BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

BEL Recruitment in Kannada

ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 30-04-2026 ಕೊನೆಯ ದಿನಾಂಕವಾಗಿದೆ. ಬಿ.ಇ, ಬಿ.ಟೆಕ್, ಬಿ.ಎಸ್ಸಿ, ಎಂ.ಇ, ಎಂ.ಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಉಪ ವ್ಯವಸ್ಥಾಪಕ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

BEL

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆಯ ಹೆಸರು ಉಪ ವ್ಯವಸ್ಥಾಪಕ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 04 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ಸಂಕ್ಷಿಪ್ತ ವಿವರ:

ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಉಪ ವ್ಯವಸ್ಥಾಪಕ (ವಾಸ್ತುಶಿಲ್ಪ)1 ಹುದ್ದೆ
ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)1 ಹುದ್ದೆ
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)1 ಹುದ್ದೆ
ಜೂನಿಯರ್ ಇಂಜಿನಿಯರ್ (ಪರಿಸರ)1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಉಪ ವ್ಯವಸ್ಥಾಪಕ (ವಾಸ್ತುಶಿಲ್ಪ):

ಉಪ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಬಿ. ಆರ್ಚ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 8 – 9 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

  • ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್):

ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕ್ಯಾನಿಕ್ ನಲ್ಲಿ ಬಿ,ಇ, ಬಿ.ಟೆಕ್, ಬಿ.ಎಸ್ಸಿ ಹಾಗೂ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 4 – 5 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

  • ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್):

ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ನಲ್ಲಿ ಬಿ,ಇ, ಬಿ.ಟೆಕ್, ಬಿ.ಎಸ್ಸಿ ಹಾಗೂ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 4 – 5 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

  • ಜೂನಿಯರ್ ಇಂಜಿನಿಯರ್ (ಎನ್ವಿರಾನ್ಮೆಂಟಲ್):

ಜೂನಿಯರ್ ಇಂಜಿನಿಯರ್ (ಎನ್ವಿರಾನ್ಮೆಂಟಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮುಗಿಸಿ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ನಲ್ಲಿ ಎಂ.ಇ/ ಎಂ.ಟೆಕ್ ಪದವಿ ಪಡೆದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 2 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

  • ಉಪ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 36 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಜೂನಿಯರ್ ಇಂಜಿನಿಯರ್ (ಎನ್ವಿರಾನ್ಮೆಂಟಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ: 5ವರ್ಷ
  • ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸರ್ಕಾರ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಖಾಯಂ ಹುದ್ದೆಗಳಿಗೆ {ಉಪ ವ್ಯವಸ್ಥಾಪಕ, ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್)} – ₹600/- +18% GST
  • ನಿಗದಿತ ಅವಧಿಯ ಹುದ್ದೆಗೆ {ಜೂನಿಯರ್ ಇಂಜಿನಿಯರ್ (ಎನ್ವಿರಾನ್ಮೆಂಟಲ್)} – ₹400/- + 18% GST

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ಮಾತ್ರ ಈ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಹಾಗೆಯೇ ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

  • ಉಪ ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹60,000/- ದಿಂದ ₹1,80,000/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ₹50,000/- ದಿಂದ ₹1,60,000/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಮೂಲ ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇನ್ನಿತರ ಭತ್ಯೆಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಐಡಿ ಪ್ರೂಫ್
  • ವಯಸ್ಸಿನ ಪುರಾವೆ
  • ಶೈಕ್ಷಣಿಕ ಪ್ರಮಾಣಪತ್ರ
  • ಶೈಕ್ಷಣಿಕ ಅಂಕಪಟ್ಟಿ
  • ಜಾತಿ ಪ್ರಮಾಣಪತ್ರ
  • ಅನುಭವ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಂಡು, ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.

  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಯ ಸಹಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಐಡಿ ಪ್ರೂಫ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಒಂದು ಲಕೋಟೆಗೆ ಹಾಕಿ, ನೀವು ಯಾವ ರೀತಿಯ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಅಂದರೆ ಖಾಯಂ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಅಥವಾ ನಿಗದಿತ ಅವಧಿಯ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಎಂದು ಲಕೋಟೆಯ ಮೇಲೆ ಬರೆದು ಅವುಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ:

ಮ್ಯಾನೇಜರ್ (HR/ CSG),

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,

ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560 013

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ನೇರ ಸಂದರ್ಶನ

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಯಂ ಹುದ್ದೆಗಳು ಹಾಗೂ ನಿಗದಿತ ಅವಧಿಯ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ನಿಮ್ಮ ಆಯ್ಕೆಯ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment