ಕರ್ನಾಟಕ ಕೃಷಿ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಉದೋಗವಕಾಶವನ್ನು ಕಲ್ಪಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026 ನೇ ಸಾಲಿನಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಾವಿರಕ್ಕೂ ಹೆಚ್ಚು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದೆ.
DoA Recruitment in Kannada
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು 10-05-2026 ಕೊನೆಯ ದಿನಾಂಕವಾಗಿದೆ. ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದ ಎರಡು ವಿಭಾಗಗಳಲ್ಲೂ ಅಭ್ಯರ್ಥಿಗಳಿಗೆ ಸಮಾನಾವಕಾಶ ಕಲ್ಪಿಸಿದೆ.
ಈ ಒಂದು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದಲ್ಲಿ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಗಳ ಹೆಸರು | ಕರ್ನಾಟಕ ಕೃಷಿ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
| ಹುದ್ದೆಗಳ ಹೆಸರು | ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ |
| ಹುದ್ದೆಗಳ ಸಂಖ್ಯೆ | 1000+ ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕದಾದ್ಯಂತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ನೇಮಕಾತಿ ಪ್ರಕ್ರಿಯೆಯ ಮೂಲಕ 1148 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳಲ್ಲಿ ಒಟ್ಟು 121 ಕೃಷಿ ಅಧಿಕಾರಿ ಹುದ್ದೆಗಳು ಹಾಗೂ 1027 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಾಗಿ ವಿಂಗಡಣೆ ಮಾಡಲಾಗಿದೆ.
ಹುದ್ದೆಯ ವಿವರ:
ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದಗಳ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಕೃಷಿ ಅಧಿಕಾರಿ (ಕಲ್ಯಾಣ ಕರ್ನಾಟಕ ವೃಂದ) | 40 ಹುದ್ದೆಗಳು |
| ಸಹಾಯಕ ಕೃಷಿ ಅಧಿಕಾರಿ (ಕಲ್ಯಾಣ ಕರ್ನಾಟಕ ವೃಂದ) | 476 ಹುದ್ದೆಗಳು |
| ಕೃಷಿ ಅಧಿಕಾರಿ (ಉಳಿಕೆ ಮೂಲ ವೃಂದ) | 81 ಹುದ್ದೆಗಳು |
| ಸಹಾಯಕ ಕೃಷಿ ಅಧಿಕಾರಿ (ಉಳಿಕೆ ಮೂಲ ವೃಂದ) | 551 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- 15% ರಷ್ಟು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ) ಪದವಿ ಹೊಂದಿರಬೇಕು.
- ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಮಾರುಕಟ್ಟೆ ಮತ್ತು ಸಹಕಾರ ಅಥವಾ ಬಿಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ)
- ಅಥವಾ ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ ಬಿ.ಟೆಕ್ (ಜೈವಿಕ ತಂತ್ರಜ್ಞಾನ)
- ಅಥವಾ ಬಿಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್
- ಅಥವಾ ಬಿಎಸ್ಸಿ (ಅಗ್ರಿಕಲ್ಚರಲ್ ಇಂಜಿನಿಯರಿಂಗ್ ) ಬಿ.ಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಪದವಿ ಹೊಂದಿರಬೇಕು.
- 85% ರಷ್ಟು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ ಪದವಿ ಹೊಂದಿರಬೇಕು.
ವಯೋಮಿತಿ ವಿವರ:
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ: 5 ವರ್ಷ
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
ಮಾಜಿ ಸೈನಿಕ, ಜೀತ ಕಾರ್ಮಿಕರು, ವಿಧವೆಯರು ಹಾಗೂ ವಿಶೇಷ ಚೇತನರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು (2A, 2B, 3A ಹಾಗೂ 3B) ವರ್ಗಗಳ ಅಭ್ಯರ್ಥಿಗಳಿಗೆ ಒಟ್ಟು ರೂ. 750 ಇವುಗಳಲ್ಲಿ ರೂ. 500 ಅರ್ಜಿ ಶುಲ್ಕ + 250 ಪ್ರಕ್ರಿಯೆ ಶುಲ್ಕ
- ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ -1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಒಟ್ಟು ರೂ. 500 ಇವುಗಳಲ್ಲಿ ರೂ. 250 ಅರ್ಜಿ ಶುಲ್ಕ + 250 ಪ್ರಕ್ರಿಯೆ ಶುಲ್ಕ
- ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ. 250 ಪ್ರಕ್ರಿಯೆ ಶುಲ್ಕ ಮಾತ್ರ ನಿಗದಿಪಡಿಸಲಾಗುತ್ತದೆ.
ವೇತನ ಶ್ರೇಣಿ:
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 2024 ರ ಪರೀಷ್ಕೃತ ರಾಜ್ಯ ವೇತನ ಶ್ರೇಣಿಯ ಅನ್ವಯ ವೇತನವನ್ನು ನೀಡಲಾಗುತ್ತದೆ.
- ಕೃಷಿ ಅಧಿಕಾರಿ: ಮಾಸಿಕ ರೂ. 69,250 ರಿಂದ ರೂ. 134200 ವೇತನವನ್ನು ನೀಡಲಾಗುತ್ತದೆ.
- ಸಹಾಯಕ ಕೃಷಿ ಅಧಿಕಾರಿ: ಮಾಸಿಕ ರೂ. 65950 ದಿಂದ ರೂ. 124900 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ಮುಖಪುಟದಲ್ಲಿರುವ ನೇಮಕಾತಿ ವಿಭಾಗದಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ನಿಮ್ಮ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
- ಸ್ಪರ್ಧಾತ್ಮಕ ಪರೀಕ್ಷೆ
- ದಾಖಲಾತಿ ಪರೀಶೀಲನೆ
ಆಯ್ಕೆ ಪ್ರಕ್ರಿಯೆಯಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 19-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-05-2026 |
| ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ | 12-05-2026 |
| ಕನ್ನಡ ಭಾಷಾ ಪರೀಕ್ಷೆ ನಡೆಸುವ ದಿನಾಂಕ | 06-06-2026 |
| ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ದಿನಾಂಕ RPC | 07-06-2026 |
| ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ ದಿನಾಂಕ KK | 14-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ RPC | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ KK | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಕೃಷಿ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ, ದಿನಾಂಕ 10-05-2026 ರ ಒಳಗಾಗಿ ಅರ್ಜಿ ಸಲ್ಲಿಸಿ. ಹುದ್ದೆಗೆ ಸಂಬಂಧಿಸಿದ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- Court Job: ರೂ. 1,36,520/- ವೇತನ! ಕರ್ನಾಟಕ ಹೈಕೋರ್ಟ್ ನೇಮಕಾತಿ 2026 । ಮೇ 15 ಕೊನೆಯ ದಿನಾಂಕ
- Fireman: 1828 ಫೈರ್ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026 | SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- LIC HFL: ರೂ. 4,98,108/- ವೇತನ! ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 ।ಏಪ್ರಿಲ್ 30 ಕೊನೆಯ ದಿನಾಂಕ
- SSC: ರೂ. 1,51,100/- ವೇತನ! 3000+ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ Apply ಮಾಡಿ
- Vikas Bank: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ! ಏಪ್ರಿಲ್ 24 ಕೊನೆಯ ದಿನಾಂಕ