Forest Watcher: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ

ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ನಿರುದ್ಯೋಗಿ ಯುವಕರಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರದ ಅರಣ್ಯ ಇಲಾಖೆಯು ರಾಜ್ಯದ ವಿವಿಧ ವಲಯಗಳಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

Forest Watcher Recruitment 2026


ಅರಣ್ಯ ಇಲಾಖೆಯು ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC ಅಲ್ಲಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 08, 2026 ರಿಂದ ಆರಂಭ ಗೊಳ್ಳಲಿದ್ದು, ಆಗಸ್ಟ್ 31, 2026 ರಕ್ಕೆ ಕೊನೆಗೊಳ್ಳುತ್ತದೆ.

ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,500/- ರಿಂದ ರೂ. 46,675/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದಲ್ಲಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Forest Watcher

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು ಅರಣ್ಯ ವೀಕ್ಷಕ
ಹುದ್ದೆಯ ಸಂಖ್ಯೆ ಒಟ್ಟು 750 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2026
ಉದ್ಯೋಗ ಸ್ಥಳ ಕರ್ನಾಟಕದ ವಿವಿಧ ಅರಣ್ಯ ವಲಯಗಳು

ಹುದ್ದೆಯ ಕಿರು ಪರಿಚಯ:

ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ವಿವಿಧ ಅರಣ್ಯ ವಲಯಗಳಲ್ಲಿ ಖಾಲಿ ಇರುವ ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 31ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗದೆ. ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ 18 ವರ್ಷದಿಂದ 33 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ರಾಜ್ಯ ವಿವಿಧ ಅರಣ್ಯ ವಲಯಗಳಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವಂತೆ ಹಂಚಿಕೆ ಮಾಡಲಾಗುತ್ತದೆ.

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ಉಳಿಕೆ ಮೂಲ ವೃಂದ 700 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ 50 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಅರಣ್ಯ ವೀಕ್ಷಕ:

ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ರಾಜ್ಯದ ವಿವಿಧ ಅರಣ್ಯ ವಲಯಗಳಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ವಿವಿಧ ವರ್ಗಗಳ ಅಭ್ಯರ್ಥಿಗಳು ಈ ಕೆಳಕಂಡಂತೆ ಗರಿಷ್ಟ ವಯೋಮಿತಿಯನ್ನು ಹೊಂದಿರಬೇಕು

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 30 ವರ್ಷ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 32 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು: 33 ವರ್ಷ

ವಯೋಮಿತಿ ಸಡಿಲಿಕೆ:

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಸೇವೆ ಸಲ್ಲಿಸಿದ ಅವಧಿಯನ್ನು ಹೊರತುಪಡಿಸಿ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರಣ್ಯ ಇಲಾಖೆಯಲ್ಲಿ ಅರಣ್ಯ ಪ್ರೇಕ್ಷಕರಾಗಿ 5 ವರ್ಷಗಳ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಕಂಡಂತೆ ಗರಿಷ್ಟ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 40 ವರ್ಷ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 42 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು: 43 ವರ್ಷ

ಅರ್ಜಿ ಶುಲ್ಕ:

  • ಸಾಮಾನ್ಯ, ಇತರೆ ಹಿಂದುಳಿದ (2A, 2B, 3A, 3B) ವರ್ಗಗಳ ಪುರುಷ ಅಭ್ಯರ್ಥಿಗಳಿಗೆ 200/-
  • ಸಾಮಾನ್ಯ, ಇತರೆ ಹಿಂದುಳಿದ (2A, 2B, 3A, 3B) ವರ್ಗಗಳ ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 100/-
  • ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪುರುಷ ಅಭ್ಯರ್ಥಿಗಳಿಗೆ 100/-
  • ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 50/-
  • ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬಹುದಾಗಿದೆ.

ವೇತನ ಶ್ರೇಣಿ:

ಸರ್ಕಾರದ ನಿಯಮಾವಳಿಗಳ ಪ್ರಕಾರ, ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,500/- ದಿಂದ ರೂ. 46,675/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿಕೊಳ್ಳಲಗುತ್ತದೆ.

  • ದೈಹಿಕ ಪರೀಕ್ಷೆ:

ದೈಹಿಕ ಅಳತೆ ತಾಪಮಾನ:

ಪುರುಷ ಅಭ್ಯರ್ಥಿಗಳು 163 ಸೆಂ. ಮೀ ಎತ್ತರವನ್ನು ಹೊಂದಿರಬೇಕು ಹಾಗೂ ಎದೆಯ ಸುತ್ತಳತೆ 79 ಸೆಂ. ಮೀ (ವಿಸ್ತರಣಾ ಸಾಮರ್ಥ್ಯ 5 ಸೆಂ. ಮೀ) ಇರಬೇಕು ಹಾಗೂ ಮಹಿಳಾ ಅಭ್ಯರ್ಥಿಗಳು 150 ಸೆಂ. ಮೀ ಎತ್ತರವನ್ನು ಹೊಂದಿರಬೇಕು.

ದೈಹಿಕ ತಾಳ್ವಿಕೆ ಪರೀಕ್ಷೆ:

ಈ ಹಂತದಲ್ಲಿ ಪುರುಷ ಅಭ್ಯರ್ಥಿಗಳು 7 ನಿಮಿಷಕ್ಕೆ 1600 ಮೀಟರ್ ಹಾಗೆ ಮಹಿಳಾ ಅಭ್ಯರ್ಥಿಗಳು 6 ನಿಮಿಷಕ್ಕೆ 1000 ಮೀಟರ್ ಓಡಬೇಕು.

ದೈಹಿಕ ಸಾಮರ್ಥ್ಯ ಪರೀಕ್ಷೆ:

ಈ ಹಂತದಲ್ಲಿ ಅಭ್ಯರ್ಥಿಗಳಿಗೆ ನೂರು ಮೀಟರ್ ಓಟ, ಹೈ ಜಂಪ್, ಲಾಂಗ್ ಜಂಪ್, ಶಾರ್ಟ್ ಪುಟ್ ಸೇರಿದಂತೆ ಒಟ್ಟು ಐದು ವಿವಿಧ ಪರೀಕ್ಷಯನ್ನು ನಡೆಸಲಾಗುತ್ತದೆ ಅಭ್ಯರ್ಥಿಗಳ ಮೂರು ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.

  • ವೈದ್ಯಕೀಯ ಪರೀಕ್ಷೆ:

ಅಭ್ಯರ್ಥಿಗಳು SSLC ಅಲ್ಲಿ ಹಾಗೂ ದೈಹಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ನಂತರ ದಾಖಲೆಗಳನ್ನು ಪರಿಶೀಲಿಸಿ, ವೈದ್ಯಕೀಯ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ 20-07-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 01-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯ ವಿವಿಧ ಅರಣ್ಯ ವೃತ್ತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರಕೃತಿ ಮಡಿಲಿನಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶಾವಾಗಿದೆ. ಜಸ್ಟ್ SSLC ಪಾಸ್ ಆಗಿ ದೈಹಿಕವಾಗಿ ಸದೃಢರಾಗಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಕನಸಿನ ವೃತ್ತಿಯನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment