BNPM: ರೂ. 52,000 ವೇತನ! ಮೈಸೂರು ನೋಟು ಮುದ್ರಣ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರಿನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂಬ ಕನಸ್ಸನ್ನು ಹೊತ್ತು ಶಿಕ್ಷಣವನ್ನು ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

BNPM Recruitment in Kannada

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಒಟ್ಟು 6 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಈ ಒಂದು ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೆ ರೀತಿ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

BNPM

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಯ ಹೆಸರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
ಹುದ್ದೆಯ ಹೆಸರು ಸಹಾಯಕ ವ್ಯವಸ್ಥಾಪಕ
ಹುದ್ದೆಯ ಸಂಖ್ಯೆ ಒಟ್ಟು 6 ಹುದ್ದೆಗಳು
ಉದ್ಯೋಗ ಸ್ಥಳ ಮೈಸೂರು – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್

ಹುದ್ದೆಯ ಬಗ್ಗೆ:

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 6 ಸಹಾಯಕ ವ್ಯವಸ್ಥಾಪಕ (ಹಣಕಾಸು ಮತ್ತು ಲೆಕ್ಕಪತ್ರ, ವಸ್ತು ನಿರ್ವಹಣೆ, ಸಿವಿಲ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರುವ ಬಿಕಾಂ, ಬಿಬಿಎ, ಬಿಇ, ಬಿ.ಟೆಕ್ ಹಾಗೂ ಇನ್ನಿತರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 11-04-2026 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ವ್ಯವಸ್ಥಾಪಕ (ವಸ್ತು ನಿರ್ವಹಣೆ)2 ಹುದ್ದೆಗಳು
ಸಹಾಯಕ ವ್ಯವಸ್ಥಾಪಕ (ಹಣಕಾಸು ಮತ್ತು ಲೆಕ್ಕಪತ್ರ)2 ಹುದ್ದೆಗಳು
ಸಹಾಯಕ ವ್ಯವಸ್ಥಾಪಕ (ಸಿವಿಲ್)2 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಸಹಾಯಕ ವ್ಯವಸ್ಥಾಪಕ (ವಸ್ತು ನಿರ್ವಹಣೆ):

ಸಹಾಯಕ ವ್ಯವಸ್ಥಾಪಕ (ವಸ್ತು ನಿರ್ವಹಣೆ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪೂರ್ಣ ಸಮಯದ ಬಿಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

  • ಸಹಾಯಕ ವ್ಯವಸ್ಥಾಪಕ (ಹಣಕಾಸು ಮತ್ತು ಲೆಕ್ಕಪತ್ರ):

ಸಹಾಯಕ ವ್ಯವಸ್ಥಾಪಕ (ಹಣಕಾಸು ಮತ್ತು ಲೆಕ್ಕಪತ್ರ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಚಾರ್ಟೆಡ್ ಅಕೌಂಟೆಂಟ್, ಮ್ಯಾನೇಜ್ಮೆಂಟ್ ಅಕೌಂಟೆಂಟ್ ಜೊತೆಗೆ ಬಿಕಾಂ ಹಾಗೂ ಬಿಬಿಎ ಪದವಿಯನ್ನು ಹೊಂದಿರಬೇಕು.

  • ಸಹಾಯಕ ವ್ಯವಸ್ಥಾಪಕ (ಸಿವಿಲ್):

ಸಹಾಯಕ ವ್ಯವಸ್ಥಾಪಕ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಸಿವಿಲ್ ಮತ್ತು ಸ್ಟ್ರಕ್ಚರಲ್ ಇಂಜಿನಿಯರಿಂಗ್ ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪೂರ್ಣ ಸಮಯದ ಬಿಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿಟಿಯನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ:

ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ ಅವುಗಳ ವಿವರ ಈ ಕೆಳಕಂಡಂತಿದೆ.

  • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
  • ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ₹800/-

ವೇತನ ಶ್ರೇಣಿ:

ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹52,000 ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಹಾಗೂ ಇನ್ನಿತರ ಭತ್ಯೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಈ ಕೆಳಗೆ ನೀಡಿರುವಂತೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BNPM ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯಲ್ಲಿ ಕೇಳಲಾದ ನಿಮ್ಮ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಸ್ಪಷ್ಟವಾಗಿ ಭರ್ತಿ ಮಾಡಿ
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ತಮ್ಮ ಶೈಕ್ಷಣಿಕ ದಾಖಲೆಗಳು, ವೈಯಕ್ತಿಕ ದಾಖಲೆಗಳು ಹಾಗೂ ಇನ್ನಿತರ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
  • ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಭರ್ತಿ ಮಡಿದ ಅರ್ಜಿ ನಮೂನೆಯೊಂದಿಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ.
“ಮುಖ್ಯ ಮಹಾಪ್ರಬಂಧಕರು,
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್,
ಆಡಳಿತ ಕಟ್ಟಡ, ಪೇಪರ್ ಮಿಲ್ ಕಾಂಪೌಂಡ್,
ನೋಟು ಮುದ್ರಣ ನಗರ,
ಮೈಸೂರು – 570 003

ಆಯ್ಕೆ ಪ್ರಕ್ರಿಯೆ:

  • (ಆನ್ಲೈನ್ ಅಥವಾ ಆಫ್ಲೈನ್) ಲಿಖಿತ ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 06-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 06-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ PDF ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೀವೇನಾದರೂ ಮೈಸೂರಿನಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದರೆ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ ಎಂದು ಖಚಿತಪಡಿಸಿಕೊಂಡು ಮೇಲೆ ನೀಡಲಾದ ವಿಳಾಸಕ್ಕೆ 11-04-2026 ರೊಳಗೆ ಅರ್ಜಿ ಸಲ್ಲಿಸಿ ನಿಮ್ಮ ಕನಸಿನ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.

ಇತರೆ ಪ್ರಮುಖ ಲಿಂಕುಗಳು:

Leave a Comment