CSB: ಕೇಂದ್ರ ರೇಷ್ಮೆ ಮಂಡಳಿಯಲ್ಲಿ 80 ಹುದ್ದೆಗಳು, ಯಾವುದೇ ಅರ್ಜಿ ಶುಲ್ಕ ಹಾಗೂ ಲಿಖಿತ ಪರೀಕ್ಷೆ ಇಲ್ಲ!

ಭಾರತ ಸರ್ಕಾರದ ಜವಳಿ ಸಚಿವಾಲಯದ ಅಡಿಯಲ್ಲಿರುವ ಶಾಸನಬದ್ದ ಸಂಸ್ಥೆಯಾದ ಕೇಂದ್ರ ರೇಷ್ಮೆ ಮಂಡಳಿಯು 2026 ರಲ್ಲಿ ವಿವಿಧ ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

CSB Recruitment in Kannada

ಡಿಪ್ಲೋಮ, ಬಿ.ಎಸ್ಸಿ ಹಾಗೂ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ರೇಷ್ಮೆ ಮಂಡಳಿಯು ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಹಾಗೂ ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆ ಎನ್ನುವ ಎರಡು ವಿಭಾಗಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅಖಿಲ ಭಾರತದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಈ ಒಂದು ಲೇಖನದಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವಿವಿಧ ಹುದ್ದೆಗೆ ಸಂಬಂಧಿಸಿದ ಹುದ್ದೆಗಳ ಸಂಕ್ಷಿಪ್ತ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ ಹಾಗೂ ಇನ್ನಿತರ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

CSB

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಕೇಂದ್ರ ರೇಷ್ಮೆ ಮಂಡಳಿ
ಹುದ್ದೆಯ ಹೆಸರು ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 80 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ವಿಧಾನ

ಹುದ್ದೆಯ ಸಂಕ್ಷಿಪ್ತ ವಿವರ:

ಕೇಂದ್ರ ರೇಷ್ಮೆ ಮಂಡಳಿಯು ಎರಡು ವಿಭಾಗಗಳಲ್ಲಿ ಹುದ್ದೆಗಳನ್ನು ಹಂಚಿಕೆ ಮಾಡಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಆ ಎರಡು ವಿಭಾಗಗಳೆಂದರೆ,

  • ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆ:

ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 65 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವ ರಾಜ್ಯಕ್ಕೆ ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಭಾರತದ ಪ್ರಮುಖ ರಾಜ್ಯಗಳು ಹುದ್ದೆಗಳ ಸಂಖ್ಯೆ
ಕರ್ನಾಟಕ 31 ಹುದ್ದೆಗಳು
ಆಂಧ್ರಪ್ರದೇಶ 11 ಹುದ್ದೆಗಳು
ತಮಿಳುನಾಡು 10 ಹುದ್ದೆಗಳು
ಕೇರಳ 05 ಹುದ್ದೆಗಳು
ಉತ್ತರಾಖಂಡ್ 03 ಹುದ್ದೆಗಳು
ಪಶ್ಚಿಮ ಬಂಗಾಳ 01 ಹುದ್ದೆ
ಇತರೆ 04 ಹುದ್ದೆಗಳು
  • ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ:

ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಯಾವ ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಕೋಷ್ಟಕದಲ್ಲಿ ತಿಳಿದುಕೊಳ್ಳೋಣ.

ಭಾರತದ ಪ್ರಮುಖ ರಾಜ್ಯಗಳು ಹುದ್ದೆಗಳ ಸಂಖ್ಯೆ
ಕರ್ನಾಟಕ – ಬೆಂಗಳೂರು 7 ಹುದ್ದೆಗಳು
ಕರ್ನಾಟಕ – ರಾಮನಗರ 01 ಹುದ್ದೆ
ಕರ್ನಾಟಕ – ರಾಮಪುರ 01 ಹುದ್ದೆ
ಅಸ್ಸಾಂ – ಗುಟವಾಡಿ 01 ಹುದ್ದೆ
ಛತ್ತೀಸ್ ಗಢ – ಬಿಲಾಸ್ ಪುರ 01 ಹುದ್ದೆ
ಒರಿಸ್ಸ – ಕಟಕ್ 01 ಹುದ್ದೆ
ಉತ್ತರಪ್ರದೇಶ – ವಾರಣಾಸಿ 01 ಹುದ್ದೆ
ಬಿಹಾರ – ಭಾಗಲಪುರ 01 ಹುದ್ದೆ
ತಮಿಳುನಾಡು – ಕಾಂಚೀಪುರಂ 01 ಹುದ್ದೆ

ಶೈಕ್ಷಣಿಕ ಅರ್ಹತೆ:

ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ:

  • ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
    • ಅಭ್ಯರ್ಥಿಗಳು ಟೆಸ್ಟ್ರೈಲ್ ಟೆಕ್ನಾಲಜಿ, ಟೆಸ್ಟ್ರೈಲ್ ಕೆಮಿಸ್ಟ್ರಿ, ಹ್ಯಾಂಡ್ಲೂಮ್ ಅಥವಾ ಸಿಲ್ಕ್ ಟೆಕ್ನಾಲಜಿಯಲ್ಲಿ 3 ವರ್ಷದ ಡಿಪ್ಲೋಮಾ ಪದವಿಯನ್ನು ಹೊಂದಿರಬೇಕು. ಅಥವಾ ಟೆಸ್ಟ್ರೈಲ್ ಮತ್ತು ಅದಕ್ಕೆ ಸಂಬಂಧಿಸಿದ ವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ ಪದವಿ ಪಡೆದಿರಬೇಕು.
    • ಬಿ.ಟೆಕ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆ:

  • ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆಯಲ್ಲಿ ಖಾಲಿ ಇರುವ ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
    • ಅಭ್ಯರ್ಥಿಗಳು ಸೆರಿಕಲ್ಚರ್ ನಲ್ಲಿ 3 ಅಥವಾ 4 ವರ್ಷದ ಪೂರ್ಣಾವಧಿಯ ಪದವಿಯನ್ನು ಹೊಂದಿರಬೇಕು ಅಥವಾ ಅಭ್ಯರ್ಥಿಗಳು ಸಾಮಾನ್ಯ ಪದವಿಯನ್ನು ಹೊಂದಿದ್ದು, ಸೆರಿಕಲ್ಚರ್ ನಲ್ಲಿ ಪಿಜಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
    • ಪ್ರಾಣಿ ಶಾಸ್ತ್ರ, ಸಸ್ಯ ಶಾಸ್ತ್ರ ಅಥವಾ ಜೀವಶಾಸ್ತ್ರದಲ್ಲಿ ಪದವಿ ಪಡೆದು ಪಿಜಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಅಥವಾ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.
    • ಕೃಷಿ ವಿಜ್ಞಾನದಲ್ಲಿ 4 ವರ್ಷದ ಬಿ.ಎಸ್ಸಿ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ ವಿವರ:

13-04-2026 ರ ದಿನಾಂಕ ಅನ್ವಯವಾಗುವಂತೆ ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಹಾಗೂ ರಾಷ್ಟೀಯ ರೇಷ್ಮೆ ಹುಳು ಬೀಜ ಸಂಸ್ಥೆಗಳಲ್ಲಿ ಖಾಲಿ ಇರುವ ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ಕೆಲವು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಕೇಂದ್ರ ರೇಷ್ಮೆ ಮಂಡಳಿಯು 2026 ರ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೇ ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000 ವೇತನವನ್ನು ನೀಡಲಾಗುತ್ತದೆ ಹಾಗೂ ಇವುಗಳ ಜೊತೆಗೆ ಸರ್ಕಾರದ ಕೆಲವು ನಿಯಮಗಳ ಮನೆ ಬಾಡಿಗೆಯ ಭತ್ಯೆಯನ್ನು ಕೂಡ ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಸೆರಿಕಲ್ಚರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

  • ಅಭ್ಯರ್ಥಿಗಳು ಮೊದಲು ಕೇಂದ್ರ ರೇಷ್ಮೆ ಮಂಡಳಿಯ ಅಧಿಕೃತ ವೆಬ್ಸೈಟ್ https://csb-hiring.in/ ಗೆ ಭೇಟಿ ನೀಡಿ.
  • ನಂತರ ಅಲ್ಲಿ ನಿಮ್ಮ ಹೆಸರು, ಇಮೇಲ್ ಅಡ್ರೆಸ್ಸ್ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ರೆಜಿಸ್ಟರ್ ಮಾಡಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಹಾಗೂ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಿ ಶಾರ್ಟ್ ಲಿಸ್ಟ್ ಮಾಡಲಾಗುವುದು.

  • ವೈಯಕ್ತಿಕ ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನ ನಡೆಯುವ ದಿನಾಂಕ, ಸ್ಥಳ ಹಾಗೂ ಸಮಯವನ್ನು ಅಭ್ಯರ್ಥಿಗಳ ಇಮೇಲ್ ವಿಳಾಸಕ್ಕೆ ಕಳುಹಿಸಲಾಗುತ್ತದೆ.

  • ಅಂತಿಮ ಆಯ್ಕೆ:

ವೈಯಕ್ತಿಕ ಸಂದರ್ಶನದಲ್ಲಿ ಅಭ್ಯರ್ಥಿಗಳ ಭಾಗವಹಿಸುವಿಕೆಯನ್ನು ಪರಿಗಣಿಸಿ ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 12-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 12-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಕೇಂದ್ರ ರೇಷ್ಮೆ ಮಂಡಳಿಯು ವಿವಿಧ ಸಂಸ್ಥೆಗಳ ಅಡಿಯಲ್ಲಿ ಸೆರಿಕಲ್ಚರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಲಾದ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸಿದರೆ 13-04-2026 ರೊಳಗೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ


ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:

Leave a Comment