Bank Application: ರೂ. 1.07 ಲಕ್ಷ ವೇತನ! ಶಿರಸಿ ಅರ್ಬನ್ ಬ್ಯಾಂಕ್‌ನಲ್ಲಿ ನೇಮಕಾತಿ । SSLC /ಡಿಗ್ರಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 28 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪದವಿ ಪೂರ್ಣಗೊಳಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನನ್ನು ಪ್ರಾರಂಭಿಸುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Sirsi Urban Bank Recruitment 2026


ಇಲ್ಲಿ ಒಟ್ಟು 40 ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹಾಗೂ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳು ಖಾಲಿ ಇದ್ದು, SSLC, ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನಾಂಕವಾಗಿರುತ್ತದೆ.

ಶಿರಸಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಹತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ.

Bank Application

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಯ ಹೆಸರು ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಹೆಸರು ಫ್ರೆಂಟ್ ಡೆಸ್ಕ್ ಅಸೋಸಿಯೇಟ್, ಸೆಕ್ಯುರಿಟಿ ಗಾರ್ಡ್
ಹುದ್ದೆಗಳ ಸಂಖ್ಯೆ ಒಟ್ಟು 40 ಹುದ್ದೆಗಳು
ಉದ್ಯೋಗ ಸ್ಥಳ ಶಿರಸಿ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನ ಕೇಂದ್ರ ಕಚೇರಿಗಳಲ್ಲಿ ಹಾಗೂ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹಾಗೂ ಸೂಕ್ಯುರಿಟಿ ಗಾರ್ಡ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಸಂಬಂಧಿಸಿದಂತೆ SSLC, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಇ ಪದವಿ ಪೂರ್ಣಗೊಳಿಸಿದ 18 ವರ್ಷದಿಂದ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಫ್ರೆಂಟ್ ಡೆಸ್ಕ್ ಅಸೋಸಿಯೇಟ್ (ಕಸ್ಟಮರ್ ರಿಲೇಷನ್ಶಿಪ್ ಅಸೋಸಿಯೇಟ್)30 ಹುದ್ದೆಗಳು
ಸೆಕ್ಯೂರಿಟಿ ಗಾರ್ಡ್ (ಅಟೆಂಡರ್, ಸಿಪಾಯಿ, ಭದ್ರತಾ ರಕ್ಷಕ)10 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಫ್ರೆಂಟ್ ಡೆಸ್ಕ್ ಅಸೋಸಿಯೇಟ್:

  • ಫ್ರೆಂಡ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಬಿಎಂ, ಬಿಇ, ಬಿಟೆಕ್ ಪದವಿಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರಬೇಕು.
    • ಬಿಎಸ್ಸಿ ಪದವೀಧರರು ಕಡ್ಡಾಯವಾಗಿ ಗಣಿತ ಮತ್ತು ಸಂಖ್ಯಾ ಶಾಸ್ತ್ರವನ್ನು ಐಚ್ಚಿಕ ವಿಷಯವಾಗಿ ಓದಿರಬೇಕು. ಬಿಎ ಪದವೀಧರರು ಗಣಿತ, ಸಂಖ್ಯಾಶಾಸ್ತ್ರ ಅಥವಾ ಅರ್ಥಶಾಸ್ತ್ರ ವಿಷಯವನ್ನು ಒಂದು ಐಚ್ಚಿಕ ವಿಷಯವಾಗಿ ವ್ಯಾಸಂಗ ಮಾಡಿರಬೇಕು.
    • ಇದರೊಂದಿಗೆ ಎಂಕಾಂ, ಎಂಬಿಎ, ಎಂಸಿಎ, ಗಣಿತ, ಸಂಖ್ಯಾಶಾಸ್ತ್ರ, ಅರ್ಥಶಾಸ್ತ್ರ ಅಕೌಂಟೆನ್ಸಿ ಅಥವಾ ಬ್ಯಾಂಕಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಸೆಕ್ಯುರಿಟಿ ಗಾರ್ಡ್:

  • ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ SSLC ಅಲ್ಲಿ ಪಾಸ್ ಆಗಿರಬೇಕು. ಹಾಗೂ ಶಾಲಾ ಹಂತದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹಾಗೂ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳ ಅನ್ವಯ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಗರಿಷ್ಟ ವಯೋಮಿತಿ ವಿವರ ಈ ಕೆಳಕಂಡಂತಿದೆ.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 43 ವರ್ಷ ಹಾಗೂ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -I ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಫ್ರೆಂಟ್ ಡೆಸ್ಕ್ ಅಸೋಸಿಯೇಟ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೂ ರೂ. 1,000/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಶಿರಸಿ ಇವರ ಹೆಸರಿಗೆ ಡಿಮೆಂಡ್ ಡ್ರಾಫ್ಟ್ ಮಾಡುವ ಮೂಲಕ ಪಾವತಿಸಬೇಕಾಗುತ್ತದೆ. ಆನ್ಲೈನ್ ಮೂಲಕ ಪಾವತಿಸಿದ ಅರ್ಜಿ ಶುಲ್ಕವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ.

ವೇತನ ಶ್ರೇಣಿ:

  • ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 34,100/- ರಿಂದ ರೂ. 1,07,500/- ವರೆಗೆ ವೇತನವನ್ನು ಪಡೆದುಕೊಳ್ಳಬಹುದಾಗಿದೆ.
  • ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 27,000/- ದಿಂದ ರೂ. 83,700/- ವರೆಗೆ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಶಿರಸಿ ಅರ್ಬನ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಡೌನ್ಲೋಡ್ ಮಾಡಿದ ಅರ್ಜಿ ನಮೂನೆಯಲ್ಲಿ ಕೇಳಲಾದ ತಮ್ಮ SSLC ಅಂಕಪಟ್ಟಿಯಲ್ಲಿರುವಂತೆ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸುಂಖ್ಯೆ, ಇಮೇಲ್ ವಿಳಾಸ ಹಾಗೂ ಎಲ್ಲ ವಿವರಗಳನ್ನು ತಮ್ಮ ಸ್ವಂತ ಹಸ್ತಾಕ್ಷರದಲ್ಲಿ ಭರ್ತಿ ಮಾಡಿ.
  • ಅರ್ಜಿಯಲ್ಲಿ ನಿಗದಿಪಡಿಸಿದ ಜಾಗದಲ್ಲಿ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
  • ಶೈಕ್ಷಣಿಕ ಅಂಕಪಟ್ಟಿ, ಶೈಕ್ಷಣಿಕ ಪ್ರಮಾಣಪತ್ರ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಅರ್ಜಿ ಶುಲ್ಕ ಪಾವತಿಸಿದ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಪಿನ್ ಮಾಡಿ.
  • ಇವುಗಳೆಲ್ಲವನ್ನು ಒಂದು ಲಕೋಟೆಗೆ ಹಾಕಿ ಕೊನೆಯ ದಿನಾಂಕದೊಳಗೆ ಅಂಚೆ ಮೂಲಕ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ:

ಮುಖ್ಯ ಕಾರ್ಯನಿರ್ವಹಣಾಧಿಕಾರಿ,

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್,

ಕೇಂದ್ರ ಕಚೇರಿ, ರಾಯರಪೇಟೆ, ಶಿರಸಿ -581 401

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ 200 ಅಂಕಗಳ ಬಹು ಆಯ್ಕೆಯ ಮಾದರಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಹಾಗೂ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳ ಬಹು ಆಯ್ಕೆ ಮಾದರಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ಸಂದರ್ಶನ:

ಲಿಖಿತ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ನಂತರ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು 85% ಗೆ ಪರಿವರ್ತಿಸಿ 15% ಅಂಕಗಳನ್ನು ಸಂದರ್ಶನಕ್ಕೆ ನಿಗದಿಪಡಿಸಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 07-07-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಫ್ರೆಂಟ್ ಡೆಸ್ಕ್ ಅಸೋಸಿಯೇಟ್ ಹಾಗೂ ಸೆಕ್ಯುರಿಟಿ ಗಾರ್ಡ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment