ವಿದ್ಯಾರ್ಥಿಗಳೇ, ನೀವೇನಾದರೂ ಜಸ್ಟ್ SSLC ಅಥವಾ PUC ಪೂರ್ಣಗೊಳಿಸಿದೀರಾ? ನಮಗಾಗಿ ಬಡ್ಡಿ4ಸ್ಟಡಿ ಸಂಸ್ಥೆಯು ಭರ್ಜರಿ ಗುಡ್ ನ್ಯೂಸ್ ನೀಡಿದೆ. 2025-26 ನೇ ಸಾಲಿನಲ್ಲಿ SSLC ಹಾಗೂ PUC ಯಲ್ಲಿ ಪಾಸ್ ಆಗಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ.
DRPS Scholarship 2026
ಆ ಯೋಜನೆಯೇ ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆ. ಈ ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ರೂ. 30,000/- ವರೆಗೆ ಸ್ಕಾಲರ್ಷಿಪ್ ಗಳನ್ನು ನೀಡುತ್ತಿದ್ದು, ಅರ್ಹ ಫಲಾನುಭವಿ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಂಡು ಯಾವುದೇ ಆರ್ಥಿಕ ಒತ್ತಡವಿಲ್ಲದೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ನೆರವಾಗುತ್ತದೆ.
ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಸಿಗುವ ವಿದ್ಯಾರ್ಥಿವೇತನದಿಂದ ತಮ್ಮ ಕಾಲೇಜು ಶುಲ್ಕವನ್ನು ಪಾವತಿಸಲು, ಪುಸ್ತಕ, ಪರೀಕ್ಷಾ ಶುಲ್ಕ ಹಾಗೂ ಇನ್ನಿತರ ಶೈಕ್ಷಣಿಕ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತದೆ. ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸಿದರೆ ಈ ಕೆಳಗೆ ನೀಡಲಾದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿವೇತನದ ಅವಲೋಕನ:
| ವಿದ್ಯಾರ್ಥಿವೇತನದ ಹೆಸರು | ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ |
| ಅರ್ಹ ವಿದ್ಯಾರ್ಥಿಗಳು | SSLC ಹಾಗೂ PUC ಪಾಸ್ ವಿದ್ಯಾರ್ಥಿಗಳು |
| ವಿದ್ಯಾರ್ಥಿವೇತನದ ಮೊತ್ತ | ರೂ. 30,000/- |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-06-2026 |
ಏನಿದು ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆ?
ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆಯೆನ್ನುವುದು ಆರ್ಥಿಕವಾಗಿ ದುರ್ಬಲವಾದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಜಾರಿಗೊಳಿಸಿದ ಮಹತ್ವದ ಯೋಜನೆಯಾಗಿದೆ. ಈ ಒಂದು ಪ್ರೋಗ್ರಾಮ್ ಅನ್ನು ಬಡ್ಡಿ4ಸ್ಟಡಿ ಸಂಸ್ಥೆಯು ಪರಿಚಯಿಸಿದ್ದು, ಈ ಯೋಜನೆಯಡಿಯಲ್ಲಿ 10 ನೇ ತರಗತಿಯಲ್ಲಿ ಹಾಗೂ 12 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ರೂ. 30,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಯೋಜನೆಯ ಮುಖ್ಯ ಉದ್ದೇಶ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳು ಯಾವುದೇ ಆರ್ಥಿಕ ಅಡೆತಡೆಗಳಿಲ್ಲದೆ ಉನ್ನತ ಶಿಕ್ಷಣವನ್ನು ಪಡೆಯಲು ಪ್ರೇರೇಪಿಸುವುದಾಗಿದೆ. ವಿದ್ಯಾರ್ಥಿಗಳು SSLC ಹಾಗೂ PUC ಅಲ್ಲಿ ಗಳಿಸಿದ ಅಂಕಗಳಿಗೆ ಅನುಗುಣವಾಗಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಒಂದು ಬಾರಿ ರೂ. 30,000 ಹಣಕಾಸಿನ ನೆರವನ್ನು ಪಡೆದುಕೊಳ್ಳಬಹುದಾಗಿದೆ.
ಯೋಜನೆಯ ವಿಶೇಷತೆಗಳು:
- ಆರ್ಥಿಕ ನೆರವನ್ನು ನೀಡುವುದು:
ಈ ಯೋಜನೆಯಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ಗರಿಷ್ಟ ರೂ. 30,000/- ಹಣಕಾಸಿನ ನೆರವನ್ನು ಒದಗಿಸುವುದರಿಂದ ವಿದ್ಯಾರ್ಥಿಗಳು ತಮ್ಮೆಲ್ಲ ಶೈಕ್ಷಣಿಕ ವೆಚ್ಚವನ್ನು ಭರಿಸಬಹುದಾಗಿದೆ.
- ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು:
ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನದಡಿಯಲ್ಲಿ ವಿಶೇಷವಾಗಿ SSLC ಹಾಗೂ PUC ಅಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಳ್ಳಲು ನೆರವಾಗುತ್ತದೆ.
- ಬಡ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಲಿದೆ:
ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣವನ್ನು ಮುಂದುವರೆಸಲು ಕಷ್ಟಪಡುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯೋಜನೆಯಡಿಯಲ್ಲಿ ರೂ. 30,000/- ವಿದ್ಯಾರ್ಥಿವೇತನವನ್ನು ನೀಡುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದು ತಪ್ಪುತ್ತದೆ.
- ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು:
ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ:
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 2026 ನೇ ಸಾಲಿನಲ್ಲಿ SSLC ಅಥವಾ2025 ಅಥವಾ 2026 ನೇ ಸಾಲಿನಲ್ಲಿ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ವಿದ್ಯಾರ್ಥಿಗಳು SSLC ಹಾಗೂ PUC ಪರೀಕ್ಷೆಯಲ್ಲಿ ಕನಿಷ್ಠ 65% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ವಾರ್ಷಿಕ ಆದಾಯ:
- ಕುಟುಂಬದ ವಾರ್ಷಿಕ ಆದಾಯವು ರೂ. 8 ಲಕ್ಷಕ್ಕಿಂತ ಕಡಿಮೆ ಇರಬೇಕು.
ಇತರೆ ಅರ್ಹತೆಗಳು:
- ವಿದ್ಯಾರ್ಥಿಗಳು ಭಾರತೀಯ ನಾಗರೀಕರಾಗಿರಬೇಕು.
- ವಿದ್ಯಾರ್ಥಿಗಳು ಈ ಹಿಂದೆ ಯಾವುದೇ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಂಡಿರಬಾರದು.
ಗಮನಿಸಿ: ” ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ, ಆರ್ಥಿಕ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ.
ಯೋಜನೆಯಡಿಯಲ್ಲಿ ಸಿಗುವ ವಿದ್ಯಾರ್ಥಿವೇತನದ ವಿವರ:
ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ರೂ. 30,000/- ಸ್ಕಾಲರ್ಷಿಪ್ ಗಳನ್ನು ನೀಡಲಾಗುತ್ತದೆ.
ಈ ಒಂದು ಸಹಾಯಧನವು ನೇರ ನಗದು ವರ್ಗಾವಣೆ ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಈ ಒಂದು ಸಹಾಯಧನವನ್ನು ಕಾಲೇಜು ಫೀಸ್, ಸ್ಟಡಿ ಮೆಟೀರಿಯಲ್ಸ್, ಹಾಸ್ಟೆಲ್ ಖರ್ಚು ಹಾಗೂ ಸಾರಿಗೆ ಖರ್ಚುಗಳನ್ನು ನಿಭಾಯಿಸಲು ಬಳಸಬಹುದಾಗಿದೆ.
ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು?
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಆದಾಯ ಪ್ರಮಾಣಪತ್ರ
- ಜಾತಿ ಪ್ರಮಾಣಪತ್ರ
- 10th ಹಾಗೂ 12th ಮಾರ್ಕ್ಸ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಪಾಸ್ ಪೋರ್ಟ್ ಸೈಜ್ ಫೋಟೋ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಇಮೇಲ್ ಐಡಿ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಯೋಜನೆಗೆ ಈ ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ಅರ್ಹ ವಿದ್ಯಾರ್ಥಿಗಳು ಮೊದಲು https://www.buddy4study.com/page/dr-rajendra-prasad-scholarship-program ನ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
- ನಂತರ ನೀವು ತೇರ್ಗಡೆ ಹೊಂದಿದ ತರಗತಿಗೆ ಅನುಗುಣವಾಗಿ ನೀಡಲಾಗಿರುವ ಅಪ್ಲೈ ನೌ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಮೊಬೈಲ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಲ್ಲಿ ಕೇಳಲಾದ ವಿದ್ಯಾರ್ಥಿಗಳ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ಅರ್ಹ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ:
- ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚುವರಿ ಆದ್ಯತೆ ನೀಡಲಾದ ವರ್ಗಗಳ ವಿದ್ಯಾರ್ಥಿಗಳು ಹೆಚ್ಚುವರಿ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-05-2026 |
| ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-06-2026 |
| ದಾಖಲಾತಿ ಪರಿಶೀಲನೆ ನಡೆಸುವ ದಿನಾಂಕ | 01-07-2026 |
| ಮೆರಿಟ್ ಲಿಸ್ಟ್ ಪ್ರಕಟಿಸುವ ದಿನಾಂಕ | 20-07-2026 |
| ಹಣ ಜಮಾ ಆರಂಭದ ದಿನಾಂಕ | 01-08-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬಡ್ಡಿ 4 ಸ್ಟಡಿ ಸಂಸ್ಥೆಯು SSLC ಹಾಗೂ PUC ಅಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಪ್ರೋಗ್ರಾಮ್ ಅಡಿಯಲ್ಲಿ ರೂ. 30,000/- ಸಹಾಯಧನವನ್ನು ಒದಗಿಸುತ್ತಿದ್ದು, ಉನ್ನತ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ನೆರವು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಂಡು ನಂತರ ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ
- PM YASASVI: ₹20,000 ಸ್ಕಾಲರ್ಶಿಪ್! ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ
- Naati Koli: ₹1,20,000 ಸಹಾಯಧನ! ನಾಟಿ ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಭಾರಿ ನೆರವು ಜೊತೆಗೆ ನಾಟಿ ಕೋಳಿ ಮರಿ ವಿತರಣೆ
- PUC Students: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! 26,000 ಪ್ರೋತ್ಸಾಹಧನ | ಅರ್ಜಿ ಹಾಕುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ