ನಮಸ್ಕಾರ ಸ್ನೇಹಿತರೆ, ನಿಮ್ಮ ಕುಟುಂಬದಲ್ಲಿ ಯಾರಾದರೂ ರೋಗಿಗಳಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ಸಾದ್ಯವಾಗುತ್ತಿಲ್ಲವಾ? ಚಿಕಿತ್ಸೆಯನ್ನು ಕೊಡಿಸಲು ಹಣಕಾಸಿನ ಸಮಸ್ಯೆ ಎದುರಾಗುತ್ತಿದೀಯಾ? ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. ನೀವು ಒಂದು ರೂಪಾಯಿಯೂ ಖರ್ಚು ಮಾಡದೆ ರೂ. 500000 ವರೆಗೆ ಉಚಿತವಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಈ ಒಂದು ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಈ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದವರು, ನಗರ ವಾಸಿಗಳು ಸೇರಿದಂತೆ ಹಿರಿಯ ನಾಗರೀಕರು ಸಹ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳುವುದು ಹೇಗೆ? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ಸ್ಪಷ್ಟವಾಗಿ ನೀಡಿದ್ದು, ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ |
| ಜಾರಿಗೊಳಿಸಿದ ಸರ್ಕಾರ | ಕೇಂದ್ರ ಸರ್ಕಾರ |
| ವಿಮಾ ಮೊತ್ತ | ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ ರೂ. 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ |
| ಚಿಕಿತ್ಸೆಯ ಸ್ವರೂಪ | ನಗದು ರಹಿತ ಮತ್ತು ಕಾಗದ ರಹಿತ ಸೇವೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಯೋಜನೆಯ ಬಗ್ಗೆ:
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಯಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದ್ದು, ಈ ಒಂದು ಕಾರ್ಡ್ ಹೊಂದಿದ್ದರೆ ಮಾತ್ರ ಸರ್ಕಾರಿ ಅಥವಾ ಅನುದಾನಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ.
ಏನಿದು ಆಯುಷ್ಮಾನ್ ಭಾರತ್ ಕಾರ್ಡ್?
ಆಯುಷ್ಮಾನ್ ಭಾರತ್ ಕಾರ್ಡ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ನೀಡಲಾಗುವ ಡಿಜಿಟಲ್ ಆರೋಗ್ಯ ಐಡಿ ಕಾರ್ಡ್ ಆಗಿದೆ. ಈ ಒಂದು ಕಾರ್ಡ್ ಹೊಂದಿರುವ ಕುಟುಂಬಗಳು ಪ್ರತಿ ವರ್ಷ ಉಚಿತವಾಗಿ ರೂ. 500000 ವರೆಗೆ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಇದು ಎರಡನೇ ಹಾಗೂ ಮೂರನೇ ಹಂತದ ಆರೈಕೆಗಾಗಿ ಆಸ್ಪತೆಗೆ ಪ್ರವೇಶವನ್ನು ಪಡೆಯಬಹುದಾಗಿದೆ.
ಯೋಜನೆಯ ಉದ್ದೇಶ:
- ಪ್ರತಿ ಕುಟುಂಬಕ್ಕೂ ಆರೋಗ್ಯ ಭದ್ರತೆಯನ್ನು ಒದಗಿಸುವುದು:
ದೇಶದ ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳ ಸದಸ್ಯರಿಗೆ, ದುರ್ಬಲ ವರ್ಗದವರಿಗೆ ಸೇರಿದಂತೆ ಎಲ್ಲ ಕುಟುಂಬಗಳಿಗೂ ಕೂಡ ಉಚಿತವಾಗಿ ಎರಡನೇ ಹಾಗೂ ಮೂರನೇ ಹಂತದ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.
- ಸಾರ್ವತ್ರಿಕ ಆರೋಗ್ಯ ರಕ್ಷಣೆ ಒದಗಿಸುವುದು:
ಭಾರತದ ಪ್ರತಿಯೊಬ್ಬ ನಾಗರೀಕರಿಗೂ ಉಚಿತ ಹಾಗೂ ಸಮಾನ ಆರೋಗ್ಯ ಸೇವೆಯನ್ನು ಒದಗಿಸುವ ಮೂಲಕ ಆರೋಗ್ಯವಂತ ರಾಷ್ಟ್ರವನ್ನಾಗಿ ನಿರ್ಮಿಸುವುದು ಈ ಯೋಜನೆಯ ಉದ್ದೇಶವಾಗಿದೆ.
- ಆರ್ಥಿಕ ಹೊರೆಯನ್ನು ತಗ್ಗಿಸುವುದು:
ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸದಸ್ಯರಿಗೆ ಗಂಭೀರ ಕಾಯಿಲೆಗಳು ಬಂದಾಗ ಅವುಗಳಿಗೆ ಚಿಕಿತ್ಸೆಯನ್ನು ಪಡೆಯಲು ಸಾಲದ ಸುಳಿಕೆ ಸಿಲುಕುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ.
ಯೋಜನೆಯ ಪ್ರಯೋಜನಗಳು:
- ನಗದುರಹಿತ ಚಿಕಿತ್ಸೆಯನ್ನು ಪಡೆದುಕೊಳ್ಳಲು ಅವಕಾಶ:
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವ ಕುಟುಂಬಗಳು ಸರ್ಕಾರಿ ಅಥವಾ ಅನುದಾನಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುವಾಗ ಮುಂಗಡವಾಗಿ ಯಾವುದೇ ಹಣವನ್ನು ಪಾವತಿಸುವ ಅಗತ್ಯ ಇರುವುದಿಲ್ಲ.
- ರೂ. 5 ಲಕ್ಷದ ಉಚಿತ ವಿಮಾ ಸೌಲಭ್ಯ:
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಪ್ರತಿ ಕುಟುಂಬಕ್ಕೆ ಒಂದು ವರ್ಷಕ್ಕೆ ರೂ. ರೂ. 5 ಲಕ್ಷದ ಉಚಿತವಾಗಿ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.
- ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ:
ಈ ಒಂದು ಯೋಜನೆಯಡಿಯಲ್ಲಿ ಹೃದ್ರೋಗ, ಕ್ಯಾನ್ಸೆರ್ ಸೇರಿದಂತೆ ಇನ್ನಿತರ ಗಂಭೀರ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.
ಅರ್ಹ ಫಲಾನುಭವಿಗಳು ಯಾರು?
ಗ್ರಾಮೀಣ ಪ್ರದೇಶದ ಕುಟುಂಬಗಳು
ಗ್ರಾಮೀಣ ಭಾಗದಲ್ಲಿ ವಾಸಿಸುವ ಕೆಲವು ವಿಶೇಷ ವರ್ಗದ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ. ಉದಾಹರಣೆಗೆ:
- ಒಂದು ಕೊಠಡಿಯ ಕಚ್ಚಾ ಮನೆಯಲ್ಲಿ ವಾಸಿಸುವವರು
- ಕುಟುಂಬದಲ್ಲಿ ಆದಾಯ ಗಳಿಸುವ ಸದಸ್ಯರಿಲ್ಲದವರು
- ಮಹಿಳೆಯೇ ಕುಟುಂಬದ ಮುಖ್ಯಸ್ಥೆಯಾಗಿರುವ ಕುಟುಂಬಗಳು
- ಅಂಗವಿಕಲ ಸದಸ್ಯರನ್ನು ಹೊಂದಿರುವ ಕುಟುಂಬಗಳು
- ಭೂಹೀನ ಕೂಲಿ ಕಾರ್ಮಿಕರು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳು
- ನಿರಾಶ್ರಿತರು ಹಾಗೂ ಭಿಕ್ಷುಕರು
ನಗರ ಪ್ರದೇಶದ ಜನರು
ನಗರ ಪ್ರದೇಶದಲ್ಲಿ ದಿನಗೂಲಿ ಮತ್ತು ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕೆಲವು ವರ್ಗದ ಜನರಿಗೆ ಯೋಜನೆ ಅನ್ವಯಿಸುತ್ತದೆ. ಉದಾಹರಣೆಗೆ:
- ದಿನಗೂಲಿ ಕಾರ್ಮಿಕರು
- ಮನೆ ಕೆಲಸ ಮಾಡುವವರು
- ಆಟೋ ಅಥವಾ ರಿಕ್ಷಾ ಚಾಲಕರು
- ಕಟ್ಟಡ ನಿರ್ಮಾಣ ಕಾರ್ಮಿಕರು
- ಸ್ವಚ್ಛತಾ ಸಿಬ್ಬಂದಿ
- ಪ್ಲಂಬರ್, ಎಲೆಕ್ಟ್ರಿಷಿಯನ್, ಮೆಕಾನಿಕ್ ಮೊದಲಾದ ವೃತ್ತಿದಾರರು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಕೆಳಗಿನ ದಾಖಲೆಗಳು ಅಗತ್ಯವಾಗಬಹುದು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಸಕ್ರಿಯ ಮೊಬೈಲ್ ಸಂಖ್ಯೆ
- ವಿಳಾಸದ ದಾಖಲೆ
- ಕುಟುಂಬ ಗುರುತಿನ ದಾಖಲೆ
- ಅಗತ್ಯವಿದ್ದಲ್ಲಿ ಆದಾಯ ಪ್ರಮಾಣ ಪತ್ರ
- ಹಾಗೂ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಆನ್ಲೈನ್ ಮೂಲಕ
ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಮೊಬೈಲ್ OTP ಮೂಲಕ ಲಾಗಿನ್ ಮಾಡಿ, ಆಧಾರ್ ಅಥವಾ ರೇಷನ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಅರ್ಹತೆಯನ್ನು ಪರಿಶೀಲಿಸಬಹುದು. ಅರ್ಹತೆ ದೃಢಪಟ್ಟ ನಂತರ e-KYC ಪೂರ್ಣಗೊಳಿಸಿ ಆಯುಷ್ಮಾನ್ ಕಾರ್ಡ್ ಡೌನ್‌ಲೋಡ್ ಮಾಡಬಹುದು.
ಆಫ್‌ಲೈನ್ ಮೂಲಕ
ಇಂಟರ್ನೆಟ್ ಸೌಲಭ್ಯ ಇಲ್ಲದವರು ಸಮೀಪದ ಕೆಳಗಿನ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು:
- ಸಾಮಾನ್ಯ ಸೇವಾ ಕೇಂದ್ರ
- ಗ್ರಾಮ ಒನ್ / ಬೆಂಗಳೂರು ಒನ್ ಕೇಂದ್ರಗಳು
- ಸರ್ಕಾರಿ ಆಸ್ಪತ್ರೆಗಳು
- ಆಯುಷ್ಮನ್ ಮಿತ್ರ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ಆಯುಷ್ಮನ್ ಭಾರತ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ.
ಅಂತಿಮ ತೀರ್ಮಾನ:
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮನ್ ಭರತ್ ಕಾರ್ಡ್ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರೋಗ್ಯದ ಭದ್ರತೆ ನೀಡುವ ಮಹತ್ವದ ಯೋಜನೆಯಾಗಿದೆ. ಅನಾರೋಗ್ಯದ ಸಮಯದಲ್ಲಿ ಹೆಚ್ಚಿನ ಹಣ ಖರ್ಚಾಗದಂತೆ ಈ ಯೋಜನೆ ಸಹಾಯ ಮಾಡುತ್ತದೆ. ಅರ್ಹ ಕುಟುಂಬಗಳು ತಮ್ಮ ಹೆಸರನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಸಿಕೊಂಡರೆ ವರ್ಷಕ್ಕೆ ₹5 ಲಕ್ಷವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಬಹುದು.