ಈಗಾಗಲೇ ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬೆಂಗಳೂರಿನಲ್ಲಿ ವೃತ್ತಿಜೀವನ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
Court Job Recruitment in Kannada
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16-04-2026 ರಿಂದ ಹಿಡಿದು 15-05-2026 ರ ವರೆಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 90 ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಇದರಲ್ಲಿ 15 ಹುದ್ದೆಗಳನ್ನು ನೇರ ನೇಮಕಾತಿ ಹುದ್ದೆಗಳು ಹಾಗೂ 75 ಹುದ್ದೆಗಳನ್ನು ಬ್ಯಾಕ್ಲಾಗ್ ಹುದ್ದೆಗಳಾಗಿ ವಿಂಗಡಣೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಕರ್ನಾಟಕ ಹೈಕೋರ್ಟ್ |
| ಹುದ್ದೆಯ ಹೆಸರು | ಸಿವಿಲ್ ನ್ಯಾಯಾಧೀಶರು |
| ಹುದ್ದೆಯ ಸಂಖ್ಯೆ | 90 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
ಹುದ್ದೆಯ ಸಂಕ್ಷಿಪ್ತ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಸಿವಿಲ್ ನ್ಯಾಯಾಧೀಶರು (ಹೊಸ ನೇಮಕಾತಿ) | 15 ಹುದ್ದೆಗಳು |
| ಸಿವಿಲ್ ನ್ಯಾಯಾಧೀಶರು (ಬ್ಯಾಕ್ಲಾಗ್ ಹುದ್ದೆಗಳು) | 75 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಸಿವಿಲ್ ನ್ಯಾಯಾಧೀಶ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್.ಎಲ್ .ಬಿ ಪದವಿ ಹೊಂದಿರಬೇಕು.
- ಕನಿಷ್ಠ 3 ವರ್ಷಗಳ ಕಾಲ ನಿರಂತರವಾಗಿ ವಕೀಲರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
- ಕನಿಷ್ಠ 3 ವರ್ಷಗಳ ಕಾಲ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಸರ್ಕಾರಿ ವಕೀಲರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಿವಿಲ್ ನ್ಯಾಯಾಧೀಶ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 4೦ ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಪ್ರವರ್ಗ -1 ಒಬಿಸಿ ಅಭ್ಯರ್ಥಿಗಳಿಗೆ: 5 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 3 ವರ್ಷಗಳು
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
ಅರ್ಜಿ ಶುಲ್ಕ:
ಸಿವಿಲ್ ನ್ಯಾಯಾಧೀಶ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷಾ ಶುಲ್ಕ ಹಾಗೂ ಮುಖ್ಯ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿಸಿ.
ಪೂರ್ವಭಾವಿ ಪರೀಕ್ಷಾ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಪ್ರವರ್ಗ -1 ಹಾಗೂ PwBD ಅಭ್ಯರ್ಥಿಗಳಿಗೆ: ರೂ. 250/-
- ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 500/-
ಮುಖ್ಯ ಪರೀಕ್ಷೆ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಪ್ರವರ್ಗ -1 ಹಾಗೂ PwBD ಅಭ್ಯರ್ಥಿಗಳಿಗೆ: ರೂ. 750/-
- ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 1000/-
ವೇತನ ಶ್ರೇಣಿ:
ಸಿವಿಲ್ ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 77,840/- ದಿಂದ ರೂ. 1,36,520/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಸಿವಿಲ್ ನ್ಯಾಯಾಧೀಶ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ಲಾಗಿನ್ ಆಗಿ.
- ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ನಿಮ್ಮ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ:
ಪೂರ್ವಭಾವಿ ಪರೀಕ್ಷೆಯು ವಸ್ತುನಿಷ್ಠ ಪ್ರಕಾರ ನಡೆಯಲಿದ್ದು, ಒಟ್ಟು 100 ಅಂಕಗಳನ್ನು ಒಳಗೊಂಡಿರುತ್ತದೆ.
- ಮುಖ್ಯ ಲಿಖಿತ ಪರೀಕ್ಷೆ:
ಪೂರ್ವಭಾವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ 10% ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆ ಬರೆಯಲು ಆಯ್ಕೆ ಮಾಡಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ತಲಾ ನೂರು ಅಂಕಗಳ ಅನುವಾದ ಪತ್ರಿಕೆ, ಕಾನೂನು ಪತ್ರಿಕೆ I, ಕಾನೂನು ಪತ್ರಿಕೆ II, ಕಾನೂನು ಪತ್ರಿಕೆ III ಇರುತ್ತದೆ.
- ಮೌಖಿಕ ಪರೀಕ್ಷೆ:
ಕಾನೂನು ತತ್ವಗಳ ಗ್ರಹಿಕೆ, ಸಾಮಾನ್ಯ ಜ್ಞಾನ ಹಾಗೂ ಇನ್ನಿತರ ವಿಷಯಕ್ಕೆ ಸಂಬಂಧಿಸಿದ 100 ಅಂಕಗಳ ಮೌಖಿಕ ಪರೀಕ್ಷೆ ಇರುತ್ತದೆ.
- ಕಂಪ್ಯೂಟರ್ ಪರೀಕ್ಷೆ:
ಕೊನೆಯ ಹಂತದಲ್ಲಿ 25 ಅಂಕಗಳ ಕಂಪ್ಯೂಟರ್ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 16-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-05-2026 |
| ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ | 15-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಕರ್ನಾಟಕ ಹೈಕೋರ್ಟ್ ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕಾನೂನು ಪದವಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಗೌರವಯುತ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವು ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಿದ್ದರೆ ಇಂದೇ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- Fireman: 1828 ಫೈರ್ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026 | SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- LIC HFL: ರೂ. 4,98,108/- ವೇತನ! ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 ।ಏಪ್ರಿಲ್ 30 ಕೊನೆಯ ದಿನಾಂಕ
- SSC: ರೂ. 1,51,100/- ವೇತನ! 3000+ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ Apply ಮಾಡಿ
- Vikas Bank: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ! ಏಪ್ರಿಲ್ 24 ಕೊನೆಯ ದಿನಾಂಕ
- Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ