ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪದವಿ ಪೂರ್ಣಗೊಳಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
DCC Bank Recruitment in Kannada
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ದಿನಾಂಕ 04-05-2026 ಕ್ಕೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕ್ ತನ್ನ ಆಡಳಿತ ಹಾಗೂ ಹಣಕಾಸಿನ ನಿರ್ವಹಣೆಯನ್ನು ಬಲಪಡಿಸವ ಉದ್ದೇಶದಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬ್ಯಾಂಕಿಂಗ್ ನ ದೈನಂದಿನ ಚಟುವಟಿಕೆಗಳನ್ನು, ಹಣಕಾಸು ಯೋಜನೆಗಳ ಮೇಲ್ವಿಚಾರಣೆ, ಸಾಲ ವಿತರಣೆ ಹಾಗೂ ಶಾಖಾ ನಿರ್ವಹಣೆ ಹಾಗೂ ಇನ್ನಿತರ ಜವಾಬ್ದಾರಿಗಳನ್ನು ನಿರ್ವಹಿಸಬೇಕಾಗುತ್ತದೆ.
ಸಹಕಾರಿ ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹಾಗೆಯೇ ಕರ್ನಾಟಕ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಗೋಲ್ಡನ್ ಚಾನ್ಸ್. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆಯ ಹೆಸರು | ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ |
| ಹುದ್ದೆಯ ಹೆಸರು | ಜನರಲ್ ಮ್ಯಾನೇಜರ್ |
| ಹುದ್ದೆಯ ಸಂಖ್ಯೆ | ವಿವಿಧ ಹುದ್ದೆಗಳು |
| ಉದ್ಯೋಗ ಸ್ಥಳ | ಬೀದರ್ – ಕರ್ನಾಟಕ |
| ಅರ್ಜಿ ಸಲ್ಲಿಸುವ ಪ್ರಕ್ರಿಯೆ | ಆಫ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-05-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಮತ್ತು ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ವೃತ್ತಿಪರ ಅನುಭವ ಹೊಂದಿರುವ ಗರಿಷ್ಟ 65 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯುತ್ತದೆ.
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಣಕಾಸು, ಅರ್ಥಶಾಸ್ತ್ರ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
- ಜಿಲ್ಲಾ ಸಹಕಾರಿ ಬ್ಯಾಂಕ್ ಅಥವಾ ಇತರೆ ಸಹಕಾರಿ ಬ್ಯಾಂಕ್ ಗಳಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಅಭ್ಯರ್ಥಿಗಳು ಬ್ಯಾಂಕಿಂಗ್, ಹಣಕಾಸು ಅಥವಾ ಆಡಳಿತ ಕ್ಷೇತ್ರದಲ್ಲಿ ಕನಿಷ್ಠ 10 ರಿಂದ 15 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷಕ್ಕಿಂತ ಕಡಿಮೆ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ, ಪ್ರವರ್ಗ- 1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 2000/-
- ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ 5000/-
ವೇತನ ಶ್ರೇಣಿ:
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನ ಕೆಲವು ನಿಯಮಗಳನುಸಾರ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಅಗತ್ಯ ದಾಖಲೆಗಳು:
- ಪದವಿ ಅಥವಾ ಸ್ನಾತಕೋತ್ತರ ಪದವಿ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಅನುಭವ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವಂತೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಆಸಕ್ತ ಅಭ್ಯರ್ಥಿಗಳು ಮೊದಲು ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿಮಾಡಿ.
- ಮೊದಲು ಅಗತ್ಯ ವಿವರಗಳೊಂದಿಗೆ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ ಲಾಗಿನ್ ಆಗಿ.
- ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿ ಹಾಗೂ ಮೇಲೆ ನೀಡಲಾದ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
- ಭರ್ತಿಮಾಡಿದ ವಿವರಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ:
- “ಮುಖ್ಯ ಕಾರ್ಯನಿವಹಣಾಧಿಕಾರಿಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್, ಬೀದರ್ ಕೇಂದ್ರ ಕಚೇರಿ, ಬಸವೇಶ್ವರ ಚೌಕ, ಬೀದರ್ -585401”
ಹಾಗೂ ಅಪ್ಲಿಕೇಶನ್ ಫಾರ್ಮ್ ನ ಸಾಫ್ಟ್ ಕಾಪಿ ಅನ್ನು [email protected] ಇಮೇಲ್ ವಿಳಾಸಕ್ಕೆ ಕಡ್ಡಾಯವಾಗಿ ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಲಿಖಿತ ಪರೀಕ್ಷೆ:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ಸಂದರ್ಶನ:
ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ನಂತರದ ಹಂತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 04-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಪ್ರಸ್ತುತ ಸಾಲಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದು, ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದರೆ ಇಂದೇ ಸಂಬಂಧಿತ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
CIL: ರೂ. 1.8 ಲಕ್ಷ ವೇತನ! ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ । ಕೊನೆಯ ದಿನಾಂಕ 11-06-2026
Forest: ಅರಣ್ಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ 2026, 1,075 ಹುದ್ದೆ! ಇಂದು ಅಧಿಸೂಚನೆ ಪ್ರಕಟ
CESC: ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-05-2026
VS Bank: ₹92,500/- ವೇತನ! ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿ 2026 । ಮೇ 27 ಕೊನೆಯ ದಿನಾಂಕ