ರಾಯಚೂರು ಜಿಲ್ಲೆಯಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಬೇಕೆಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ರಾಯಚೂರು ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Gram Panchayat Recruitment 2026
ದ್ವಿತೀಯ ಪಿಯುಸಿ ಜೊತೆಗೆ 3 ತಿಂಗಳ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 27-05-2026 ರಿಂದ ಆರಂಭಗೊಂಡು ದಿನಾಂಕ 10-06-2026 ಕ್ಕೆ ಕೊನೆಗೊಳ್ಳುತ್ತಾದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಜಿಲ್ಲಾ ಪಂಚಾಯತ್, ರಾಯಚೂರು |
| ಹುದ್ದೆಯ ಹೆಸರು | ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು |
| ಹುದ್ದೆಯ ಸಂಖ್ಯೆ | 13 ಹುದ್ದೆಗಳು |
| ಉದ್ಯೋಗ ಸ್ಥಳ | ರಾಯಚೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-06-2026 |
ಹುದ್ದೆಗಳ ಸಂಕ್ಷಿಪ್ತ ವಿವರ:
ಜಿಲ್ಲಾ ಪಂಚಾಯತ್ ರಾಯಚೂರು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 13 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳನ್ನು ಪ್ರಮುಖ 7 ತಾಲ್ಲೂಕುಗಳಲ್ಲಿ ಹಂಚಿಕೆ ಮಾಡಲಾಗಿದೆ.
ಗ್ರಂಥಾಲಯ ಮೇಲ್ವಿಚಾರ ಹುದ್ದೆಗಳನ್ನು ಸಿಗಂದೂರು, ದೇವದುರ್ಗ, ಮಸ್ಕಿ, ಮಾನವಿ, ರಾಯಚೂರು, ಲಿಂಗಸೂಗೂರು ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ನೇಮಕಾತಿ ನಡೆಯಲಿದೆ. ಈ ಹುದ್ದೆಗಳನ್ನು ವಿವಿಧ ವರ್ಗಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ.
| ವಿವಿಧ ವರ್ಗಗಳ ಅಭ್ಯರ್ಥಿಗಳು | ಹುದ್ದೆಗಳ ಸಂಖ್ಯೆ |
| ಮಹಿಳಾ ಅಭ್ಯರ್ಥಿಗಳು | 06 ಹುದ್ದೆಗಳು |
| ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು | 03 ಹುದ್ದೆಗಳು |
| ಗ್ರಾಮೀಣ ಭಾಗದ ಅಭ್ಯರ್ಥಿಗಳು | 02 ಹುದ್ದೆಗಳು |
| ಅಂಗವಿಕಲ ಅಭ್ಯರ್ಥಿಗಳು | 01 ಹುದ್ದೆ |
| ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು | 01 ಹುದ್ದೆ |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
- ಅಭ್ಯರ್ಥಿಗಳು ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಮುಗಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.
- ಜೊತೆಗೆ ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ ಪೂರ್ಣಗಳಿಸಿರಬೇಕು.
ವಯೋಮಿತಿ ವಿವರ:
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 27-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಹಾಗೂ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು ಗರಿಷ್ಟ 43 ವರ್ಷ, ಪ್ರವರ್ಗ 1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ವಿಶೇಷ ಚೇತನ ಅಭ್ಯರ್ಥಿಗಳಿಗೆ, ವಿಧವೆಯರಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- ವಿಧವೆಯರಿಗೆ: 10 ವರ್ಷ
- ವಿಶೇಷ ಚೇತನ ಅಭ್ಯರ್ಥಿಗಳಿಗೆ: 10 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವಾ ಅವಧಿ ಮುಗಿದ ನಂತರದ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ರಾಯಚೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಜಿಲ್ಲಾ ಪಂಚಾಯತ್ ಸಾಮಾನ್ಯ ಖಾತೆಗೆ ಪಾವತಿಸಿ,ಚಲನ್ ಅನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: ರೂ. 500/-
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 300/-
- ಪ್ರವರ್ಗ 1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: ರೂ. 200/-
- ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 100/-
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಗಳ ಪ್ರಕಾರ, ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾಲಕಾಲಕ್ಕೆ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ರಾಯಚೂರು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಹುದ್ದೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ನಿಗದಿಪಡಿಸಿದ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕವನ್ನು ಪಾವತಿಸಿ ಚಲನ್ ಪಡುದುಕೊಳ್ಳಿ.
- ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಫಾರ್ಮ್ ನಲ್ಲಿ ವೈಯಕ್ತಿಕ ವಿವರ ಹಾಗೂ ಶೈಕ್ಷಣಿಕ ವಿವರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ ಕಡ್ಡಾಯವಾಗಿ ಶುಲ್ಕ ಪಾವತಿಸಿದ ಚಲನ್ ಪ್ರತಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಆಧಾರಿತ ಆಯ್ಕೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಲ್ಲಿ ಗಳಿಸಿದ ಅಂಕಗಳ ಹಾಗೂ ಲೈಬ್ರರಿ ಸೈನ್ಸ್ ಕೋರ್ಸ್ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ:
ಸಂಬಂಧಪಟ್ಟ ಗ್ರಾಮಪಂಚಾಯಿತಿಗಳ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಯಾವುದೇ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದರೆ, ಇತರೆ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಸೂಚನೆ ಪ್ರಕಟವಾದ ದಿನಾಂಕ | 22-05-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 27-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-06-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 10-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ರಾಯಚೂರು ಜಿಲ್ಲಾ ಪಂಚಾಯಿತ್ ವಿವಿಧ ತಾಲ್ಲೂಕುಗಳಲ್ಲಿ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾಕರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಜಿಲ್ಲಾ ಪಂಚಾಯಿತ್ ರಾಯಚೂರು
ಇಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದೆ.
ಹೌದು, ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
10-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- KSRLPS: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
- KEA Application: ರೂ. 1,55,200/- ವೇತನ ವಿವಿಧ ಇಲಾಖೆಗಳ ಅಡಿಯಲ್ಲಿ ಇಂಜಿನಿಯರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 04 ಕೊನೆಯ ದಿನಾಂಕ
- KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ
- Udupi CSL: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026! ITI, Diploma ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ