ನಮಸ್ಕಾರ ಸ್ನೇಹಿತರೆ, ನೀವು ಜಸ್ಟ್ SSLC ಪಾಸ್ ಆಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಚಿಕ್ಕಮಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಸ್ಟೈನೋಗ್ರಾಫರ್, ಪ್ರೋಸೆಸ್ ಸರ್ವರ್, ಟೈಪಿಸ್ಟ್, ಟೈಪಿಸ್ಟ್- ಕಾಪಿಸ್ಟ್, ಪ್ಯೂನ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
Chikkamagaluru District Court Recruitment 2026
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಅಧಿಕೃತವಾಗಿ ಆರಂಭಗೊಂಡಿದೆ. ಹಾಗೂ ಅರ್ಜಿ ಸಲ್ಲಿಸಲು 28-07-2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ |
| ಹುದ್ದೆಗಳ ಹೆಸರು | ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಟೈಪಿಸ್ಟ್- ಕಾಪಿಸ್ಟ್, ಪ್ರೋಸೆಸ್ ಸರ್ವರ್ ಹಾಗೂ ಪ್ಯೂನ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 61 ಹುದ್ದೆಗಳು |
| ಉದ್ಯೋಗ ಸ್ಥಳ | ಚಿಕ್ಕಮಗಳೂರು – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-07-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ವಿಶ್ಲೇಷಣೆ:
ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 61 ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಟೈಪಿಸ್ಟ್- ಕಾಪಿಸ್ಟ್, ಪ್ರೋಸೆಸ್ ಸರ್ವರ್ ಹಾಗೂ ಪ್ಯೂನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಜಸ್ಟ್ SSLC ಹಾಗೂ PUC ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅತ್ಯಾಕರ್ಷಕ ವೇತನವನ್ನು ಸಹ ನೀಡಲಾಗುತ್ತದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯವು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಟೈಪಿಸ್ಟ್ – ಕಾಪಿಸ್ಟ್ | 1 ಹುದ್ದೆ |
| ಪ್ರೋಸೆಸ್ ಸರ್ವರ್ | 2 ಹುದ್ದೆಗಳು |
| ಸ್ಟೈನೋಗ್ರಾಫರ್ ಗ್ರೇಡ್ III | 5 ಹುದ್ದೆಗಳು |
| ಟೈಪಿಸ್ಟ್ | 6 ಹುದ್ದೆಗಳು |
| ಪ್ಯೂನ್ | 47 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:
- ಟೈಪಿಸ್ಟ್ – ಕಾಪಿಸ್ಟ್:
ಟೈಪಿಸ್ಟ್ ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಅಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಬೆರಳಚ್ಚು ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪಾಸ್ ಆಗಿರಬೇಕು.
- ಪ್ರೋಸೆಸ್ ಸರ್ವರ್:
ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಸ್ಟೈನೋಗ್ರಾಫರ್ ಗ್ರೇಡ್ -III:
ಸ್ಟೈನೋಗ್ರಾಫರ್ ಗ್ರೇಡ್ -III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಅಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಟೈಪಿಸ್ಟ್:
ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಪ್ಯೂನ್:
ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಜೊತೆಗೆ ಕನ್ನಡವನ್ನು ಓದಲು ಬರೆಯಲು ಮತ್ತು ಮಾತನಾಡಲು ಬರಬೇಕು.
ವಯೋಮಿತಿ ವಿವರ:
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ- IIA, ಪ್ರವರ್ಗ- IIB, ಪ್ರವರ್ಗ- IIIA, ಪ್ರವರ್ಗ- IIIB ) ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 43 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ- I ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ರೂ. 300/-
- ಪ್ರವರ್ಗ- IIA, ಪ್ರವರ್ಗ- IIB, ಪ್ರವರ್ಗ- IIIA, ಪ್ರವರ್ಗ- IIIB ಅಭ್ಯರ್ಥಿಗಳಿಗೆ ರೂ. 150/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- I, PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ UPI ಮೂಲಕ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
| ಹುದ್ದೆಗಳ ವಿವರ | ವೇತನ ಶ್ರೇಣಿ |
| ಪ್ಯೂನ್ | ರೂ. 27,000/- ರೂ. 46,675/- |
| ಪ್ರೋಸೆಸ್ ಸರ್ವರ್ | ರೂ. 31,775 – ರೂ. 61,300/- |
| ಟೈಪಿಸ್ಟ್ -ಕಾಪಿಸ್ಟ್ | ರೂ. 34,100/- ರೂ. 67,600/- |
| ಟೈಪಿಸ್ಟ್ | ರೂ. 34,100/- ರೂ. 67,600/- |
| ಸ್ಟೈನೋಗ್ರಾಫರ್ ಗ್ರೇಡ್ III | ರೂ. 44425 – ರೂ. 83,700/- |
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಶುಲ್ಕ ಪಾವತಿಸಿದ ರಶೀದಿಯನ್ನು ಅಪ್ಲೋಡ್ ಮಾಡಿ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಪ್ಯೂನ್:
SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:10 ಅನುಪಾತದಲ್ಲಿ ಶಾರ್ಟ್ ಲಿಸ್ಟ್ ಮಾಡಿ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಪ್ರೋಸೆಸ್ ಸರ್ವರ್:
SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:25 ಅನುಪಾತದಲ್ಲಿ ಶಾರ್ಟ್ ಲಿಸ್ಟ್ ಸಿದ್ದಪಡಿಸಿ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಟೈಪಿಸ್ಟ್ ಹಾಗೂ ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ:
ಅಭ್ಯರ್ಥಿಗಳಿಗೆ 100 ಅಂಕಗಳ ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು ಈ ಒಂದು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಹಾಗೂ ಅರ್ಹತಾ ಶೈಕ್ಷಣಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಸ್ಟೈನೋಗ್ರಾಫರ್ ಗ್ರೇಡ್ III:
ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ನಂತರ ಶಾರ್ಟ್ ಹ್ಯಾಂಡ್ ಕೌಶಲ್ಯ ಪರೀಕ್ಷೆ ಹಾಗೂ ಟೈಪಿಂಗ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ನಿರ್ದಿಷ್ಟ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 29-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಪ್ಯೂನ್) | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಪ್ರೋಸೆಸ್ ಸರ್ವರ್) | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಟೈಪಿಸ್ಟ್ -ಕಾಪಿಸ್ಟ್) | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಟೈಪಿಸ್ಟ್) | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಸ್ಟೈನೋಗ್ರಾಫರ್) | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಜಸ್ಟ್ SSLC ಅಥವಾ PUC ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನ್ಯಾಯಾಂಗ ಇಲಾಖೆಯಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Post Office: ರೂ. 63,200 ವೇತನ! ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ । 18 ಜುಲೈ ಕೊನೆಯ ದಿನಾಂಕ
- KSRTC: ಸಾರಿಗೆ ಕ್ಷೇತ್ರದಲ್ಲಿ ಭರ್ಜರಿ ಅವಕಾಶ! ನೇರ ಚಾಲನಾ ಪರೀಕ್ಷೆ ಮೂಲಕ ಚಾಲಕರಾಗುವ ಸುವರ್ಣಾವಕಾಶ
- Civil Court: ರೂ. 83,700/- ವೇತನ! ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ! SSLC & PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- KSP 60 ಹಳೆಯ ಪ್ರಶ್ನೆ ಪತ್ರಿಕೆ PDF – Civil Police Constable / CAR / DAR ಪರೀಕ್ಷೆಗೆ ಅತ್ಯಂತ ಉಪಯುಕ್ತ!
- SSC: ರೂ. 1,42,400 ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಭರ್ಜರಿ ಉದ್ಯೋಗಾವಕಾಶ! ಜುಲೈ 16 ಕೊನೆಯ ದಿನಾಂಕ