Free Tablet: SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಉಚಿತ ಟ್ಯಾಬ್ಲೆಟ್ ಯೋಜನೆಗೆ ಅರ್ಜಿ ಆಹ್ವಾನ । ಇಂದೇ ಅಪ್ಲೈ ಮಾಡಿ

ಉತ್ತಮ ಅಂಕವನ್ನು ಗಳಿಸಿ SSLC ಪರೀಕ್ಷೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ಗಳನ್ನು ನೀಡಲು ಸರ್ಕಾರವು ಮುಂದಾಗಿದೆ. ಸರ್ಕಾರವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಉಚಿತ ಟ್ಯಾಬ್ಲೆಟ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Free Tablet Scheme for SSLC Students

ಸರ್ಕಾರವು ಉಚಿತವಾಗಿ ವಿತರಿಸುವ ಈ ಒಂದು ಡಿಜಿಟಲ್ ಉಪಕರಣವು ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾದಿಯಲ್ಲಿ ಸುಗಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು SSLC ಮುಗಿಸಿ PUC, ಡಿಪ್ಲೊಮಾ ಅಥವಾ ಐಟಿಐ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಾರೆ. ಈ ಒಂದು ಹಂತದಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ತಾಂತ್ರಿಕ ವಿಷಯಗಳನ್ನು ವಿಡಿಯೋ ಅಥವಾ ಅನಿಮೇಷನ್ ಮೂಲಕ ಸುಲಭವಾಗಿ ಅರ್ಥ ಮಾಡಿಕೊಳ್ಳಲು ಈ ಒಂದು ಟ್ಯಾಬ್ ಹೆಲ್ಪ್ ಆಗಲಿದೆ.

ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣವು ಕೇವಲ ಪುಸ್ತಕಕ್ಕೆ ಸೀಮಿತವಾಗಿಲ್ಲ. ತಾಂತ್ರಿಕ ಶಿಕ್ಷಣವು ಕೂಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗೆಯೇ ಯಾವುದೇ ವಿದ್ಯಾರ್ಥಿ ಹೆಚ್ಚಿನ ಅಂಕವನ್ನು ಗಳಿಸಿದ್ದರೂ ಕೂಡ ತಾಂತ್ರಿಕ ಕೌಶಲ್ಯವನ್ನು ಹೊಂದಿಲ್ಲವಾದರೆ ಅವನು ಈ ಒಂದು ತಾಂತ್ರಿಕ ಜಗತ್ತಿನಲ್ಲಿ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುವುದು ಕಷ್ಟಕರವಾಗುತ್ತದೆ. ಈ ಒಂದು ತಾಂತ್ರಿಕ ಯುಗದ ಅಗತ್ಯತೆಯನ್ನು ಮನಗಂಡ ಸರ್ಕಾರವು ಶೈಕ್ಷಣಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕೆನ್ನುವ ಉದ್ದೇಶದಿಂದ ಉಚಿತ ಟ್ಯಾಬ್ಲೆಟ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದೆ.

Free Tablet

ಯೋಜನೆಯ ವಿಮರ್ಶೆ:

ಯೋಜನೆಯ ಹೆಸರು ಫ್ರೀ ಟ್ಯಾಬ್ಲೆಟ್ ವಿತರಣಾ ಯೋಜನೆ
ಅರ್ಹ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ SSLC ವಿದ್ಯಾರ್ಥಿಗೆಳು
ಯೋಜನೆಯ ಲಾಭ ಉಚಿತವಾಗಿ ಟ್ಯಾಬ್ಲೆಟ್ ಗಳನ್ನು ಪಡೆದುಕೊಳ್ಳುವುದು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಯೋಜನೆಯ ಹಿನ್ನಲೆ:

ಕೋವಿಡ್ ನಂತರ ಶಿಕ್ಷಣ ವ್ಯವಸ್ಥೆಯು ಸಂಪೂರ್ಣ ಬದಲಾಗಿದ್ದು, SSLC ಮುಗಿಸಿ ಡಿಪ್ಲೊಮಾ ಹಾಗೂ PUC ಗೆ ಸೇರಿದ ವಿದ್ಯಾರ್ಥಿಗಳಿಗೆ ಫೋನ್ ಅಥವಾ ಟ್ಯಾಬ್ ಅಗತ್ಯವಾಗಿರುತ್ತದೆ. ಆದರೆ ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳಿಗೆ ದುಬಾರಿಯ ಫೋನ್ ಅಥವಾ ಟ್ಯಾಬ್ಲೆಟ್ ಕೊಳ್ಳುವುದು ಕಷ್ಟಕರವಾಗುತ್ತದೆ. ಇದನ್ನು ಮನಗಂಡ ಸರ್ಕಾರವು SSLC ಮುಗಿಸಿ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ಗಳನ್ನು ನೀಡಲು ನಿರ್ಧರಿಸಿದೆ.

ಈ ಒಂದು ಯೋಜನೆಯನ್ನು ಜಾರಿಗೊಳಿಸಿದ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಸಮಾನ ಶೈಕ್ಷಣಿಕ ಅವಕಾಶವನ್ನು ಕಲ್ಪಿಸುವುದು ಹಾಗೂ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದಾಗಿದೆ.

ಯೋಜನೆಯ ಉದ್ದೇಶ:

  • ವಿದ್ಯಾರ್ಥಿಗಳ ಆನ್ಲೈನ್ ಕಲಿಕೆಗೆ ಪ್ರೋತ್ಸಾಹಿಸುವುದು:

ಇಂದಿನ ಡಿಜಿಟಲ್ ಯುಗದಲ್ಲಿ ತಾಂತ್ರಿಕ ಶಿಕ್ಷಣವು ಅನಿವಾರ್ಯವಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ನೀಡುವ ಮೂಲಕ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯೂಟ್ಯೂಬ್ ಶಿಕ್ಷಣ, ಇ- ಲರ್ನಿಂಗ್ ಹಾಗೂ ಆನ್ಲೈನ್ ಶಿಕ್ಷಣಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು.

  • ಸಮಾನ ಶೈಕ್ಷಣಿಕ ಅವಕಾಶವನ್ನು ಕಲ್ಪಿಸುವುದು:

SSLC ಅಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ನೀಡುವ ಮೂಲಕ ಶ್ರೀಮಂತ ಮತ್ತು ಬಡ ವಿದ್ಯಾರ್ಥಿಗಳ ನಡುವಿನ ತಾಂತ್ರಿಕ ಅಂತರಗಳನ್ನು ಕಡಿಮೆ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

  • ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು:

ವಿದ್ಯಾರ್ಥಿಗಳ ಶಿಕ್ಷಣವು ಕೇವಲ ಪಠ್ಯ ಪುಸ್ತಕಗಳ ಮಾಹಿತಿಗೆ ಮಾತ್ರ ಸೀಮಿತವಾಗಿರದೆ, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣಕ್ಕೆ ಸಂಬಂಧಿಸಿದ ಜ್ಞಾನ, ಕೌಶಲ್ಯಗಳನ್ನು ಟ್ಯಾಬ್ ಮೂಲಕ ಸುಲಭವಾಗಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸುವುದು.

ವಿದ್ಯಾರ್ಥಿಗಳಿಗಾಗುವ ಪ್ರಯೋಜನಗಳು:

  • ವಿದ್ಯಾರ್ಥಿಗಳು ಡಿಜಿಟಲ್ ಸಾಧನಗಳನ್ನು ಹಾಗೂ ಆನ್ಲೈನ್ ವೇದಿಕೆಗಳನ್ನು ಬಳಸುವ ಮೂಲಕ ತಂತಜ್ಞಾನದಲ್ಲಿ ನೈಪುಣ್ಯತೆಯನ್ನು ಹೊಂದುತ್ತಾರೆ
  • ಯೂಟ್ಯೂಬ್ ಗಳಲ್ಲಿ ವಿವಿಧ ವಿಷಯಗಳ ಕುರಿತು ಸಾವಿರಾರು ಶೈಕ್ಷಣಿಕ ವಿಡಿಯೋಗಳು ಲಭ್ಯವಿರುವುದರಿಂದ ವಿದ್ಯಾರ್ಥಿಗಳು ತಮಗೆ ಡೌಟ್ ಇರುವ ವಿಷಯಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.
  • ವಿದ್ಯಾರ್ಥಿಗಳು ವಿಜ್ಞಾನದ ಪ್ರಯೋಗಗಳ ವಿಡಿಯೋ, ಪಠ್ಯಪುಸ್ತಕಗಳ ಪಿಡಿಎಫ್, ಗಣಿತ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಲು ಈ ಒಂದುಟ್ಯಾಬ್ ನೆರವಾಗಲಿದೆ.
  • ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೂ ಕೂಡ ಸಿದ್ಧತೆ ಮಾಡಿಕೊಳ್ಲಬಹುದು.

ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಕರ್ನಾಟಕ ರಾಜ್ಯದ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ SSLC ಪೂರ್ಣಗೊಳಿಸಿರಬೇಕು.
  • ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ, OBC ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
  • ವಿದ್ಯಾರ್ಥಿಗಳು SSLC ಮುಗಿಸಿದ ನಂತರ PUC, ಡಿಪ್ಲೊಮಾ, ಐಟಿಐ ಹಾಗೂ ಇನ್ನಿತರ ಯಾವುದೇ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿರಬೇಕು.
  • ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

ವಿದ್ಯಾರ್ಥಿಗಳು ಸರ್ಕಾರದ ಕಡೆಯಿಂದ ಉಚಿತವಾಗಿ ಟ್ಯಾಬ್ ಗಳನ್ನು ಪಡೆದುಕೊಳ್ಳಬೇಕಾದರೆ ಈ ಎಲ್ಲಾ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

  • SSLC ಅಂಕಪಟ್ಟಿ
  • ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ಜಾತಿ ಪ್ರಮಾಣಪತ್ರ
  • ಮುಂದಿನ ತರಗತಿಯ ಪ್ರವೇಶ ಪತ್ರ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ರೇಷನ್ ಕಾರ್ಡ್
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಿಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನೋಂದಣಿ ಸಮಯದಲ್ಲಿ ನಿಮ್ಮ SSLC ರಿಜಿಸ್ಟರ್ ನಂಬರ್, SSLC ಪರೀಕ್ಷೆಯಲ್ಲಿ ತೇರ್ಗಡೆಯಾದ ವರ್ಷವನ್ನು ಸರಿಯಾಗಿ ಭರ್ತಿ ಮಾಡಿ
  • ನಂತರ ನೋಂದಣಿ ಸಂಖ್ಯೆ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಮುಖಪುಟದಲ್ಲಿ ಕಾಣುವ ಫ್ರೀ ಟ್ಯಾಬ್ಲೆಟ್ ಫಾರ್ SSLC ಸ್ಟೂಡೆಂಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ ಹಾಗೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ವಿವರಗಳು ಹಾಗೂ ಅಪ್ಲೋಡ್ ಮಾಡಿರುವ ಎಲ್ಲಾ ಅಗತ್ಯ ದಾಖಲೆಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಸ್ವೀಕೃತಿ ಪತ್ರವನ್ನು ಪ್ರಿಂಟ್ ತೆಗೆದುಕೊಳ್ಳಿ.

ಅಂತಿಮ ತೀರ್ಮಾನ:

ಸರ್ಕಾರವು SSLC ಅಲ್ಲಿ ಉತ್ತಮ ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದ್ದು, ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯು ಬಹಳಷ್ಟು ನೆರವಾಗಲಿದೆ. ನೀವೇನಾದರೂ SSLC ಅಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment