ನಮಸ್ಕಾರ ಸ್ನೇಹಿತರೆ, ಬೆಳಗಾವಿಯ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 140 SDA, FDA, ಡ್ರೈವರ್, ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಶೀಘ್ರದಲ್ಲಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ.
DCC Bank Recruitment in Kannada
SSLC, PUC ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಪ್ರಸ್ತುತ ಈ ಒಂದು ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಿತಿ ವಿವರ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಗಾಗಿ ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನೇಮಕಾತಿ ಅಧಿಸೂಚನೆ ಹೊರಡಿಸಿದ ನಂತರ ನಿಗಿದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಗಳ ಹೆಸರು | ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಬೆಳಗಾವಿ |
| ಹುದ್ದೆಗಳ ಹೆಸರು | SDA, FDA, ಡ್ರೈವರ್, ಅಟೆಂಡರ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 140 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಳಗಾವಿ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ವಿವರ:
ಬೆಳಗಾವಿ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ- ಆಪರೇಟಿವ್ ಬ್ಯಾಂಕ್ ಪ್ರಸ್ತುತ ಸಾಲಿನಲ್ಲಿ ಫಸ್ಟ್ ಡಿವಿಷನ್ ಅಸಿಸ್ಟೆಂಟ್, ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್, ಡ್ರೈವರ್, ಅಟೆಂಡರ್ ಸೇರಿದಂತೆ ಒಟ್ಟು 140 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.
ಶೈಕ್ಷಣಿಕ ಅರ್ಹತೆ:
ಬೆಳಗಾವಿ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ.
- ಫಸ್ಟ್ ಡಿವಿಷನ್ ಅಸಿಸ್ಟೆಂಟ್:
ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ ಕಾರ್ಯಾಚರಣೆ ಹಾಗೂ ಅಪ್ಲಿಕೇಶನ್ ಜ್ಞಾನವನ್ನು ಕಡ್ಡಾಯ್ವಾಗಿ ಹೊಂದಿರಬೇಕು.
- ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್:
ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಡ್ರೈವರ್:
ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕಡ್ಡಾಯವಾಗಿ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಅಟೆಂಡರ್:
ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡವನ್ನು ಓದಲು ಬರೆಯಲು ಕಡ್ಡಾಯವಾಗಿ ಬರಬೇಕು.
ವಯೋಮಿತಿ ವಿವರ:
ಬೆಳಗಾವಿಯ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಅವುಗಳ ವಿವರ ಈ ಕೆಳಕಂಡಂತಿದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹಾಗೆಯೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಅರ್ಜಿ ಶುಲ್ಕಗಳ ಬಗ್ಗೆ ನಿಖರವಾದ ಮಾಹಿತಿ ಅಧಿಸೂಚನೆ ಹೊರಡಿಸಿದ ನಂತರವಷ್ಟೇ ದೊರೆಯಲಿದೆ.
ವೇತನ ಶ್ರೇಣಿ:
ಬೆಳಗಾವಿಯ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ SDA, FDA, ಅಟೆಂಡರ್, ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೆಳಗಾವಿ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ- ಆಪರೇಟಿವ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ನಂತರ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನ್ಯೂ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಮತ್ತು ಅನುಭವದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿ ಹಾಗೂ ಎಡಗೈ ಹೆಬ್ಬೆರಳ ಗುರುತು ಹಾಗೂ ನಿಗದಿತ ಹಸ್ತ ಪ್ರತಿಗಳ ಘೋಷಣೆಯನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಸಾಮಾನ್ಯವಾಗಿ ಡಿಸಿಸಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವಂತೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಲಿಖಿತ ಪರೀಕ್ಷೆ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ವಸ್ತು ನಿಷ್ಠ ಮಾದರಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯು ಸಾಮಾನ್ಯ ಜ್ಞಾನ, ಇಂಗ್ಲಿಷ್ ಭಾಷೆ, ಕನ್ನಡ ಭಾಷೆ ಹಾಗೂ ಇನ್ನಿತರ ವಿಷಯಗಳನ್ನು ಒಳಗೊಂಡಿರುತ್ತದೆ.
- ಸಂದರ್ಶನ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ನಂತರ ಕೊನೆಯ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | ಶೀಘ್ರದಲ್ಲಿ ಬಿಡುಗಡೆ ಆಗಲಿದೆ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲಿ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಒಟ್ಟು 140 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಆಯ್ಕೆಯ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೆ ಅಧಿಸೂಚನೆ ಹೊರಡಿಸಿದ ನಂತರ ನಿಗದಿತ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2026 | ಮೇ 21 ಕೊನೆಯ ದಿನಾಂಕ
- Mysore Court: ₹83,700 ವೇತನ! SSLC / PUC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ । ಇಂದೇ ಅಪ್ಲೈ ಮಾಡಿ
- HLL: SSLC ಪಾಸ್ ಆದವರಿಗೆ ಸರ್ಕಾರಿ ಡ್ರೈವರ್ ಜಾಬ್! ಮೇ 06 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ
- SBTSSN: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ । ಏಪ್ರಿಲ್ 30 ಕೊನೆಯ ದಿನಾಂಕ
- Court Job : ₹69,100/- ವೇತನ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ । ಇಂದೇ ಅಪ್ಲೈ ಮಾಡಿ