KSRTC Free Training: ಕರ್ನಾಟಕ ಸರ್ಕಾರದಿಂದ ಉಚಿತ ಡ್ರೈವಿಂಗ್ ತರಬೇತಿ + ಫ್ರೀ ಲೈಸೆನ್ಸ್! ಇಂದೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ಸಾವಿರಾರು ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿಯನ್ನು ನೀಡುವ ಮೂಲಕ ಸ್ವಂತ ಉದ್ಯೋಗವನ್ನು ಕಲ್ಪಿಸುವ ಪ್ರಯತ್ನ ಮಾಡಿದೆ.

Free Training Scheme in Kannada

ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಯೋಗದೊಂದಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಸ್ಥೆಯ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ನೀಡಲಾಗುತ್ತದೆ.

ಈ ಒಂದು ಉಚಿತ ತರೆಬೇತಿಯನ್ನು ಪಡೆದುಕೊಳ್ಳಲು ಯಾರು ಅರ್ಹರು? ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.

Free Training

ಪ್ರಮುಖ ಹೈಲೈಟ್ಸ್:

* ಅರ್ಹ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸದೆ ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಳ್ಳಬಹುದು.
* ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ
* ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನು ಸಹ ಪಡೆದುಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಉಚಿತವಾಗಿ ತರಬೇತಿಯನ್ನು ಪಡೆದ ನಂತರ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಉಚಿತ ತರಬೇತಿ ಬಗ್ಗೆ ಸಂಕ್ಷಿಪ್ತ ವಿವರ:

ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಹಯೋಗದೊಂದಿಗೆ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಟಿಯನ್, ಜೈನ, ಬೌದ್ದ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ವಾಹನ ಚಾಲನಾ ತರಬೇತಿಯನ್ನು ನೀಡುತ್ತಿದ್ದು, ಇಲ್ಲಿ ಅಭ್ಯರ್ಥಿಗಳು ಲಘು ವಾಹನ ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಲಘು ವಾಹನ ಚಾಲನಾ ತರಬೇತಿ ಪಡೆಯುವ ಹಾಗೂ ಭಾರಿ ವಾಹನ ಚಾಲನಾ ತರಬೇತಿ ಪಡೆದುಕೊಳ್ಳುವ ಅಭ್ಯರ್ಥಿಗಳಿಗೆ ವಿಭಿನ್ನ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹಾಗೂ ಅಭ್ಯರ್ಥಿಗಳು ಉಚಿತವಾಗಿ ತರಬೇತಿಯನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಅವರಿಗೆ ಊಟ ಮತ್ತು ವಸತಿ ಸೌಲಭ್ಯಗಳು ಸಿಗುತ್ತದೆ.

ಈ ಒಂದು ಯೋಜನೆಯ ಮುಖ್ಯ ಉದ್ದೇಶ:

  • ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ನೀಡುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸುವಂತೆ ಅವಕಾಶ ಕಲ್ಪಿಸುವುದು.
  • ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ಅಭ್ಯರ್ಥಿಗಳಿಗೆ ಸಾರಿಗೆ ಕ್ಷೇತ್ರದಲ್ಲಿ ಅಂದರೆ ಸರಕು ಸಾಗಣೆ, ಪ್ರವಾಸೋದ್ಯಮ ಹಾಗೂ ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗವನ್ನು ಕಂಡುಕೊಂಡು ಈ ಒಂದು ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅವಕಾಶ ಕಲ್ಪಿಸುವುದು.
  • ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯಗಳ ಅಭ್ಯರ್ಥಿಗಳಿಗೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ಉತ್ತಮ ಮಟ್ಟದ ವಾಹನ ಚಾಲನಾ ಕೌಶಲ್ಯವನ್ನು ಪಡೆದುಕೊಳ್ಳುವಂತೆ ಅವಕಾಶ ಕಲ್ಪಿಸುವುದು.

ಅರ್ಹ ಫಲಾನುಭವಿಗಳಿಗೆ ಸಿಗುವ ಪ್ರಯೋಜನಗಳು:

  • ಸಂಪೂರ್ಣ ಉಚಿತ ವಾಹನ ಚಾಲನಾ ತರಬೇತಿ:

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಒಂದು ರೂಪಾಯಿಯ ಖರ್ಚಿಲ್ಲದೆ ಸಂಪೂರ್ಣ ಉಚಿತವಾಗಿ ಒಂದು ತಿಂಗಳ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ.

  • ಉಚಿತ ಊಟ ಮತ್ತು ವಸತಿ ಸೌಲಭ್ಯ:

ಅಭ್ಯರ್ಥಿಗಳು ಒಂದು ತಿಂಗಳುಗಳ ಕಾಲ ಈ ಒಂದು ತರಬೇತಿಯನ್ನು ಪಡೆದುಕೊಳ್ಳುವ ಜೊತೆಗೆ ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

  • ವೃತ್ತಿಪರ ಕೌಶಲ್ಯವನ್ನು ಪಡೆದುಕೊಳ್ಳಲು ಅವಕಾಶ:

ಈ ಒಂದು ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕೇವಲ ವಾಹನ ಚಾಲನಾ ತರಬೇತಿಯನ್ನು ಮಾತ್ರ ನೀಡದೆ, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳು ಹಾಗೂ ವಾಹನ ನಿರ್ವಹಣೆಗೆ ಸಂಬಂಧಿಸಿದಂತೆ ವೃತ್ತಿಪರ ಕೌಶಲ್ಯಯುತ ತರಬೇತಿಯನ್ನು ನೀಡಲಾಗುತ್ತದೆ

  • ಉಚಿತ ಡ್ರೈವಿಂಗ್ ಲೈಸನ್ಸ್:

ಅಭ್ಯರ್ಥಿಗಳು ಯಶಸ್ವಿಯಾಗಿ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಂಡರೆ RTO ಮೂಲಕ ಯಾವುದೇ ಖರ್ಚಿಲ್ಲದೆ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಹಣವನ್ನು ಸರ್ಕಾರವೇ ಭರಿಸುತ್ತದೆ.

ವಾಹನ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಹರಾದ ಅಭ್ಯರ್ಥಿಗಳು:

  • ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಟಿಯನ್, ಜೈನ, ಬೌದ್ದ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅಭ್ಯರ್ಥಿಗಳು ಕನಿಷ್ಠ SSLC ಅಲ್ಲಿ ಉತ್ತೀರ್ಣರಾಗಿರಬೇಕು.
  • ಲಘು ವಾಹನ ಚಾಲನಾ ತರಬೇತಿ ಪಡೆದುಕೊಳ್ಳುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಭಾರಿ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಳ್ಳುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಅಭ್ಯರ್ಥಿಗಳ ಆಧಾರ್ ಕಾರ್ಡ್
  • 04 ಪಾಸ್ಪೋರ್ಟ್ ಸೈಜ್ ಫೋಟೋ
  • ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ
  • SSLC ಅಂಕಪಟ್ಟಿ
  • ವೈದ್ಯಕೀಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್ ವಿವರ
  • ಭಾರಿ ವಾಹನ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ವಾಹನ ಡ್ರೈವಿಂಗ್ ಲೈಸೆನ್ಸ್ (DL) ಹೊಂದಿರಬೇಕು
  • ಹಾಗೂ ಇತರೆ ದಾಖಲೆಗಳು

ಪ್ರಮುಖ ತರಬೇತಿ ಕೇಂದ್ರಗಳು:

ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ತರಬೇತಿ ಕೇಂದ್ರಗಳಲ್ಲಿ ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ.

  • ಕೇಂದ್ರೀಯ ತರಬೇತಿ ಕೇಂದ್ರ ಮಾಲೂರು
  • ಪ್ರಾದೇಶಿಕ ತರಬೇತಿ ಕೇಂದ್ರ ಚಿಕ್ಕಮಗಳೂರು
  • ಪ್ರಾದೇಶಿಕ ತರಬೇತಿ ಕೇಂದ್ರ ಮಳವಳ್ಳಿ
  • ಪ್ರಾದೇಶಿಕ ತರಬೇತಿ ಕೇಂದ್ರ ಹಾಸನ
  • ಪ್ರಾದೇಶಿಕ ತರಬೇತಿ ಕೇಂದ್ರ ಹೊಳಲ್ಕೆರೆ

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಈ ಒಂದು ಉಚಿತ ತರಬೇತಿಯನ್ನು ಪಡೆದುಕೊಳ್ಳುವ ಮೊದಲು ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ನಂತರ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

1. ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳುವ ವಿಧಾನ:

  • ಉಚಿತ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು KSRTC ಅಧಿಕೃತ ವೆಬ್ಸೈಟ್ https://ksrtcjobs.karnataka.gov.in/ ಗೆ ಭೇಟಿ ನೀಡಿ.
  • ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಉಚಿತ ಲಘು ವಾಹನ/ ಭಾರಿ ವಾಹನ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾದ ನಿಮ್ಮ ಹೆಸರು, ನಿಮ್ಮ ತಂದೆಯ ಹೆಸರು, ಜನ್ಮ ದಿನಾಂಕ, ನಿಮ್ಮ ಧರ್ಮ, ದೂರವಾಣಿ ಸಂಖ್ಯೆ, ಇಮೇಲ್ ಐಡಿ ಅನ್ನು ಭರ್ತಿ ಮಾಡಿ
  • ನಂತರ ನೀವು ಆಯ್ಕೆ ಮಾಡಿಕೊಳ್ಳುವ ತರೆಬೇತಿ ಹಾಗೂ ತರಬೇತಿ ಕೇಂದ್ರವನ್ನು ಆಯ್ಕೆಮಾಡಿಕೊಂಡು ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.

2. ಸಂಬಂಧಿತ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವ ವಿಧಾನ:

ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಿ.

  • ಆನ್ಲೈನ್ ಮೂಲಕ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಕೂಡ ತಮ್ಮ ಎಲ್ಲಾ ಅಗತ್ಯ ದಾಖಲೆಗಳನ್ನು ಈ ಕೆಳೆಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಕಚೇರಿ ವಿಳಾಸ: “ಕ. ರ. ರ. ಸಾ. ನಿಗಮ, ಕೇಂದ್ರೀಯ ತರಬೇತಿ ಕೇಂದ್ರ ಕೋಲಾರ ಮುಖ್ಯ ರಸ್ತೆ, ಮಾರುತಿ ಬಡಾವಣೆ, ಬಸ್ ಡಿಪೋ ಪಕ್ಕ, ಮಾಲೂರು – 563 130”

ಅಂತಿಮ ಮಾತು:

ಕರ್ನಾಟಕ ಸರ್ಕಾರವು ಬಡ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಅಲ್ಪಸಂಖ್ಯಾತರ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಂತ ಉದ್ಯೋಗವನ್ನು ಕಂಡುಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಲು ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ನೀಡುತ್ತಿದ್ದು, ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯ ಇರುವುದಿಲ್ಲ. ಇಲ್ಲಿ ತರಬೇತಿಯನ್ನು ಮಾತ್ರ ನೀಡದೆ, ಉಚಿತ ಊಟ ಮತ್ತು ವಸತಿ ಸೌಲಭ್ಯ ಹಾಗೂ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲಾಗುತ್ತದೆ. ನೀವೇನಾದರೂ ಸ್ವಂತ ಉದ್ಯೋಗವನ್ನು ಕಂಡುಕೊಂಡು ಗೌರವಯುತ ಜೀವನವನ್ನು ನಡೆಸಲು ಬಯಸಿದರೆ ಇದೊಂದು ಸುವರ್ಣಾವಕಾಶವಾಗಿದೆ.


ಇತರೆ ಪ್ರಮುಖ ಲಿಂಕುಗಳು:

75 thoughts on “KSRTC Free Training: ಕರ್ನಾಟಕ ಸರ್ಕಾರದಿಂದ ಉಚಿತ ಡ್ರೈವಿಂಗ್ ತರಬೇತಿ + ಫ್ರೀ ಲೈಸೆನ್ಸ್! ಇಂದೇ ಅಪ್ಲೈ ಮಾಡಿ”

  1. ಮಾದನಾಯಕನಹಳ್ಳಿ
    ಪೋಸ್ಟ್ : ತಾಲೋರ್
    ತಾ ;maddur
    ಜಿಲ್ಲೆ ; ಮಂಡ್ಯ

    Reply
  2. ಮುದ್ದಾನಹಳ್ಳಿ
    ಕೇರಗೋಡ್ :ಪೋಸ್ಟ್
    ಹೊಳೆನರಸೀಪುರ. ತಾಲೂಕು
    ಹಾಸನ. ಡಿಸ್ಟಿಕ್

    Reply
  3. ಜಯಂತಿ ನಗರ
    ಹಿರೇಕೆರೆ ಹಳ್ಳಿ. ಪೋಸ್ಟ್
    ಮೊಳಕಾಲ್ಮೂರು. ತಾ
    ಚಿತ್ರದುರ್ಗ.ಜಿಲ್ಲೆ

    Reply
  4. ಮಳವಳ್ಳಿ ತಾಲೂಕು ಮಂಡ್ಯ ಜಿಲ್ಲೆ ಹಲಗೂರು ಹೋಬಳಿ ನಿಟ್ಟೂರ್ ಗ್ರಾಮ

    Reply

Leave a Comment