Fireman: ರೂ. 1,16,000 ವೇತನ! MRPL ನಲ್ಲಿ ಫೈರ್ ಆಫೀಸರ್ ಹುದ್ದೆಗಳ ನೇಮಕಾತಿ 2026 । ಜುಲೈ 16 ಕೊನೆಯ ದಿನಾಂಕ

Fireman: ಸರ್ಕಾರಿ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ! ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಫೈರ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಬಿಇ ಹಾಗೂ ಬಿಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 17-06-2026 ರಿಂದ 16-07-2026 ರ ವರೆಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು MRPL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Firemen

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್
ಹುದ್ದೆಯ ಹೆಸರು ಫೈರ್ ಆಫೀಸರ್ ಹುದ್ದೆಗಳು
ಹುದ್ದೆಯ ಸಂಖ್ಯೆ 05 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17-06-2026
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ;ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 5 ಫೈರ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಬಿಇ ಹಾಗೂ ಬಿಟೆಕ್ ಪದವಿ ಪೂರ್ಣಗೊಳಿಸಿದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇಲ್ಲಿ ಖಾಲಿ ಇರುವ ಫೈರ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯ ಅಭ್ಯರ್ಥಿಗಳಿಗೆ ರೂ. 1,08,000/- ದಿಂದ ರೂ. 1,16,000/- ದ ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ವಿವರ ಹುದ್ದೆಗಳ ಸಂಖ್ಯೆ
ಫೈರ್ ಆಫೀಸರ್ ಹುದ್ದೆಗಳು 05 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಫೈರ್ ಆಫೀಸರ್:

ಫೈರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ 60% ಅಂಕಗಳೊಂದಿಗೆ ಅಗ್ನಿಶಾಮಕ ಮತ್ತು ಸುರಕ್ಷತೆ ಅಥವಾ ಅಗ್ನಿಶಾಮಕ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.

ಹಾಗೂ ಪೆಟ್ರೋಕೆಮಿಕಲ್ಸ್ ಅಥವಾ ತೈಲ ಮತ್ತು ಅನಿಲ ಅಥವಾ ರಸಗೊಬ್ಬರ ಉದ್ಯಮದಲ್ಲಿ ಅಗ್ನಿಶಾಮಕ ಮತ್ತು ಸುರಕ್ಷತೆ/ ಅಗ್ನಿಶಾಮಕ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್ ಸಂಸ್ಥೆಯ ಫೈರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 16-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಟ 50 ವಯೋಮಿತಿಯನ್ನು ಹೊಂದಿರಬೇಕು. ಹಾಗೂ ಒಬಿಸಿ ಅಭ್ಯರ್ಥಿಗಳು ಗರಿಷ್ಟ 53 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸಂಸ್ಥೆಯ ಮಾನದಂಡಗಳ ಪ್ರಕಾರ, ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 118/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಪೆಟ್ರೋಕೆಮಿಕಲ್ಸ್ ಅಥವಾ ತೈಲ ಮತ್ತು ಅನಿಲ ಅಥವಾ ರಸಗೊಬ್ಬರ ಉದ್ಯಮದಲ್ಲಿ ಅಗ್ನಿಶಾಮಕ ಮತ್ತು ಸುರಕ್ಷತೆ/ ಅಗ್ನಿಶಾಮಕ ಕ್ಷೇತ್ರದಲ್ಲಿ ಕನಿಷ್ಠ 6 ವರ್ಷಗಳ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಫೈರ್ ಆಫೀಸರ್ ಹುದ್ದೆಗೆ ಆಯ್ಕೆಯಾದರೆ ಅವರಿಗೆ ಮಾಸಿಕ ರೂ. 1,08,000/- ವೇತನವನ್ನು ನೀಡಲಾಗುತ್ತದೆ.

ಪೆಟ್ರೋಕೆಮಿಕಲ್ಸ್ ಅಥವಾ ತೈಲ ಮತ್ತು ಅನಿಲ ಅಥವಾ ರಸಗೊಬ್ಬರ ಉದ್ಯಮದಲ್ಲಿ ಅಗ್ನಿಶಾಮಕ ಮತ್ತು ಸುರಕ್ಷತೆ/ ಅಗ್ನಿಶಾಮಕ ಕ್ಷೇತ್ರದಲ್ಲಿ ಕನಿಷ್ಠ 6 ವರ್ಷಗಲಿಗಿಂತ ಹೆಚ್ಚಿನ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಫೈರ್ ಆಫೀಸರ್ ಹುದ್ದೆಗೆ ಆಯ್ಕೆಯಾದರೆ ಆ ಅಭ್ಯರ್ಥಿಗೆ ಮಾಸಿಕ ರೂ. 1,16,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು MRPL ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 17-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್ ಸಂಸ್ಥೆಯು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಫೈರ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment