CSC Aadhaar: ಆಧಾರ್ ಸೇವಾ ಕೇಂದ್ರದಲ್ಲಿ ಬೃಹತ್ ನೇಮಕಾತಿ 2026! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 20

CSC Aadhaar: ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! CSC ಇ – ಗವರ್ನೆನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ದೇಶದಾದ್ಯಂತೆ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ್ ಸೇವಾ ಕೇಂದ್ರಗಳಲ್ಲಿ ಒಟ್ಟು 245 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ದಿನಾಂಕ 13-04-2026 ರಿಂದ ಆರಂಭಗೊಂಡು 20-05-2026 ಕ್ಕೆ ಕೊನೆಗೊಳ್ಳುತ್ತದೆ.

ಯಾವ ರಾಜ್ಯಕ್ಕೆ ಎಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ? ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಯಾರು? ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

CSC Aadhaar

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಆಧಾರ್ ಸೇವಾ ಕೇಂದ್ರ
ಹುದ್ದೆಯ ಹೆಸರು ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್
ಹುದ್ದೆಯ ಸಂಖ್ಯೆ 245 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ವಿವರ:

ಆಧಾರ್ ಸೇವಾ ಕೇಂದ್ರವು ಪ್ರಸ್ತುತ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಹೊರಡಿಸಿದ ಹುದ್ದೆಗಳ ವಿವರ ಈ ಕೆಳಕಂಡಂತಿದೆ. ಈ ಹುದ್ದೆಗಳನ್ನು ದೇಶದಾದ್ಯಂತ ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಬಿಹಾರ 98 ಹುದ್ದೆಗಳು
ಕರ್ನಾಟಕ 75 ಹುದ್ದೆಗಳು
ಮಧ್ಯಪ್ರದೇಶ 25 ಹುದ್ದೆಗಳು
ಅಸ್ಸಾಂ 19 ಹುದ್ದೆಗಳು
ಒಡಿಶಾ 08 ಹುದ್ದೆಗಳು
ಆಂಧ್ರ ಪ್ರದೇಶ 04 ಹುದ್ದೆಗಳು
ಉತ್ತರ ಪ್ರದೇಶ 03 ಹುದ್ದೆಗಳು
ರಾಜಸ್ಥಾನ್ 03 ಹುದ್ದೆಗಳು
ದೆಹಲಿ 03 ಹುದ್ದೆಗಳು
ಹರಿಯಾಣ 02 ಹುದ್ದೆಗಳು
ಜಮ್ಮು ಮತ್ತು ಕಾಶ್ಮೀರ 02 ಹುದ್ದೆಗಳು
ಲಡಾಖ್ 01 ಹುದ್ದೆ
ತಮಿಳುನಾಡು 01 ಹುದ್ದೆ
ಜಾರ್ಖಂಡ್ 01 ಹುದ್ದೆ

ಶೈಕ್ಷಣಿಕ ಅರ್ಹತೆ:

ಆಧಾರ್ ಸೂಪರ್ ವೈಸರ್ ಹಾಗೂ ಆಧಾರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಧಾರ್ ಸೇವಾ ಕೇಂದ್ರಗಳ ನಿಯಮಗಳ ಪ್ರಕಾರ ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC, PUC, ಐಟಿಐ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಅಭ್ಯರ್ಥಿಗಳು ಆಧಾರ್ ಸೇವೆಗೆ ಸಂಬಂಧಿಸಿದಂತೆ ರಾಷ್ಟೀಯ ಪರೀಕ್ಷಾ ಸಂಸ್ಥೆಯಿಂದ ನೀಡಲಾದ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಕಂಪ್ಯೂಟರ್ ಬಳಕೆಯ ಬಗ್ಗೆ ಕನಿಷ್ಠ ಜ್ಞಾನವನ್ನು ಹಾಗೂ ದತ್ತಾಂಶ ನಮೂನೆಯಲ್ಲಿ ವೇಗವನ್ನು ಹೊಂದಿರಬೇಕು.
  • ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆಗಳಾದ ಕನ್ನಡವನ್ನು ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.

ವಯೋಮಿತಿ ವಿವರ:

ಆಧಾರ್ ಸೇವಾ ಕೇಂದ್ರಗಳಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 23-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ನೇಮಕಾತಿ ಮಂಡಳಿಯ ಕೆಲವು ಮಾನದಂಡಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:

ಆಧಾರ್ ಆಪರೇಟರ್ ಹಾಗೂ ಆಧಾರ್ ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಫ್ರೀ ಆಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಆಧಾರ್ ಆಪರೇಟರ್ ಹಾಗೂ ಆಧಾರ್ ಸೂಪರ್ ವೈಸರ್ ಹುದ್ದೆಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದರಿಂದ ಆಧಾರ್ ಸೇವಾ ಕೇಂದ್ರಗಳ ಅಧಿಕೃತ ನಿಯಮಗಳ ಪ್ರಕಾರ ವೇತನವನ್ನು ನಿಗದಿಪಡಿಸಗಳುತ್ತದೆ. ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವ ಹಾಗೂ ಇನ್ನಿತರ ಅರ್ಹತೆಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಧಾರ್ ಆಪರೇಟರ್ ಹಾಗೂ ಆಧಾರ್ ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಕೆಳಗೆ ನೀಡಿರುವಂತೆ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಆಧಾರ್ ಸೇವಾ ಕೇಂದ್ರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ನೇಮಕಾತಿ ವಿಭಾಗಕ್ಕೆ ಹೋಗಿ 2026 ನೇ ಸಾಲಿನ ಆಧಾರ್ ಆಪರೇಟರ್ ಹಾಗೂ ಆಧಾರ್ ಸೂಪರ್ ವೈಸರ್ ಹುದ್ದೆಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಅಧಿಸೂಚನೆಯಲ್ಲಿ ನೀಡಲಾದ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಸಹಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇಲ್ಲಿ ಅಭ್ಯರ್ಥಿಗಳು ಹೊಂದಿರುವ ಸಾಮಾನ್ಯ ಜ್ಞಾನ, ಆಧಾರ್ ನಿಯಮಾವಳಿಗಳ ಬಗ್ಗೆ ಇರುವ ತಿಳುವಳಿಕೆ ಕುರಿತು ಪರೀಕ್ಷಿಸಲಾಗುತ್ತದೆ.

  • ಸಂದರ್ಶನ:

ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಅಂತಿಮವಾಗಿ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ13-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-05-2026
ಲಿಖಿತ ಪರೀಕ್ಷೆ ನಡೆಯುವ ದಿನಾಂಕ ಶೀಘ್ರದಲ್ಲಿ ಪ್ರಕಟಿಸುತ್ತದೆ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಆಧಾರ್ ಸೇವಾ ಕೇಂದ್ರವು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಹೊಂದಿದ್ದೇವೆಯೇ ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.


ಇತರೆ ಪ್ರಮುಖ ಲಿಂಕುಗಳು:

Leave a Comment