಸ್ಥಾಪಕ, ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 65 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾನುಸಾರ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ವಿವಿಧ ವರ್ಗಗಳು ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗಗಳ ಹಾಗೂ ಇತರೆ ಹಿಂದುಳಿದ ವರ್ಗಗಳ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ. 300/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.

ವೇತನ ಶ್ರೇಣಿ:

ಹುದ್ದೆಗಳ ವಿವರ ವೇತನ ಶ್ರೇಣಿ
ಜೂನಿಯರ್ ಟೆಕ್ನಿಷಿಯನ್ ರೂ. 21,000/-
ಜೂನಿಯರ್ ಮ್ಯಾನೇಜರ್ ರೂ. 30,000/-
ಸಹಾಯಕ ವ್ಯವಸ್ಥಾಪಕ ರೂ.40,000/-
ಉಪ ವ್ಯವಸ್ಥಾಪಕ ರೂ. 50.000/-
ಹಿರಿಯ ವ್ಯವಸ್ಥಾಪಕ ರೂ. 70,000/-
ಉಪ ಪ್ರಧಾನ ವ್ಯವಸ್ಥಾಪಕ ರೂ. 80,000/-
ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರು ರೂ. 1,00,000/-
ಸಲಹೆಗಾರರೂ. 1,20,000/-

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು AVNL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗದಲ್ಲಿ ಮೇಲೆ ಕ್ಲಿಕ್ ಮಾಡಿ AVNL ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಮೀಸಲಾತಿ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ತಾಂತ್ರಿಕ ಹುದ್ದೆಗಳಿಗೆ ಕೌಶಲ್ಯ ಪರೀಕ್ಷೆ/ ವ್ಯಾಪಾರ ಪರೀಕ್ಷೆ
  • ವೈದ್ಯಕೀಯ ಸಂದರ್ಶನ
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 30-06-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 11-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಇನ್ನಿತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದ್ದು, ರಕ್ಷಣಾ ಸಚಿವಾಲಯದ ಅಡಿಯಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment