ಈಗಷ್ಟೇ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾದ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 2026 ನೇ ಸಾಲಿನ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ.
CIL Recruitment 2026
ಇಲ್ಲಿ ಒಟ್ಟು 660 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಭಾರತದಾದ್ಯಂತ ಯಾವುದೇ ಭಾಗದಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 12-05-2026 ರಿಂದ ಆರಂಭಗೊಂಡು ದಿನಾಂಕ 11-06-2026 ಕ್ಕೆ ಕೊನೆಗೊಳ್ಳುತ್ತದೆ. ಸಿವಿಲ್, ಮೆಕ್ಯಾನಿಕಲ್, ಸಿಸ್ಟಮ್, ಎಲೆಕ್ಟ್ರಾನಿಕ್ಸ್ ಸೇರಿದಂತೆ ಇನ್ನಿತರ ವಿಭಾಗಳಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಕೋಲ್ ಇಂಡಿಯಾ ಲಿಮಿಟೆಡ್ |
| ಹುದ್ದೆಯ ಹೆಸರು | ಮ್ಯಾನೇಜ್ಮೆಂಟ್ ಟ್ರೈನಿ |
| ಹುದ್ದೆಯ ಸಂಖ್ಯೆ | ಒಟ್ಟು 660 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ ಮಾತ್ರ |
ಹುದ್ದೆಯ ಸಂಕ್ಷಿಪ್ತ ವಿವರ:
ಕೋಲ್ ಇಂಡಿಯಾ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಒಟ್ಟು 660 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ವಿಭಾಗಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗೆ ತಿಳಿದುಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಕಂಪನಿ ಸೆಕ್ರೆಟರಿ | 4 ಹುದ್ದೆಗಳು |
| ರಾಜಭಾಷಾ ಹಿಂದಿ | 5 ಹುದ್ದೆಗಳು |
| ಇಂಡಸ್ಟ್ರಿಯಲ್ ಇಂಜಿನಿಯರಿಂಗ್ | 11 ಹುದ್ದೆಗಳು |
| ಜಿಯಾಲಜಿ | 15 ಹುದ್ದೆಗಳು |
| ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ | 38 ಹುದ್ದೆಗಳು |
| ಸಿಸ್ಟಮ್ | 43 ಹುದ್ದೆಗಳು |
| ಮೆಕ್ಯಾನಿಕಲ್ | 145 ಹುದ್ದೆಗಳು |
| ಸಿವಿಲ್ | 178 ಹುದ್ದೆಗಳು |
| ಎಲೆಕ್ಟ್ರಿಕಲ್ | 221 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಸಿವಿಲ್, ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
- ಎಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಷನ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
- ಸಿಸ್ಟಮ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಐಟಿ ವಿಷಯದಲ್ಲಿ ಪ್ರಥಮ ದರ್ಜೆಯ ಬಿಇ, ಬಿಟೆಕ್ ಅಥವಾ ಎಂಸಿಎ ಪದವಿ ಹೊಂದಿರಬೇಕು.
- ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
- ಜಿಯಾಲಜಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಯಾಲಜಿ ಅಥವಾ ಅಪ್ಲೈಡ್ ಜಿಯಾಲಜಿ ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಎಂಎಸ್ಸಿ ಅಥವಾ ಎಂಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಜೊತೆಗೆ ಕಂಪನಿ ಸೆಕ್ರೆಟರಿ ಅರ್ಹತೆ ಮತ್ತು ಐಸಿಎಸ್ಐ ಸದಸ್ಯತ್ವ ಹೊಂದಿರಬೇಕು.
- ರಾಜಭಾಷಾ ಹಿಂದಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಎಂಎ ಪದವಿ ಪಡೆದಿರಬೇಕು. ಹಾಗೂ ಪದವಿ ಹಂತದಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಅನ್ನು ಮುಖ್ಯ ವಿಷಯವಾಗಿ ಆಯ್ಕೆ ಮಾಡಿಕೊಂಡು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
ಗಮನಿಸಿ:
- ಪ್ರಸ್ತುತ ಸಾಲಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 31-08-2026 ರ ಒಳಗೆ ತಮ್ಮ ಫಲಿತಾಂಶವನ್ನು ಪಡೆಯುವ ನಿರೀಕ್ಷೆ ಹೊಂದಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಒಟ್ಟು ಅಂಕಗಳಲ್ಲಿ 5% ಸಡಿಲಿಕೆ ನೀಡಲಾಗುತ್ತದೆ. ಅವರು ಕನಿಷ್ಠ 55% ಅಂಕವನ್ನು ಗಳಿಸಿದ್ರೆ ಸಾಕಾಗುತ್ತದೆ.
ವಯೋಮಿತಿ ವಿವರ:
ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 30 ಏಪ್ರಿಲ್ 2026 ಕ್ಕೆ ಅನ್ವಯವಾಗುವಂತೆ ಲೆಕ್ಕಹಾಕಲಾಗುತ್ತದೆ.
- ಸಾಮಾನ್ಯ ವರ್ಗದ ಹಾಗೂ ಆರ್ಥಿವಾಗಿ ಹೊಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಸಾಮಾನ್ಯವರ್ಗಗಕ್ಕೆ ಸೇರಿದ ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
- ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ವಿಕಲಚೇತನ ಅಭ್ಯರ್ಥಿಗಳಿಗೆ: 13 ವರ್ಷ
- ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿಕಲಚೇತನ ಅಭ್ಯರ್ಥಿಗಳಿಗೆ: 15 ವರ್ಷ
- ಕೋಲ್ ಇಂಡಿಯಾ ಸಂಸ್ಥೆಯ ಉದ್ಯೋಗಿಗಳಿಗೆ ಯಾವುದೇ ವಯೋಮಿತಿ ಇರುವುದಿಲ್ಲ
ಅರ್ಜಿ ಶುಲ್ಕ:
- ಸಾಮಾನ್ಯ, ಇ.ಡಬ್ಲ್ಯೂ.ಎಸ್ ಮತ್ತು ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ: ರೂ. 1000/- ಶುಲ್ಕ + ರೂ.180 GST
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹಾಗೆಯೆ ಕೊಲ್ ಇಂಡಿಯಾ ಲಿಮಿಟೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಕೂಡ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಈ ಮೇಲೆ ನೀಡಲಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿದುವುದಿಲ್ಲ.
ವೇತನ ಶ್ರೇಣಿ:
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇ -1 ಗ್ರೇಡ್ ಅಡಿಯಲ್ಲಿ ತರಬೇತಿ ಅವಧಿಯಲ್ಲಿ ಮಾಸಿಕ ರೂ. 60,000 ವೇತನವನ್ನು ನೀಡಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಒಟ್ಟು ವೇತನ ಶ್ರೇಣಿಯನ್ನು ರೂ. 60,000 ದಿಂದ ರೂ. 1,80,000 ವರೆಗೆ ನಿಗದಿಪಡಿಸಲಾಗಿದೆ. ಇದರ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ವೈದಕೀಯ ಸೌಲಭ್ಯಗಳು ಹಾಗೂ ಇನ್ನಿತರ ಸೌಲಭ್ಯಗಳು ದೊರೆಯುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ವೃತ್ತಿ ವಿಭಾಗದ ಅಡಿಯಲ್ಲಿ ನೀಡಿರುವ ಜಾಹಿರಾತು ಸಂಖ್ಯೆ 03/2026 ರ ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಿ.
- ಮೊದಲು ಅಗತ್ಯ ವಿವರಗಳೊಂದಿಗೆ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ಹಾಗೂ ಇತರೆ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆ:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಗೆ 3 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪೇಪರ್ ಒನ್ ಹಾಗೂ ಪೇಪರ್ ಟೂ ಎರಡು ವಿಭಾಗಳಾಗಿ ವಿಂಗಡಣೆ ಮಾಡಲಾಗಿದೆ ಪೇಪರ್ ಒನ್ ಅಲ್ಲಿ ಸಾಮಾನ್ಯ ಜ್ಞಾನ, ಇಂಗ್ಲಿಷ್ ಹಾಗೂ ರೀಸನಿಂಗ್ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹಾಗೂ ಎರಡನೇ ಪೇಪರ್ ನಲ್ಲಿ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವ ವೃತ್ತಿ ವಿಭಾಗಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತಿ ಪೇಪರ್ ತಲಾ 100 ಅಂಕಗಳನ್ನು ಒಳಗೊಂಡಿರುತ್ತದೆ.
- ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ:
ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಹಾಗೂ ವೈದ್ಯಕೀಯ ತಪಾಸಣೆಗೆ ಕರೆಯಲಾಗುತ್ತದೆ.
- ಅಂತಿಮ ಆಯ್ಕೆ:
ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು 5 ವರ್ಷಗಳ ಕಾಲ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಕುರಿತು 3 ಲಕ್ಷ ಮೌಲ್ಯದ ಸೇವಾ ಒಪ್ಪಂದದ ಬಾಂಡ್ ಅನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 12-05-2026 ಬೆಳಿಗ್ಗೆ 10:00 ಗಂಟೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2026 ಸಂಜೆ 6:00 ಗಂಟೆ ವರೆಗೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕೋಲ್ ಇಂಡಿಯಾ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಒಟ್ಟು 660 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 11-06-2026 ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಭಾರತ ಸರ್ಕಾರದ ಸೌಮ್ಯದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಲ್ಲಿನ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- SSB: ರೂ. 69,100/- ವೇತನ! ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2026 । ಜಸ್ಟ್ SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- Forest: ಅರಣ್ಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ 2026, 1,075 ಹುದ್ದೆ! ಇಂದು ಅಧಿಸೂಚನೆ ಪ್ರಕಟ
- CESC: ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-05-2026
- VS Bank: ₹92,500/- ವೇತನ! ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿ 2026 । ಮೇ 27 ಕೊನೆಯ ದಿನಾಂಕ
- IRIDO: ₹2,15,900/- ವೇತನ! 6300+ ಹುದ್ದೆಗಳ ಬೃಹತ್ ನೇಮಕಾತಿ! ಮೇ 31 ಕೊನೆಯ ದಿನಾಂಕ