CUK: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

ನಮಸ್ಕಾರ ಸ್ನೇಹಿತರೆ, ನಿಮಗೇನಾದರೂ ಡೇಟಾ ಎಂಟ್ರಿ ಮತ್ತು ಡೇಟಾ ಅನಾಲಿಸಿಸ್ ಅಲ್ಲಿ ಪರಿಣಿತಿ ಹೊಂದಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ ಒದಗಿಬಂದಿದೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.

CUK Recruitment in Kannada

ಕಲಬುರಗಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಈ ಒಂದು ಹುದ್ದೆಗೆ ಇಂಟರೆಸ್ಟ್ ಹೊಂದಿರುವ ಅಭ್ಯರ್ಥಿಗಳು ದಿನಾಂಕ 23-04-2026 ಕ್ಕೆ ನಡೆಯುವ ವಾಕ್ ಇನ್ ಇಂಟರ್ವ್ಯೂ ಗೆ ಹಾಜರಾಗಬಹುದು.

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆಯಾಗಲಿ ಹಾಗೂ ಅರ್ಜಿ ಶುಲ್ಕವಾಗಲಿ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಹಾಗೂ ವಯೋಮಿತಿ ವಿವರಗಳನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

CUK

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಗಳ ಹೆಸರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು ಡೇಟಾ ಎಂಟ್ರಿ ಆಪರೇಟರ್
ಹುದ್ದೆಗಳ ಸಂಖ್ಯೆ ಒಂದು ಹುದ್ದೆ
ಉದ್ಯೋಗ ಸ್ಥಳ ಕಲಬುರಗಿ – ಕರ್ನಾಟಕ
ನೇಮಕಾತಿ ವಿಧಾನ ನೇರ ಸಂದರ್ಶನ

ಹುದ್ದೆಯ ವಿವರ:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಒಂದು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಶೈಕ್ಷಣಿಕ ಅರ್ಹತೆ:

  • ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ MA, M.Sc, MBA ಹಾಗೂ M.Com ಪದವಿ ಹೊಂದಿರಬೇಕು.
  • ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
  • ಅಭ್ಯರ್ಥಿಗಳಿಗೆ ಡೇಟಾಗಳನ್ನು ವಿಶ್ಲೇಷಿಸುವ ಕೌಶಲ್ಯ ಇರಬೇಕು.

ವಯೋಮಿತಿ ವಿವರ:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಹಾಗೂ ಸರ್ಕಾರದ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ನಿಗದಿಪಡಿಸಿದ ವಿಳಾಸಕ್ಕೆ ಭೇಟಿ ನೀಡಿ ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

ವೇತನ ಶ್ರೇಣಿ:

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ https://cuk.ac.in ಗೆ ಭೇಟಿ.
  • ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ಜಾಬ್ ಒಪೆರ್ಚುನಿಟಿಸ್ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಡೇಟಾ ಎಂಟ್ರಿ ಆಪರೇಟರ್ ಹುದ್ದೆಯ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು, ಮೊಬೈಲ್ ಸಂಖ್ಯೆಯನ್ನು ಭರ್ತಿಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಫೋಟೋ ಇನ್ನಿತರ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ದಿನಾಂಕ 23-04-2026 ಕ್ಕೆ ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಿ.
  • ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗವಹಿಸುವ ಮೊದಲು ನಿಮ್ಮ ಅರ್ಜಿ ಪ್ರತಿಯನ್ನು [email protected] ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಆಯ್ಕೆ ಪ್ರಕ್ರಿಯೆ:

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಮೆಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನ ನಡೆಯುವ ದಿನಾಂಕ ಮತ್ತು ಸ್ಥಳ:

  • ಸಂದರ್ಶನ ನಡೆಯುವ ದಿನಾಂಕ: 23-04-2026
  • ಸಂದರ್ಶನ ನಡೆಯುವ ಸ್ಥಳ: ರಿಜಿಸ್ಟ್ರಾರ್ ಕಚೇರಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಆಳಂದ ರಸ್ತೆ, ಕಡಗಂಜಿ, ಕಲಬುರಗಿ – 585 367

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಸೂಚನೆ ಬಿಡುಗಡೆ ಗೊಂಡ ದಿನಾಂಕ 15-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-04-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳು ಎಂಎ, ಎಂಕಾಂ, ಎಂಎಸ್ಸಿ ಹಾಗೂ ಇನ್ನಿತರ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ದಿನಾಂಕ 23-04-2026 ಕ್ಕೆ ಕಲಬುರಗಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.


ಇತರೆ ಪ್ರಮುಖ ಲಿಂಕುಗಳು:

Leave a Comment