ನಮಸ್ಕಾರ ಸ್ನೇಹಿತೆರೆ, ಕರ್ನಾಟಕದ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಗರ ಭೂ ಸಾರಿಗೆ ನಿರ್ದೇಶನಾಲಯವು ಕಲಬುರಗಿ ಕೇಂದ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಇಲ್ಲಿ ಅಸೋಸಿಯೇಟ್ ಸಾರಿಗೆ ಯೋಜಕರು ಹಾಗೂ ಕ್ಯಾಡ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು ಮೂರು ಹುದ್ದೆಗಳ ಖಾಲಿ ಇದೆ.
DULT Recruitment 2026
ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ವಲಯದಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಬೇಕೆಂದಿರುವ ಹಾಗೂ ಉತ್ತಮ ವೇತನದೊಂದಿಗೆ ಗೌರವಯುತ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 2 ರಿಂದಲೇ ಆರಂಭಗೊಂಡಿದ್ದು, ಜೂನ್ 15 ಕ್ಕೆ ಕೊನೆಗೊಳ್ಳುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ನಗರ ಭೂ ಸಾರಿಗೆ ನಿರ್ದೇಶನಾಲಯ, ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಸರ್ಕಾರ |
| ಹುದ್ದೆಗಳ ಹೆಸರು | ಅಸೋಸಿಯೇಟ್ ಸಾರಿಗೆ ಯೋಜಕರು, ಕ್ಯಾಡ್ ಆಪರೇಟರ್ |
| ಹುದ್ದೆಗಳ ಸಂಖ್ಯೆ | ಒಟ್ಟು 3 ಹುದ್ದೆಗಳು |
| ಉದ್ಯೋಗ ಸ್ಥಳ | ಕಲಬುರಗಿ – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-06-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ನಗರ ಭೂ ಸಾರಿಗೆ ನಿರ್ದೇಶನಾಲಯವು, ವಿವಿಧ ಕೇಂದ್ರಗಳಲ್ಲಿ ಖಾಲಿ ಇರುವ ಅಸೋಸಿಯೇಟ್ ಸಾರಿಗೆ ಯೋಜಕರು, ಕ್ಯಾಡ್ ಆಪರೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸಾರಿಗೆ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ನಗರ ಭೂ ಸಾರಿಗೆ ನಿರ್ದೇಶನಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಅಸೋಸಿಯೇಟ್ ಸಾರಿಗೆ ಯೋಜಕರು | 2 ಹುದ್ದೆಗಳು |
| ಕ್ಯಾಡ್ ಆಪರೇಟರ್ | 1 ಹುದ್ದೆ |
ಶೈಕ್ಷಣಿಕ ಅರ್ಹತೆ:
ಅಸೋಸಿಯೇಟ್ ಸಾರಿಗೆ ಯೋಜಕರು:
- ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಾರಿಗೆ ಯೋಜನೆ ಅಥವಾ ಸಾರಿಗೆ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪದವಿ ಹೊಂದಿರಬೇಕು.
- ಅನುಭವ:
ಶೈಕ್ಷಣಿಕ ಅರ್ಹತೆಗಳ ಜೊತೆಗೆ, ನಗರ ಸಾರಿಗೆ ವ್ಯವಸ್ಥೆಗಳ ಯೋಜನೆ, ವಿನ್ಯಾಸ, ಅನುಷ್ಠಾನ ಅಥವಾ ಸಂಶೋಧನಾ ಪೂರ್ಣಾವಧಿಯ ಕಾರ್ಯಗಳಲ್ಲಿ 3 ವರ್ಷದಿಂದ 6 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
- ಇತರೆ ಅರ್ಹತೆಗಳು:
ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆಯನ್ನು ಓದಲು ಬರೆಯಲು ಹಾಗೂ ಮಾತನಾಡಲು ಬರಬೇಕು.
ಕ್ಯಾಡ್ ಆಪರೇಟರ್:
- ವಿದ್ಯಾರ್ಹತೆ:
ಕ್ಯಾಡ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಅನುಭವ:
ನಗರ ರಸ್ತೆ ಅಥವಾ ಭೂ ಸಾರಿಗೆ ಯೋಜನೆಗಳಂತಹ ಪ್ರಮುಖ ನಗರ ಮೂಲ ಸೌಕರ್ಯಗಳಿಗೆ CAD ರೇಖಾಚಿತ್ರವನ್ನು ತಯಾರಿಸುವಲ್ಲಿ 3 ವರ್ಷದಿಂದ 6 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
- ಇತರೆ ಅರ್ಹತೆಗಳು:
ಈ ಎಲ್ಲ ಅರ್ಹತೆಗಳೊಂದಿಗೆ, ಆಟೋಕ್ಯಾಡ್ ನ ಸಂಪೂರ್ಣ ಜ್ಞಾನದೊಂದಿಗೆ ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದುವುದು ಕಡ್ಡಾಯವಾಗಿದೆ.
ವಯೋಮಿತಿ ವಿವರ:
ನಗರ ಭೂ ಸಾರಿಗೆ ನಿರ್ದೇಶನಾಲಯದ ನೇಮಕಾತಿ ನಿಯಮಾವಳಿಗಳ ಪ್ರಕಾರ, ಅಸೋಸಿಯೇಟ್ ಸಾರಿಗೆ ಯೋಜಕರು ಹಾಗೂ ಕ್ಯಾಡ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಗಳ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಗಳಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ನಗರ ಭೂ ಸಾರಿಗೆ ನಿರ್ದೇಶನಾಲಯವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕಗಳ ಬಗ್ಗೆ ಮಾಹಿತಿಯನ್ನು ನೀಡಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಈ ಕೆಳಗೆ ತಿಳಿಸಿರುವಂತೆ ಅತ್ಯಾಕರ್ಷಕ ಲೇಖನವನ್ನು ನೀಡಲಾಗುತ್ತದೆ.
- ಅಸೋಸಿಯೇಟ್ ಸಾರಿಗೆ ಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 61,000/- ದಿಂದ ರೂ. 84,592/- ವರೆಗೆ ವೇತನವನ್ನು ನೀಡಲಾಗುತ್ತದೆ.
- ಕ್ಯಾಡ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ದಿಂದ ರೂ. 73,216/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲು ತಮ್ಮ ವೈಯಕ್ತಿಕ ಇಮೇಲ್ ಐಡಿಯನ್ನು ರಚಿಸಿಕೊಳ್ಳಿ.
- ನಂತರ ಈ ಕೆಳಗೆ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಸೋಸಿಯೇಟ್ ಸಾರಿಗೆ ಯೋಜಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – ಇಲ್ಲಿ ಕ್ಲಿಕ್ ಮಾಡಿ
- ಕ್ಯಾಡ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – ಇಲ್ಲಿ ಕ್ಲಿಕ್ ಮಾಡಿ
- ನಂತರ ನಿಮ್ಮ ವೈಯಕ್ತಿಕ ಇಮೇಲ್ ಅನ್ನು ನಮೂದಿಸಿ ಲಾಗಿನ್ ಆಗಿ ನಂತರ ಗೂಗಲ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರಗಳು, ಶೈಕ್ಷಣಿಕ ವಿವರಗಳು, ಅನುಭವ ವಿವರಗಳು ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿ
- ನಂತರ ಅಗತ್ಯ ದಾಖಲೆಗಳನ್ನು ಹಾಗೂ ರೆಸೂಮ್ ಗಳನ್ನು ಅಪ್ಲೋಡ್ ಮಾಡಿ. ನಿಗದಿಪಡಿಸಿದ ಕೊನೆಯ ದಿನಾಂಕದ ಸಂಜೆ 5:30 ರ ಒಳಗೆ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಮೊದಲ ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.
- ನೇರ ಸಂದರ್ಶನ:
ನಂತರ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 02-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (KK) | ಇಲ್ಲಿ ಕ್ಲಿಕ್ ಮಾಡಿ |
| ಅಸೋಸಿಯೇಟ್ ಸಾರಿಗೆ ಯೋಜಕರು ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಕ್ಯಾಡ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ನಗರ ಭೂ ಸಾರಿಗೆ ನಿರ್ದೇಶನಾಲಯವು ಕ್ಯಾಡ್ ಆಪರೇಟರ್ ಹಾಗೂ ಅಸೋಸಿಯೇಟ್ ಟ್ರಾನ್ಸ್ಪೋರ್ಟ್ ಪ್ಲಾನರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದು, ಸಾರಿಗೆ ಯೋಜನೆ, ಸಿವಿಲ್ ಇಂಜಿನಿಯರಿಂಗ್ ಹಾಗೂ CAD ಕ್ಷೇತ್ರದಲ್ಲಿ ಅರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ವೃತ್ತಿ ಅವಕಾಶವಾಗಿದೆ. ಆಕರ್ಷಕ ವೇತನ, ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಹಾಗೂ ವೃತ್ತಿಪರ ಅನುಭವವನ್ನು ಪಡೆಯಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಜೂನ್ 15, 2026 ರೊಳಗೆ ಅರ್ಜಿ ಸಲ್ಲಿಸಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- BPCL: ರೂ. 2,80,000/- ವೇತನ! ಭಾರತ್ ಪೆಟ್ರೋಲಿಯಂನಲ್ಲಿ ಬೃಹತ್ ನೇಮಕಾತಿ । 20 ಜೂನ್ ಕೊನೆಯ ದಿನಾಂಕ
- Drivers Job: ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ! SSLC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗಾವಕಾಶ
- IIMB: ರೂ. 14.72 ಲಕ್ಷ ವಾರ್ಷಿಕ ವೇತನ! ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026 | ಜೂನ್ 10 ಕೊನೆಯ ದಿನಾಂಕ
- ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026: ಈಗಲೇ ಅರ್ಜಿ ಸಲ್ಲಿಸಿ । Agriculture Department Recruitment 2026