ಇಂದಿನ ಸರ್ಧಾತ್ಮಕ ಯುಗದಲ್ಲಿ ಉನ್ನತ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಅನಿವಾರ್ಯವಾಗಿದೆ ಮತ್ತು ಉನ್ನತ ಶಿಕ್ಷಣವು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಲು ಹಾಗೂ ತಮ್ಮ ರೂಪಿಸಿಕೊಳ್ಳಲು ಪ್ರಮುಖ ಸಾಧನವಾಗಿದೆ. ಆದರೆ ಆರ್ಥಿಕ ಸಂಕಷ್ಟದಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಕನಸ್ಸನ್ನು ಅರ್ಧದಲ್ಲೇ ಬಿಟ್ಟು ಕಡಿಮೆ ಸಂಬಳದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವ ಪರಿಸ್ಥಿತಿಗೆ ಬರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳ ಪ್ರತಿಭೆಗೆ ಹಾಗೂ ಸಾಮರ್ಥ್ಯಕ್ಕೆ ತಕ್ಕಂತಹ ಅವಕಾಶ ಸಿಗದೇ ಜೀವನದ ಗುರಿಯನ್ನು ಸಾಧಿಸುವಲ್ಲಿ ವಿಫಲರಾಗುತ್ತಾರೆ.
Arivu Education Loan for Students
ರಾಜ್ಯದಲ್ಲಿನ ಇಂತಹ ಸಮಸ್ಯೆಗಳನ್ನು ಮನಗಂಡ ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಜಾರೊಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರೆಸಲು ಹಣಕಾಸಿನ ಕೊರತೆ ಅಡ್ಡಿಯಾಗಬಾರದು ಎನ್ನುವ ಉದ್ದೇಶದಿಂದ ರೂ. 5,00,000 ವೆರೆಗೆ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಕರ್ನಾಟಕ ಸರ್ಕಾರವು ವರ್ಷಕ್ಕೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಶೈಕ್ಷಣಿಕ ಸಾಲ ಸೌಲಭ್ಯವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಯಾರು ಅರ್ಹರು? ಪ್ರತಿ ಕೋರ್ಸ್ ಗೆ ಅನುಗುಣವಾಗಿ ಎಷ್ಟೆಷ್ಟು ಸಾಲ ಸೌಲಭ್ಯ ಸಿಗಲಿದೆ? ಪ್ರತಿ ಸಾಲದ ಮೊತ್ತಕ್ಕೆ ಶೇಕಡಾ ಎಷ್ಟು ಬಡ್ಡಿದರವನ್ನು ನಿಗದಿಪಡಿಸಲಾಗಿದೆ? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಯೋಜನೆಯ ವಿವರಣಾತ್ಮಕ ನೋಟ:
| ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ | ಕರ್ನಾಟಕ ಸರ್ಕಾರ |
| ಯೋಜನೆಯ ಹೆಸರು | ಅರಿವು ಶೈಕ್ಷಣಿಕ ಸಾಲ ಯೋಜನೆ |
| ಅರ್ಹ ಫಲಾನುಭವಿಗಳು | ಹಿಂದುಳಿದ ವರ್ಗಗಳ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ವರ್ಗಗಳ ವಿದ್ಯಾರ್ಥಿಗಳು |
| ಗರಿಷ್ಠ ಸಾಲದ ಮಿತಿ | ರೂ. 5,00,000/- ಲಕ್ಷದ ವರೆಗೆ |
| ಬಡ್ಡಿದರ | ವಾರ್ಷಿಕ 2% |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಏನಿದು ಅರಿವು ಶೈಕ್ಷಣಿಕ ಸಾಲ ಯೋಜನೆ?
ಅರಿವು ಶೈಕ್ಷಣಿಕ ಸಾಲ ಯೋಜನೆಯು ಕರ್ನಾಟಕ ಸರ್ಕಾರವು ಜಾರಿಗೊಳಿಸಿದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದಿವರೆಸಲು ಸಾಲ ಸೌಲಭ್ಯವನ್ನು ಒದಗಿಸಿ ಶೈಕ್ಷಣಿಕ ನೆರವನ್ನು ನೀಡುವ ಉದ್ದೇಶವನ್ನು ಹೊಂದಿದೆ.
ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ಪ್ರತಿ ಕೋರ್ಸ್ ಗೆ ಅನುಗುಣವಾಗಿ ರೂ. 50,000/- ದಿಂದ ರೂ. 5,00,000/- ವರೆಗೆ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಯೋಜನೆಯ ಉದ್ದೇಶ:
- ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಬೆಂಬಲ:
ಅನೇಕ ವಿದ್ಯಾರ್ಥಿಗಳು ಉತ್ತಮ ಪ್ರತಿಭೆಯನ್ನು ಹಾಗೂ ಸಾಮರ್ಥ್ಯವನ್ನು ಹೊಂದಿದ್ದರೂ ಕೂಡ ಕುಟುಂಬದಲ್ಲಿನ ಆರ್ಥಿಕ ಸಮಸ್ಯೆಯ ಕಾರಣದಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ವಿಶೇಷವಾಗಿ ಇಂತಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಒದಗಿಸಿ ಅವರ ಉನ್ನತ ಶಿಕ್ಷಣದ ಕನಸಿಗೆ ಬೆಂಬಲ ನೀಡುವುದು ಹಾಗೂ ಅವರ ಭವಿಷ್ಯವನ್ನು ಉಜ್ವಲ ಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.
- ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು:
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕೋರ್ಸ್ ಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ಒದಗಿಸುವ ಮೂಲಕ ಆರ್ಥಿಕ ಅಡಚಣೆ ಇಲ್ಲದೆ ಅವರು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರೆಸಿ, ಶೈಕ್ಷಣಿಕ ಹಾಗೂ ವೃತ್ತಿಜೀವನದ ಗುರಿಗಳನ್ನು ಸಾಧಿಸಲು ಅವಕಾಶ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.
- ಸಮಾನ ಅವಕಾಶಗಳನ್ನು ಒದಗಿಸುವುದು:
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಹಿಂದುಳಿದ ವರ್ಗಗಳ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸುವ ಮೂಲಕ ಆರ್ಥಿಕ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುವವರ ಸಂಖ್ಯೆಯನ್ನು ಕಡಿಮೆ ಮಾಡಿ ಎಲ್ಲ ವಿದ್ಯಾರ್ಥಿಗಳಿಗೂ ಸಮಾನವಕಾಶ ಕಲ್ಪಿಸುವುದು.
- ಉದ್ಯೋಗ ಮತ್ತು ಸ್ವಾವಲಂಬನೆಗೆ ನೆರವು:
ಅರಿವು ಶೈಕ್ಷಣಿಕ ಸಾಲ ಯೋಜನೆಯ ಮುಖ್ಯ ಉದ್ದೇಶವು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿ ಅಗತ್ಯ ಜ್ಞಾನ ಹಾಗೂ ಕೌಶಲ್ಯಗಳನ್ನು ಪಡೆಯುವ ಮೂಲಕ ಉತ್ತಮ ಉದ್ಯೋಗಾವಕಾಶಗಳನ್ನು ಪಡೆದು, ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಿರ್ಮಿಸಿಕೊಳ್ಳಲು ನೆರವಾಗುವುದಾಗಿದೆ.
ಸಾಲದ ಮೊತ್ತದ ವಿವರ:
- ಫಾರ್ಮಸಿ ಹಾಗೂ ಆಯುಷ್ ಕೋರ್ಸ್ ಗಳಿಗೆ:
ಬಿ.ಫಾರ್ಮ, ಎಂ.ಫಾರ್ಮ, ಫಾರ್ಮ.ಡಿ ಕೋರ್ಸ್ ಗಳಿಗೆ ಹಾಗೂ ಬಿ.ಆಯುಷ್,ಎಂ.ಆಯುಷ್ ಕೋರ್ಸ್ ಗಳಿಗೆ ವಾರ್ಷಿಕ ಗರಿಷ್ಟ ರೂ. 50,000/- ಸಾಲ ಸೌಲಭ್ಯ ದೊರೆಯುತ್ತದೆ.
- ಕೃಷಿ ಮತ್ತು ಅಲೈಡ್ ಸೈನ್ಸ್ ಕೋರ್ಸ್ ಗಳಿಗೆ:
ಬಿಎಸ್ಸಿ ಅಗ್ರಿಕಲ್ಚರ್, ಬಿಎಸ್ಸಿ ಹಾರ್ಟಿಕಲ್ಚರ್, ಅರಣ್ಯ ವಿಜ್ಞಾನ, ವೆಟರ್ನರಿ ಹಾಗೂ ಅನಿಮಲ್ ಸೈನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ. 50,000/- ಸಾಲ ಸೌಲಭ್ಯ ದೊರೆಯುತ್ತದೆ.
- ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ ಗಳಿಗೆ:
ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ. 50,000/- ಸಾಲ ಸೌಲಭ್ಯ ದೊರೆಯುತ್ತದೆ.
- ವೈದ್ಯಕೀಯ ಕೋರ್ಸ್ ಗಳಿಗೆ:
BDS ಹಾಗೂ MDS ನಂತಹ ದಂತ ವೈದ್ಯಕೀಯ ಕೋರ್ಸ್ ಗಳಿಗೆ ವಾರ್ಷಿಕ ಗರಿಷ್ಟ ರೂ. 1,00,000/- ಸಾಲ ಸೌಲಭ್ಯ ದೊರೆಯುತ್ತದೆ.
MBBS, MD, MS ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 5,00,000/- ಸಾಲ ಸೌಲಭ್ಯ ದೊರೆಯುತ್ತದೆ.
ಅರ್ಹತಾ ಮಾನದಂಡಗಳು:
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ವಿದ್ಯಾಥಿಗಳು ಮಾನ್ಯ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು
- ವಿದ್ಯಾರ್ಥಿಗಳು ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು
- ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ಪರೀಕ್ಷೆಯಲ್ಲಿ ಕನಿಷ್ಟ 65% ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರಬೇಕು
- ಕುಟುಂಬದ ವಾರ್ಷಿಕ ಆದಾಯವು ರೂ. 8 ಲಕ್ಷ ಮೀರಿರಬಾರದು
- ವಿದ್ಯಾರ್ಥಿಗಳ ಕುಟುಂಬದ ಯಾವುದೇ ಸದಸ್ಯರು ಯಾವುದೇ ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗದಲ್ಲಿ ಇರಬಾರದು.
ಅಗತ್ಯ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- 2 ಪಾಸ್ ಪೋರ್ಟ್ ಅಳತೆಯ ಫೋಟೋ
- ಕೋರ್ಸ್ ಗೆ ಸಂಬಂದಿಸಿದ ಪ್ರವೇಶ ಪತ್ರ
- ವಿದ್ಯಾರ್ಥಿಗಳ ಶೈಕ್ಷಣಿಕ ಅಂಕಪಟ್ಟಿ
- ಹಾಗೂ ಇತರ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಮೊದಲು ಕೆಎಂಡಿಸಿ ಯ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಸಲ್ಲಿಸಿ ಬಟನ್ ಕ್ಲಿಕ್ ಮಾಡಿ
- ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಅಲ್ಲಿ ನೀಡಿರುವ ಕ್ಯಾಪ್ಚವನ್ನು ಭರ್ತಿ ಮಾಡಿ
- ಎಲ್ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ಸೂಚನೆ:
- ವಿದ್ಯಾರ್ಥಿಗಳು ಆಯ್ಕೆ ಮಾಡಿರುವ ಕೋರ್ಸ್ ಅವಧಿ ಮುಗಿಯುವ ವರೆಗೂ ಕೂಡ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
- ಯೋಜನೆಯಡಿಯಲ್ಲಿ ಸಿಗುವ ಸಾಲದ ಮೊತ್ತವು ನೇರವಾಗಿ ವಿದ್ಯಾರ್ಥಿಗಳ ಕೈಗೆ ಅಥವಾ ಪೋಷಕರ ಕೈಗೆ ಸಿಗುವುದಿಲ್ಲ ಬದಲಾಗಿ ಕಾಲೇಜಿನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
- ಈ ಒಂದು ಯೋಜನೆಯಡಿಯಲ್ಲಿ ಸಿಗುವ ಸಾಲ ಸೌಲಭ್ಯಕ್ಕೆ ಸಾಂಪ್ರದಾಯಿಕ ಬ್ಯಾಂಕ್ ಬಡ್ಡಿ ಇರುವುದಿಲ್ಲ ಬದಲಾಗಿ ಪ್ರತಿ ವರ್ಷ 2% ಸೇವಾ ಶುಲ್ಕ ಮಾತ್ರ ಇರುತ್ತದೆ.
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಸಮಾಪ್ತಿ:
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಉನ್ನತ ಶಿಕ್ಷಣ ಅತ್ಯಂತ ಪ್ರಮುಖವಾಗಿದೆ. ಆರ್ಥಿಕ ಸಮಸ್ಯೆಗಳು ವಿದ್ಯಾರ್ಥಿಗಳ ಕನಸುಗಳಿಗೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಅರಿವು’ ಸಾಲ ಯೋಜನೆ 2026 ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಈ ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸಿ, ಅವರು ಯಾವುದೇ ಅಡಚಣೆಗಳಿಲ್ಲದೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಜೀವನದ ಗುರಿಯನ್ನು ಸಾಧಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Free ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ-ಸಾಕ್ಸ್, ಚಪ್ಪಲಿ, ಸ್ಟಡಿ ಕಿಟ್ ಹಾಗೂ ₹4,000/₹7,000 ಸಹಾಯಧನ ಯೋಜನೆ – ಸಂಪೂರ್ಣ ಮಾಹಿತಿ!
- Driver DL Scheme: ರೂ. 25,000 ಸಹಾಯಧನ! ಡ್ರೈವಿಂಗ್ ಲೈಸನ್ಸ್ ಹೊಂದಿರುವ ಚಾಲಕರಿಗೆ ಸರ್ಕಾರದಿಂದ ಹೊಸ ಯೋಜನೆ । ಇಂದೇ ಅಪ್ಲೈ ಮಾಡಿ
- DRPS: 10th ಹಾಗೂ PUC ಪಾಸ್ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ
- SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ