ಕರ್ನಾಟಕ ಸರ್ಕಾರದ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಅಬಕಾರಿ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹೊಚ್ಚ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಶೀಘ್ರದಲ್ಲೇ ಬೃಹತ್ ನೋಟಿಫಿಕೇಶನ್ ಹೊರಬೀಳಲಿದೆ.
ESI Recruitment 2026
ಈ ಒಂದು ನೇಮಕಾತಿಗೆ ಸಂಬಂಧಿಸಿದಂತೆ ಒಟ್ಟು 265 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವಲಯ ಹಾಗೂ ಕಲ್ಯಾಣ ಕರ್ನಾಟಕೇತರ ವಲಯಗಳಿಗೆ ಮೀಸಲಿಡಲಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವ ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸ್ತುತ ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಕರ್ನಾಟಕ ಲೋಕಸೇವಾ ಆಯೋಗ |
| ಉದ್ಯೋಗ ಇಲಾಖೆ | ಕರ್ನಾಟಕ ಅಬಕಾರಿ ಇಲಾಖೆ |
| ಹುದ್ದೆಯ ಹೆಸರು | ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 265 ಹುದ್ದೆಗಳು |
| ಆಯ್ಕೆ ಪ್ರಕ್ರಿಯೆ | ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 265 ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಶೀಘ್ರದಲ್ಲೇ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಹೊರ ಬೀಳಲಿದೆ.
ಇಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ಲೇಖನವನ್ನು ನೀಡಲಾಗುತ್ತದೆ.
ಹುದ್ದೆಯ ವಿವರ:
ಕರ್ನಾಟಕ ಅಬಕಾರಿ ಇಲಾಖೆಯು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 265 ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಈ ಎರಡು ವಿಭಾಗಗಳಾಗಿ ಹಂಚಿಕೆ ಮಾಡಲಾಗಿದೆ.
| ವಿವಿಧ ವಲಯಗಳು | ಹುದ್ದೆಗಳ ಸಂಖ್ಯೆ |
| ಕಲ್ಯಾಣ ಕರ್ನಾಟಕ ವಲಯ | 57 ಹುದ್ದೆಗಳು |
| ಕಲ್ಯಾಣ ಕರ್ನಾಟಕೇತರ ವಲಯ | 208 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಅಬಕಾರಿ ಸಬ್ ಇನ್ಸ್ಪೆಕ್ಟರ್:
ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ವಿವರ:
ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- 2A, 2B, 3A, 3B ಅಭ್ಯರ್ಥಿಗಳಿಗೆ 2 ವರ್ಷ ಸಡಿಲಿಕೆ ಇರುತ್ತದೆ ಹಾಗೂ
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 4 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಈ ಒಂದು ವಿಷಯದ ಕುರಿತು ನಿಖರವಾದ ಮಾಹಿತಿಯನ್ನು ಇಲಾಖೆಯು ಹೊರಡಿಸಲಾಗುವ ನೇಮಕಾತಿ ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ.
ಸಾಮಾನ್ಯವಾಗಿ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಬಹುದು ಎಂದು ಊಹಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 300/- ರೂ. 600/-
- 2A, 2B, 3A, 3B ಅಭ್ಯರ್ಥಿಗಳಿಗೆ ರೂ. 150/- ರೂ. 300/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಊಹಿಸಲಾಗಿದೆ.
ವೇತನ ಶ್ರೇಣಿ:
ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ, 37,900/- ದಿಂದ ರೂ. 70,850/- ವೇತನವನ್ನು ನೀಡಲಾಗುತ್ತದೆ ಎಂದು ಅಂದಾಜಿಸಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗವನ್ನು ತೆರೆದು Excise Sub Inspector Recruitment 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಮೊದಲು ವೆಬ್ಸೈಟ್ ಗೆ ಭೇಟಿ ನೀಡುತ್ತಿದ್ದರೆ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
ಸಾಮಾನ್ಯವಾಗಿ 100 ಅಂಕಗಳ ಪರೀಕ್ಷೆ ಇರುತ್ತದೆ. ಇದು ಸಾಮಾನ್ಯ ಜ್ಞಾನ, ಪ್ರಚಲಿತ ಘಟನೆಗಳು, ಇತಿಹಾಸ ಮತ್ತು ಸಂವಿಧಾನ, ವಿಜ್ಞಾನ ಹಾಗೂ ಇತರೆ ಸಾಮಾನ್ಯ ವಿಷಯಗಳ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
- ದೈಹಿಕ ಸಮರ್ಥ್ಯ ಪರೀಕ್ಷೆ:
ಪುರುಷ ಅಭ್ಯರ್ಥಿಗಳಿಗೆ:
- ಕನಿಷ್ಠ ಎತ್ತರ: 168 ಸೆಂ.ಮೀ
- ಎದೆ ಸುತ್ತಳತೆ: 81 ಸೆಂ.ಮೀ ಅಥವಾ ಹೆಚ್ಚು
- ಎದೆ ವಿಸ್ತರಣೆ: ಉಸಿರು ತುಂಬಿದಾಗ ಕನಿಷ್ಠ 5 ಸೆಂ.ಮೀ ಹೆಚ್ಚಳ ಇರಬೇಕು
ಮಹಿಳಾ ಅಭ್ಯರ್ಥಿಗಳಿಗೆ:
- ಕನಿಷ್ಠ ಎತ್ತರ: 157 ಸೆಂ.ಮೀ
- ಕನಿಷ್ಠ ತೂಕ: 45 ಕೆ.ಜಿ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ಪುರುಷ ಅಭ್ಯರ್ಥಿಗಳು:
- ನಿಗದಿತ ಸಮಯದೊಳಗೆ 1600 ಮೀಟರ್ ಓಟ
- ಉದ್ದ ಜಿಗಿತ ಅಥವಾ ಎತ್ತರ ಜಿಗಿತ
- ಗುಂಡು ಎಸೆತ
- ಮಹಿಳಾ ಅಭ್ಯರ್ಥಿಗಳು:
- ನಿಗದಿತ ಸಮಯದೊಳಗೆ 800 ಮೀಟರ್ ಓಟ
- ಉದ್ದ ಜಿಗಿತ ಅಥವಾ ಎತ್ತರ ಜಿಗಿತ
- ಗುಂಡು ಎಸೆತ
- ದಾಖಲಾತಿ ಪರಿಶೀಲನೆ:
ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರ ಹಾಗೂ ಮೀಸಲಾತಿ ಪ್ರಮಾಣಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಅಬಕಾರಿ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ (ESI) ಹುದ್ದೆಯು ಉತ್ತಮ ವೇತನ, ಗೌರವ ಮತ್ತು ವೃತ್ತಿ ಬೆಳವಣಿಗೆಯ ಅವಕಾಶಗಳನ್ನು ಹೊಂದಿರುವ ಸರ್ಕಾರಿ ಉದ್ಯೋಗವಾಗಿದೆ. ಕಾನೂನು ಜಾರಿ, ತನಿಖೆ ಮತ್ತು ಅಬಕಾರಿ ನಿಯಮಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುವ ಈ ಹುದ್ದೆಗೆ ಸ್ಪರ್ಧೆಯೂ ಹೆಚ್ಚಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಎರಡಕ್ಕೂ ಸಮಾನವಾಗಿ ಸಿದ್ಧತೆ ನಡೆಸಬೇಕು. ಸರಿಯಾದ ಯೋಜನೆ, ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದೊಂದಿಗೆ ತಯಾರಿ ನಡೆಸಿದರೆ ಈ ಹುದ್ದೆಯನ್ನು ಪಡೆಯುವ ಕನಸನ್ನು ನನಸು ಮಾಡಿಕೊಳ್ಳಬಹುದು.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- Air Force: ಭಾರತೀಯ ವಾಯುಪಡೆಯಲ್ಲಿ ಬೃಹತ್ ನೇಮಕಾತಿ! PUC ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ । ಜುಲೈ 26 ಕೊನೆಯ ದಿನಾಂಕ
- GramPanchayat Application: ಗ್ರಾಮ ಪಂಚಾಯತಿ ಭರ್ಜರಿ ನೇಮಕಾತಿ 2026! PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 8 ಕೊನೆಯ ದಿನಾಂಕ
- SBI Link: ರೂ. 85,920/- ವೇತನ! ಎಸ್ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- Fireman: ರೂ. 1,16,000 ವೇತನ! MRPL ನಲ್ಲಿ ಫೈರ್ ಆಫೀಸರ್ ಹುದ್ದೆಗಳ ನೇಮಕಾತಿ 2026 । ಜುಲೈ 16 ಕೊನೆಯ ದಿನಾಂಕ
- Home Guard: SSLC ಪಾಸ್ ಅಭ್ಯರ್ಥಿಗಳಿಗೆ ತುಮಕೂರು ಗೃಹರಕ್ಷಕ ದಳದಲ್ಲಿ ಭರ್ಜರಿ ಉದ್ಯೋಗ ಅವಕಾಶ! ಜೂನ್ 30 ಕೊನೆಯ ದಿನಾಂಕ