ರಾಜ್ಯ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಭೂ ದಾಖಲೆಗಳ ಹಾಗೂ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಾರ ಮಾಡಲಾಗಿದೆ.
DSLR Recruitment 2026
ಕಂದಾಯ ಇಲಾಖೆಯಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಹಾಗೂ ತಾಂತ್ರಿಕ ಹಿನ್ನಲೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ, ಬಿಇ, ಬಿಟೆಕ್ ಅಥವಾ ಸಂಬಂಧಿತ ವಿಷಯದಲ್ಲಿ ಬಿಎಸ್ಸಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 07-08-2026 ವರೆಗೂ ಕಾಲಾವಕಾಶವನ್ನು ನೀಡಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 37,500/- ದಿಂದ ರೂ. 76,100/- ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ಅವಲೋಕನ:
| ಉದ್ಯೋಗ ಇಲಾಖೆ ಹೆಸರು | ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ |
| ನೇಮಕಾತಿ ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
| ಹುದ್ದೆಯ ಹೆಸರು | ಲ್ಯಾಂಡ್ ಸರ್ವೇಯರ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 750 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-08-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಆರಂಭಿಸಿದ್ದು, ಅರ್ಜಿ ಸಲ್ಲಿಸಲು ದಿನಾಂಕ 07-08-2026 ವರೆಗೆ ಕಾಲಾವಕಾಶ ನೀಡಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ, ಡಿಪ್ಲೊಮಾ, ಐಟಿಐ, ಬಿಎಸ್ಸಿ ಪದವಿ ಪೂರ್ಣಗೊಳಿಸಿದ ರಿಂದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 76,100/- ವೇತನವನ್ನು ನೀಡಲಾಗುತ್ತದೆ.
ಹುದ್ದೆಯ ವಿವರ:
ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳನ್ನು ಎರಡು ವೃಂದಗಳ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಕಲ್ಯಾಣ ಕರ್ನಾಟಕ ವೃಂದ | 190 ಹುದ್ದೆಗಳು |
| ಕಲ್ಯಾಣ ಕರ್ನಾಟಕೇತರ ವೃಂದ | 560 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಟೆಕ್ನಾಲಜಿ ಅಥವಾ ಇಂಜಿನಿಯರಿಂಗ್ ಇಂಜಿನಿಯರಿಂಗ್ ವಿಭಾಗದಲ್ಲಿ AMIE ಪೂರ್ಣಗೊಳಿಸಿರಬೇಕು.
ಅಥವಾ AICTE ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿ ವಿಭಾಗದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಅಥವಾ ಗಣಿತ, ಕಂಪ್ಯೂಟರ್ ಸೈನ್ಸ್, ಭೌತಶಾಸ್ತ್ರ, ಇನ್ಸ್ಟ್ರುಮೆಂಟೇಷನ್, ಇನ್ಫರ್ಮೇಷನ್ ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಭೌತಶಾಸ್ತ್ರ ವಿಭಾಗದಲ್ಲಿ ಬಿಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಭೂಮಾಪನ ಕಂದಾಯ ವ್ಯವಸ್ಥೆ ಅಥವಾ ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B)ಅಭ್ಯರ್ಥಿಗಳು ಗರಿಷ್ಟ 43 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಅಂಗವಿಕಲ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಜನಗಣತಿ ಸಂಸ್ಥೆಯ ಅಡಿಯಲ್ಲಿ 10 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ, ಇತರೆ ಹಿಂದುಳಿದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 750/-
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ -I ಅಭ್ಯರ್ಥಿಗಳಿಗೆ: ರೂ. 500/-
- ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/-
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.
ವೇತನ ಶ್ರೇಣಿ:
ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500/- ದಿಂದ ರೂ. 76,100/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಮುಖಪುಟದಲ್ಲಿ ಕಾಣುವ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕಾಣುವ ಲ್ಯಾಂಡ್ ಸರ್ವೇಯರ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನ್ಯೂ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ದಾಖಲೆಗಳನ್ನು ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಯೂಸರ್ ಹಾಗೂ ಐಡಿ ಪಾಸ್ವರ್ಡ್ ಬಳಸಿ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಮೀಸಲಾತಿ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಪರೀಕ್ಷೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಸ್ವರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಇಲ್ಲಿ ಎರಡು ಪತ್ರಿಕೆಗಳಿರುತ್ತದೆ. ಪತ್ರಿಕೆ -I ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದರೆ ಪತ್ರಿಕೆ -II ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿರುತ್ತದೆ. ಪ್ರತಿ ಪರೀಕ್ಷೆಗೆ ತಲಾ 100 ಅಂಕಗಳನ್ನು ನಿಗದಿಪಡಿಸಲಾಗಿದೆ.
- ದಾಖಲೆಗಳ ಪರಿಶೀಲನೆ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿತ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ 1:2 ಅನುಪಾತದಲ್ಲಿ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.
- ಅಂತಿಮ ಮೆರಿಟ್ ಪಟ್ಟಿ:
ದಾಖಲೆಗಳ ಪರೀಶೀಲನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಮೀಸಲಾತಿ ಹಾಗೂ ರೋಸ್ಟರ್ ನಿಯಮಗಳ ಪ್ರಕಾರ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 11-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-08-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 10-08-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (KK) | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (RPC) | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಹಾಗೂ ಇತರೆ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- VA Application: 67,600/- ವೇತನ! ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಬೃಹತ್ ನೇಮಕಾತಿ । ಜುಲೈ 30 ಕೊನೆಯ ದಿನಾಂಕ
- Army Canteen Bangalore Recruitment 2026: ಬೆಂಗಳೂರಿನ ಆರ್ಮಿ ಕ್ಯಾಂಟೀನ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 10ನೇ ಪಾಸ್ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ!
- RRC NCR Apprentice Recruitment 2026: ರೈಲ್ವೆಯಲ್ಲಿ 1853 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ – 10ನೇ + ITI ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ!
- Forest 750: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! SSLC, PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಆಗಸ್ಟ್ 30 ಕೊನೆಯ ದಿನಾಂಕ
- KCC: ರೂ. 46,675 ವೇತನ! ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2026 । ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ