ನಮಸ್ಕಾರ ಸ್ನೇಹಿತರೆ, ನೀವೇನಾದರೂ ವನ್ಯ ಜೀವಿ ಸಂರಕ್ಷಣೆ, ಪ್ರಕೃತಿ ಸಂರಕ್ಷಣೆ ಜೊತೆಗೆ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಅರಣ್ಯ ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನವು ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಪರಿಸರ ಸ್ನೇಹಿ ಹಾಗೂ ಸಂವಹನ ಕೌಶಲ್ಯ ಹೊಂದಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Forest Department Job Recruitment 2026
ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಎರಡು ವರ್ಷಗಳ ಒಪ್ಪಂದದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 70,000/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಕರ್ನಾಟಕ ಅರಣ್ಯ ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನವು ಖಾಲಿ ಇರುವ ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಜುಲೈ 1, 2026 ರಂದು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು 18-07-2026 ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ |
| ಹುದ್ದೆಯ ಹೆಸರು | ಪಬ್ಲಿಕ್ ರಿಲೇಷನ್ಸ್ ಆಫೀಸರ್ |
| ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆಫ್ ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18-07-2026 |
| ಉದ್ಯೋಗ ಅವಧಿ | ಪ್ರಾರಂಭದಲ್ಲಿ ಎರಡು ವರ್ಷ |
| ಉದ್ಯೋಗ ಸ್ವರೂಪ | ಒಪ್ಪಂದ ಆಧಾರಿತ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನವು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಿಭಾಗದಲ್ಲಿ ಪದವಿ ಹೊಂದಿರುವ ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಪ್ರಾರಂಭಿಕ ಎರಡು ವರ್ಷಗಳ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗೂ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 70,000/- ವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಯ ವಿವರ:
ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.
ಶೈಕ್ಷಣಿಕ ಅರ್ಹತೆ:
KFWCCF ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ ಸಂಸ್ಥೆಯು ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅಧಿಕೃತ ವಯೋಮಿತಿಯನ್ನು ನಿಗದಿಪಡಿಸಿಲ್ಲ. ಆದರೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಎಷ್ಟು ವಯೋಮಿತಿಯನ್ನು ಹೊಂದಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ನಮೂದಿಸಬೇಕಾಗುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಇಲಾಖೆಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 70,000/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಹಾಗೂ ಪ್ರತಿ ವರ್ಷ 5% ವೇತನವನ್ನು ಸಹ ಹೆಚ್ಚಳ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು KWFCCF ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಡೌನ್ಲೋಡ್ ಮಾಡಲಾಗಿರುವ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ. ನಿಗದಿತ ಸ್ಥಳಕ್ಕೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
- ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಅನುಭವ ಪ್ರಮಾಣಪತ್ರಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
- ಈ ಎಲ್ಲ ಅಗತ್ಯ ದಾಖಲೆಗಳನ್ನು ಒಳಗೊಂಡ ಅಪ್ಲಿಕೇಶನ್ ಫಾರ್ಮ್ ಅನ್ನು ಒಂದು ಲಕೋಟೆಗೆ ಹಾಕಿ ನಿಗದಿತ ದಿನಾಂಕದೊಳಗಾಗಿ ಈ ಕೆಳಗೆ ತಿಳಿಸುವ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ:
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ,
ರೂಮ್ ನಂ. 704 C, 7th ಫ್ಲೋರ್,
ಅರಣ್ಯ ಭವನ, 18 ನೇ ಅಡ್ಡ ರಸ್ತೆ,
ಮಲ್ಲೇಶ್ವರಂ, ಬೆಂಗಳೂರು – 560003
ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ:
ಮೊದಲ ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಹಂತದಲ್ಲಿ ಐದು ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಅಂಕವನ್ನು ನೀಡಲಾಗುತ್ತದೆ ಅವುಗಳೆಂದರೆ,
- ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳಲ್ಲಿ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ, ಅರಣ್ಯ ಹಾಗೂ ವನ್ಯಜೀವಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ, ಕಂಟೆಂಟ್ ಕ್ರಿಯೇಟರ್ ಆಗಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹಾಗೂ ಕಾರ್ಪೊರೇಟ್ ವಲಯದೊಂದಿಗೆ ಸಂಪರ್ಕದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತಿ ವರ್ಷದ ಅನುಭವಕ್ಕೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಹಾಗೂ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆಗೆ 10 ಅಂಕಗಳನ್ನು ನಿಗದಿಪಡಿಸಲಾಗಿದೆ.
ಸಂದರ್ಶನ:
PRO ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಸಂಖ್ಯೆ 20 ಕ್ಕಿಂತ ಹೆಚ್ಚಿದ್ದರೆ, ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಿ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನವು ಒಟ್ಟು 50 ಅಂಕಗಳನ್ನು ಒಳಗೊಂಡಿರುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 01-07-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಅರಣ್ಯ, ವನ್ಯಜೀವಿ ಹಾಗೂ ಹವಾಮಾನ ಬದಲಾವಣೆ ಅನುಷ್ಠಾನ ಸಂಸ್ಥೆಯು ಖಾಲಿ ಇರುವ ಪಬ್ಲಿಕ್ ರಿಲೇಷನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿ ಸಂಬಂಧಿತ ಕ್ಷೇತ್ರದಲ್ಲಿ ವೃತ್ತಿಪರ ಅನುಭವವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- HPCL: ರೂ. 2,20,000/- ವೇತನ! ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2026! ಕೊನೆಯ ದಿನ 20 ಜುಲೈ
- KEA: ರಾಜ್ಯದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ 1042 ಶಿಕ್ಷಕರ ಹುದ್ದೆಗಳಿಗೆ ಬೃಹತ್ ನೇಮಕಾತಿ! ಇಂದೇ ಅಪ್ಲೈ ಮಾಡಿ
- IBPS: ರೂ. 85,920/- ವೇತನ! 11 ಸರ್ಕಾರಿ ಬ್ಯಾಂಕ್ಗಳಲ್ಲಿ 6,715 ಹುದ್ದೆಗಳ ಬೃಹತ್ ನೇಮಕಾತಿ । ಯಾವುದೇ ಪದವಿ ಸಾಕು । ಕೊನೆಯ ದಿನಾಂಕ ಜುಲೈ 21
- Zilla Panchayat: ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಸೂಪರ್ವೈಸರ್ ಹಾಗೂ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ! ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- UPSC: ಕೇಂದ್ರ ಲೋಕಸೇವಾ ಆಯೋಗದಲ್ಲಿ ಹುದ್ದೆಗಳ ಭರ್ಜರಿ ನೇಮಕಾತಿ 2026! ಡ್ರಗ್ ಇನ್ಸ್ಪೆಕ್ಟರ್, ಲೀಗಲ್ ಆಫೀಸರ್ ಹುದ್ದೆಗಳು । ಕೊನೆಯ ದಿನಾಂಕ 17-07-2026