Fireman: 1828 ಫೈರ್ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026 | SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

Fireman Recruitment: ಸಮಾಜದ ರಕ್ಷಣೆ ಹಾಗೂ ಸಾಹಸಮಯ ವೃತ್ತಿಜೀವನವನ್ನು ಪ್ರಾರಂಭಿಸಲು ಇಷ್ಟಪಡುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಖಾಲಿ ಇರುವ ಒಟ್ಟು 1828 ಫೈರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Fire Department Recruitment 2026

ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಫೈರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈಗಾಗಲೇ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ನೀಡಿದ್ದು, ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತದೆ.

ಫೈರ್ ಆಪರೇಟರ್ ಹುದ್ದೆಗಳನ್ನು ವಿವಿಧ ವಿಭಾಗಗಳಾಗಿ ವಿಂಗಡಣೆ ಮಾಡಲಾಗಿದ್ದು, ಯಾವ ಯಾವ ವೃಂದಕ್ಕೆ ಎಷ್ಟೆಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ? ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಎಷ್ಟು ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

Fireman

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ
ಹುದ್ದೆಯ ಹೆಸರು ಫೈರ್ ಆಪರೇಟರ್
ಹುದ್ದೆಯ ಸಂಖ್ಯೆ 1828 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಪೂರ್ಣ ವಿವರ:

ಈ ಮೊದಲು ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳನ್ನು ಪ್ರತ್ಯೇಕವಾಗಿ ಭರ್ತಿ ಮಾಡಿಕೊಳ್ಳಲಾಗುತ್ತಿತ್ತು. ಇನ್ನು ಮುಂದೆ ಫೈರ್ ಆಪರೇಟರ್ ಎನ್ನುವ ಹೆಸರಿನಡಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಫೈರ್ ಆಪರೇಟರ್ (ಚಾಲಕ ತಂತ್ರಜ್ಞ)32 ಹುದ್ದೆಗಳು
ಫೈರ್ ಆಪರೇಟರ್ (ಅಗ್ನಿಶಾಮಕ ಚಾಲಕ)294 ಹುದ್ದೆಗಳು
ಫೈರ್ ಆಪರೇಟರ್ (ಅಗ್ನಿಶಾಮಕ)1502 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಫೈರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ.

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳು ದೈಹಿಕವಾಗಿ ಸದೃಢರಾಗಿರಬೇಕು ಹಾಗೂ ಇಲಾಖೆಯು ನಿಗದಿಪಡಿಸಿದ ದೈಹಿಕ ಗುಣಮಟ್ಟವನ್ನು ಹೊಂದಿರಬೇಕು.
  • ಹುದ್ದೆಗಳು ತಾಂತ್ರಿಕ ಹಾಗೂ ಚಾಲನೆ ಕೆಲಸಗಳನ್ನು ಒಳಗೊಂಡಿರುವುದರಿಂದ, ತಾಂತ್ರಿಕ ಕೆಲಸಗಳ ನಿರ್ವಹಣೆಗಾಗಿ ಐಟಿಐ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಭಾರೀ ವಾಹನ ಚಾಲಕ ಪರವಾನಗಿ ಹೊಂದಿರಬೇಕು.

ವಯೋಮಿತಿ ವಿವರ:

ಫೈರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಫೈರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ – 1 ಅಭ್ಯರ್ಥಿಗಳಿಗೆ ಅಂದಾಜು ರೂ. 250/-
  • ಪ್ರವರ್ಗ 2A, 2B, 3A, 3B ಹಾಗೂ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ಅಂದಾಜು ರೂ. 500/-

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಆನ್ಲೈನ್ ಬ್ಯಾಂಕಿಂಗ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಫೈರ್ ಆಪರೇಟರ್ ಹುದ್ದೆಗಳ ಭರ್ತಿಗೆ ಪ್ರಸ್ತಾವನೆಯನ್ನು ಹೊರಡಿಸಿದ್ದು, ಅಲ್ಲಿ ತಿಳಿಸಿರುವಂತೆ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500/- ದಿಂದ ರೂ. 76,100/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಶೀಘ್ರದಲ್ಲೇ ಫೈರ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಾಗ ಅಭ್ಯರ್ಥಿಗಳು ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದಾಗಿದೆ.

  • ಅಭ್ಯರ್ಥಿಗಳು ಮೊದಲು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ.
  • ಮುಖಪುಟದಲ್ಲಿರುವ ನೇಮಕಾತಿ ವಿಭಾಗದ ಮೇಲೆ ಕ್ಲಿಕ್ ಮಾಡಿ.
  • ನಂತರ ಫೈರ್ ಆಪರೇಟರ್ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಅಪ್ಲೈ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
  • ನಂತರ ನಿಮ್ಮ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನಂತರ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ
  • ಭರ್ತಿ ಮಾಡಿರುವ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳ ಸಾಮಾನ್ಯ ಹಾಗೂ ತಾಂತ್ರಿಕ ಜ್ಞಾನವನ್ನು ಪರೀಕ್ಷಿಸಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದೈಹಿಕ ಸಹಿಷ್ಣುತೆ ಪರೀಕ್ಷೆ
  • ಚಾಲನಾ ಕೌಶಲ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿದ ದಿನಾಂಕ 22-01-2026
ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ ದಿನಾಂಕ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆಗೆಳಿವೆ
ಅರ್ಜಿ ಸಲ್ಲಿಸಲು ಪ್ರಾರಂಭಿಕ ಹಾಗೂ ಕೊನೆಯ ದಿನಾಂಕಇನ್ನು ಪ್ರಕಟಗೊಂಡಿಲ್ಲ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಫೈರ್ ಆಪರೇಟರ್ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಹೊರಡಿಸಿದ್ದು, ಶೀಘ್ರದಲ್ಲೇ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಶಿಸ್ತುಬದ್ಧ ಜೀವನ ಹಾಗೂ ಸಮಾಜ ಸೇವೆಯಲ್ಲಿ ಭಾಗಿಯಾಗುವ ಹಂಬಲ ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಿಸಿದ ಪರೀಕ್ಷೆಗೆ ಸಿದ್ದತೆಯನ್ನು ಮಾಡಿಕೊಂಡು ಅರ್ಜಿ ಸಲ್ಲಿಸುವ ದಿನಾಂಕ ಪ್ರಕಟಗೊಂಡ ನಂತರ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment