Forest 750: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! SSLC, PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಆಗಸ್ಟ್ 30 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪ್ರಕೃತಿ ಮಡಿಲಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕದ ಅರಣ್ಯ ಇಲಾಖೆಯು ಖಾಲಿ ಇರುವ 700 ಕ್ಕೂ ಹೆಚ್ಚು ಫಾರೆಸ್ಟ್ ಗಾರ್ಡ್ ಹಾಗೂ ಫಾರೆಸ್ಟ್ ವಾಚರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಿದೆ. Forest 750


ಜಸ್ಟ್ ಪಿಯುಸಿ ಹಾಗೂ SSLC ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ.

ಇಲ್ಲಿ ಖಾಲಿ ಇರುವ 750 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ವೃಂದಕ್ಕೆ 700 ಹುದ್ದೆಗಳನ್ನು ಹಾಗೂ ಉಳಿಕೆ ಮೂಲ ವೃಂದಕ್ಕೆ 50 ಒಟ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 1-08-2026 ದಿಂದ 30-08-2026 ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

Forest 750

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು ಫಾರೆಸ್ಟ್ ಗಾರ್ಡ್ ಹಾಗೂ ಫಾರೆಸ್ಟ್ ವಾಚರ್
ಹುದ್ದೆಯ ಸಂಖ್ಯೆ ಒಟ್ಟು 750 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-08-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ರಕ್ಷಕ ಹಾಗೂ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ SSLC ಹಾಗೂ PUC ಪಾಸ್ ಆಗಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಅರಣ್ಯ ರಕ್ಷಕ ಹಾಗೂ ಅರಣ್ಯ ವೀಕ್ಷಕ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವಂತೆ ಹಂಚಿಕೆ ಮಾಡಲಾಗಿದೆ.

ವಿವಿಧ ವಲಯಗಳು ಹುದ್ದೆಗಳ ಸಂಖ್ಯೆ
ಕಲ್ಯಾಣ ಕರ್ನಾಟಕ ವಲಯ 700 ಹುದ್ದೆಗಳು
ಕಲ್ಯಾಣ ಕರ್ನಾಟಕೇತರ ವಲಯ 50 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ರಕ್ಷಕ ಹಾಗೂ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಫಾರೆಸ್ಟ್ ಗಾರ್ಡ್:

ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

ಫಾರೆಸ್ಟ್ ವಾಚರ್:

ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

  • ಫಾರೆಸ್ಟ್ ಗಾರ್ಡ್:
    • ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.
    • ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಒಬಿಸಿ (2A, 2B, 3A, 3B ವರ್ಗಗಳ) ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
    • ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ ST ಹಾಗೂ ಪ್ರವರ್ಗ-I ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.32
  • ಫಾರೆಸ್ಟ್ ವಾಚರ್:
    • ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
    • ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಒಬಿಸಿ (2A, 2B, 3A, 3B ವರ್ಗಗಳ) ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.
    • ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ ST ಹಾಗೂ ಪ್ರವರ್ಗ-I ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. 40

ಅರ್ಜಿ ಶುಲ್ಕ:

ಜನರಲ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ: 120/-

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: ಹುದ್ದೆಗಳಿಗೆ ಅನುಗುಣವಾಗಿ 45/- 70/-

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಕರ್ನಾಟಕ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಹಾಗೂ ಅರಣ್ಯ ವೀಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯು ಸಾಮಾನ್ಯ ಜ್ಞಾನ, ಪ್ರಚಲಿತ ಘಟನೆಗಳು, ತಾರ್ಕಿತ ಚಿಂತನೆ, ಪರಿಸರ ಮತ್ತು ಅರಣ್ಯ ರಕ್ಷಣೆ, ಕರ್ನಾಟಕದ ಇತಿಹಾಸ ಹಾಗೂ ಸಂವಿಧಾನ ಹಾಗೂ ಇತರೆ ಸಾಮಾನ್ಯ ವಿಷಯಗಳ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

  • ದೈಹಿಕ ಅರ್ಹತಾ ಪರೀಕ್ಷೆ:

ಪುರುಷ ಅಭ್ಯರ್ಥಿಗಳಿಗೆ:

  • ಕನಿಷ್ಠ ಎತ್ತರ: 163 ಸೆಂ.ಮೀ
  • ಎದೆ ಸುತ್ತಳತೆ: 79 ಸೆಂ.ಮೀ ಅಥವಾ ಹೆಚ್ಚು
  • ಎದೆ ವಿಸ್ತರಣೆ: ಉಸಿರು ತುಂಬಿದಾಗ ಕನಿಷ್ಠ 5 ಸೆಂ.ಮೀ ಹೆಚ್ಚಳ ಇರಬೇಕು

ಮಹಿಳಾ ಅಭ್ಯರ್ಥಿಗಳಿಗೆ:

  • ಕನಿಷ್ಠ ಎತ್ತರ: 150 ಸೆಂ.ಮೀ
  • ಕನಿಷ್ಠ ತೂಕ: 40 ಕೆ.ಜಿ

ದೈಹಿಕ ಸಾಮರ್ಥ್ಯ ಪರೀಕ್ಷೆ

ದೈಹಿಕ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯ ಉದ್ದೇಶ ಅಭ್ಯರ್ಥಿಗಳ ಸಹಿಷ್ಣುತೆ, ದೈಹಿಕ ಸಾಮರ್ಥ್ಯ ಹಾಗೂ ಅರಣ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡುವುದು.

ವೈದ್ಯಕೀಯ ಪರೀಕ್ಷೆ:

ದೈಹಿಕ ಸಾಮರ್ಥ್ಯ ಪರೀಕ್ಷೆ ಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು ಅರಣ್ಯ ಇಲಾಖೆಯ ಕರ್ತವ್ಯಗಳನ್ನು ನಿರ್ವಹಿಸಲು ಅಗತ್ಯವಾದ ಆರೋಗ್ಯ ಮಾನದಂಡಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಆಯ್ಕೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ವಿದ್ಯಾರ್ಹತೆ, ಗುರುತಿನ ದಾಖಲೆಗಳು ಹಾಗೂ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 01-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಪ್ರಕಟವಾಗಲಿರುವ ಫಾರೆಸ್ಟ್ ಗಾರ್ಡ್ ಹಾಗೂ ಫಾರೆಸ್ಟ್ ವಾಚರ್ ಹುದ್ದೆಗಳು ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ SSLC ಮತ್ತು PUC ಉತ್ತೀರ್ಣ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈಗಲೇ ಹುದ್ದೆಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಅಧಿಸೂಚನೆ ಹೊರಡಿಸಿದ ನಂತರ ನಿಮ್ಮ ಆಯ್ಕೆಯ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment