Driver Application: ರೂ. 67,600 ವೇತನ! KSLSA ಡ್ರೈವರ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ 2026! ಜೂನ್ 25 ಕೊನೆಯ ದಿನಾಂಕ

Driver Application: ನಮಸ್ಕಾರ ಸ್ನೇಹಿತರೆ, ನಿಮ್ಮ ವಾಹನ ಚಾಲನಾ ಕೌಶಲ್ಯವನ್ನೇ ವೃತ್ತಿಯನ್ನಾಗಿ ಮಾಡಿಕೊಳ್ಳುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳನ್ನು ಸಾಮಾನ್ಯ ವರ್ಗಗಳ ಹಾಗೂ ಪ್ರರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದ್ದು, ಮಾನ್ಯತೆ ಪಡೆದ ಸಂಸ್ಥೆಯಿಂದ SSLC ಪೂರ್ಣಗೊಳಿಸಿ ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಚಾಲನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹಾಗೂ ಸರ್ಕಾರಿ ವಲಯದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸುವ ಕನಸು ಕಾಣುವ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜೂನ್ 25 ವರೆಗೂ ಅವಕಾಶವನ್ನು ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು KSLSA ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Driver Application

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು
ಹುದ್ದೆಗಳ ಹೆಸರು ಡ್ರೈವರ್ ಹುದ್ದೆಗಳು
ಹುದ್ದೆಗಳ ಸಂಖ್ಯೆ 2 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-06-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 2 ಡ್ರೈವರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1 ಹುದ್ದೆ
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಲಘು ವಾಹನ ಚಾಲನಾ ಪರವಾನಗಿ ಜೊತೆಗೆ, ಸರಕು ಸಾಗಾಣೆ ಮಾಡುವ ಭಾರೀ ಪ್ರಮಾಣದ ವಾಹನ ಹಾಗೂ ಭಾರೀ ಪ್ರಮಾಣದ ಮೋಟಾರ್ ವಾಹನ ಚಾಲನಾ ಪರವಾನಗಿ ಪತ್ರವನ್ನು ಹೊಂದಿರಬೇಕು.
  • ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಮಾತನಾಡಲು ಬರಬೇಕು ಜೊತೆಗೆ ಕಡ್ಡಾಯವಾಗಿ ವಾಹನ ಚಾಲನೆಯಲ್ಲಿ ಅನುಭವವನ್ನು ಹೊಂದಿರಬೇಕು ಹಾಗೂ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 27-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರ ವರ್ಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಸ್.ಎಂ.ಇ ಶಾಖೆ, ವಿಲ್ಸನ್ ಗಾರ್ಡನ್ ಬೆಂಗಳೂರಿನಲ್ಲಿನ ಉಳಿತಾಯ ಖಾತೆಗೆ ಆನ್ಲೈನ್ ಪಾವತಿ ವಿಧಾನಗಳ ಮೂಲಕ ಅಥವಾ SBI ನ ಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದ್ಲಲೂ ಹಿಂದಿರುಗಿಸುವುದಿಲ್ಲ.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: ರೂ. 500/-
  • ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ: ರೂ. 250/-

ವೇತನ ಶ್ರೇಣಿ:

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100/- ರಿಂದ ರೂ. 67,600/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಹುದ್ದೆಗೆ ಸಂಬಂದಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೆವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಹಾಗೂ ಅನುಭವ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ಮೇಲೆ ನಿಮ್ಮ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ. ಮೇಲೆ ತಿಳಿಸಲಾದ ಬ್ಯಾಂಕ್ ಖಾತೆಗೆ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ. ಶುಲ್ಕ ಪಾವತಿಯ ರಶೀದಿ ಅಥವಾ ಚಲನ್ ಅನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡುವ ಮೂಲಕ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ: “ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ, ಮೊದಲ ಮಹಿಡಿ, ಹೆಚ್, ಸಿದ್ದಯ್ಯ ರಸ್ತೆ, ಬೆಂಗಳೂರು- 560 027

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಮೀಸಲಾತಿ ಅನ್ವಯ 1:5 ಅನುಪಾತದಲ್ಲಿ ಅರ್ಹತೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

  • ಡ್ರೈವಿಂಗ್ ಪರೀಕ್ಷೆ:

ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಪೊಲೀಸ್ ಪೊಲೀಸ್ ಟ್ರೈನಿಂಗ್ ಹಾಗೂ ಮ್ಯಾನೇಜ್ಮೆಂಟ್ ಸ್ಕೂಲ್ ನಡೆಸುವ ಡ್ರೈವಿಂಗ್ ಪರೀಕ್ಷೆಗೆ ಭಾಗವಹಿಸಬೇಕಾಗುತ್ತದೆ.

  • ಸಂದರ್ಶನ:

ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೃಡೀಕರಣ ಪತ್ರವನ್ನು ಪಡೆದ ಅಬ್ಯರ್ತಿಗಳಿಗೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು 5 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

  • ಅಂತಿಮ ಆಯ್ಕೆ:

ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಸಂದರ್ಭದಲ್ಲಿ ಅವರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಈ ಎಲ್ಲ ಪರೀಕ್ಷಯಲ್ಲಿ ಗಳಿಸಿದ ಅಂಕ ಹಾಗೂ ಮೀಸಲಾತಿ ನಿಯಮಗಳ ಪ್ರಕಾರ 2 ವರ್ಷಗಳ ಸೇವಾ ಪರಿವೀಕ್ಷಣಾ ಅವಧಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಪ್ರಕಟಿಸಿದ ದಿನಾಂಕ 27-05-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 27-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 25-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಡೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ನೀವೇನಾದರೂ ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ಕೊನೆಯ ದಿನಾಂಕದಂದು ಸಂಬಂಧಿತ ಸ್ಥಳಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment