DHFWS: ₹1.30 ಲಕ್ಷ ವೇತನ! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ನಮಸ್ಕಾರ ಸ್ನೇಹಿತರೆ, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉತ್ತರ ಕನ್ನಡದಲ್ಲಿ ಖಾಲಿ ಇರುವ ತುರ್ತು ವೈದಕೀಯ ಅಧಿಕಾರಿಗಳು ಹಾಗೂ ತಜ್ಞ ವೈದ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

DHFWS Recruitment in Kannada

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಒಟ್ಟು 12 ತಜ್ಞ ವೈದ್ಯ ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ನೇಮಕಾತಿಯ ಕುರಿತು ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಹುದ್ದೆಯ ಅವಲೋಕನ:

ಸಂಸ್ಥೆಯ ಹೆಸರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉತ್ತರ ಕನ್ನಡ ಜಿಲ್ಲೆ
ಹುದ್ದೆಯ ಹೆಸರು ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿಗಳು
ಹುದ್ದೆಯ ಸಂಖ್ಯೆ 12 ಹುದ್ದೆಗಳು
ಉದ್ಯೋಗ ಸ್ಥಳ ಉತ್ತರ ಕನ್ನಡ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ವಿಮರ್ಶೆ:

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಖಾಲಿ ಇರುವ ಒಟ್ಟು 12 ತಜ್ಞ ವೈದ್ಯರು ಹಾಗೂ ತರ್ತು ವೈದ್ಯಕೀಯ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ MBBS ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ಸಂಕ್ಷಿಪ್ತ ವಿವರ:

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ಹೊರಡಿಸಿದ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ತಜ್ಞ ವೈದ್ಯರು 4 ಹುದ್ದೆಗಳು
ತುರ್ತು ವೈದ್ಯಕೀಯ ಅಧಿಕಾರಿಗಳು 8 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ತಜ್ಞ ವೈದ್ಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
  • ಹಾಗೂ ತುರ್ತು ವೈದ್ಯಕೀಯ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು MBBS ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನೇಮಕಾತಿ ಅಧಿಸೂಚನೆ ಪ್ರಕಾರ, ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕೆಲವು ನಿಯಮಗಳ ಪ್ರಕಾರ ಹಾಗೂ ಸರ್ಕಾರ ಕೆಲವು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

  • ತಜ್ಞ ವೈದ್ಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ರೂ. 1.30 ಲಕ್ಷ ವೇತನವನ್ನು ನೀಡಲಾಗುತ್ತದೆ.
  • ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಅಂಕಪಟ್ಟಿ
  • ವಯಸ್ಸಿನ ಪುರಾವೆ
  • ಆಧಾರ್ ಕಾರ್ಡ್
  • ಶೈಕ್ಷಣಿಕ ಪ್ರಮಾಣಪತ್ರ
  • ಒಂದು ಪಾಸ್ ಪೋರ್ಟ್ ಅಳತೆಯ ಫೋಟೋ
  • ರೆಸೂಮ್
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ ಅರ್ಜಿ ಸಲ್ಲಿಸಿ.

  • ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಅಧಿಕೃತ ವೆಬ್ಸೈಟ್ https://uttarakannada.nic.in/ ಗೆ ಭೇಟಿ ನೀಡಿ.
  • ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅರ್ಜಿ ನಮೂನೆಯಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಈ ಕೆಳಗೆ ನೀಡಲಾದ ವಿಳಾಸಕ್ಕೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.
“ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕಚೇರಿ, ಕಾರವಾರ, ಉತ್ತರ ಕನ್ನಡ ಜಿಲ್ಲೆ”

ಆಯ್ಕೆ ಪ್ರಕ್ರಿಯೆ:

  • ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 01-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ ಕೊನೆಗೊಳ್ಳಲಿದೆ

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 12 ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ವಿದ್ಯಾರ್ಹತೆಯನ್ನು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ಕಚೇರಿಗೆ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment