GramPanchayat Application: ಗ್ರಾಮ ಪಂಚಾಯತಿ ಭರ್ಜರಿ ನೇಮಕಾತಿ 2026! PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 8 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಉದ್ಯೋಗವನ್ನು ಹುಡುಕುತ್ತಿದ್ದಿರಾ? ಸರ್ಕಾರಿ ವಲಯದಲ್ಲಿಯೇ ಉದ್ಯೋಗವನ್ನು ಪ್ರಾರಂಭಿಸಬೇಕು ಎನ್ನುವುದು ಕನಸಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಶಿವಮೊಗ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Gram Panchayat Recruitment 2026


ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಫ್ಲೈನ್ ಮೂಲಕ ನಡೆಯಲಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗೆಯೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಾಗುತ್ತದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

GramPanchayat

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಶಿವಮೊಗ್ಗ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೇಲ್ವಿಚಾರಕ ಹುದ್ದೆಗಳು
ಹುದ್ದೆಯ ಸಂಖ್ಯೆ 14 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08-07-2026
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್ ಮೂಲಕ
ಉದ್ಯೋಗ ಸ್ಥಳ ಶಿವಮೊಗ್ಗ ಜಿಲ್ಲೆಯ ವಿವರ ಗ್ರಾಮ ಪಂಚಾಯತಿಗಳು (ಹೊಸನಗರ, ಸಾಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ಜಿಲ್ಲೆಗಳು)

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಪ್ರಸ್ತುತ ಸಾಲಿನಲ್ಲಿ ಒಟ್ಟು 14 ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಹೊಸನಗರ ತಾಲ್ಲೂಕು – ಸುಳುಗೋಡು ಗ್ರಾಮ ಪಂಚಾಯತಿ 1 ಹುದ್ದೆ
ಹೊಸನಗರ ತಾಲ್ಲೂಕು -ತ್ರೀಣಿವೆ ಗ್ರಾಮ ಪಂಚಾಯತಿ 1 ಹುದ್ದೆ
ಸಾಗರ ತಾಲ್ಲೂಕು – ಕುದರೂರು ಗ್ರಾಮ ಪಂಚಾಯತಿ 1 ಹುದ್ದೆ
ಸಾಗರ ತಾಲ್ಲೂಕು – ಕಲ್ಮನೆ ಗ್ರಾಮ ಪಂಚಾಯತಿ 1 ಹುದ್ದೆ
ಸಾಗರ ತಾಲ್ಲೂಕು – ಹೆಗ್ಗೋಡು ಗ್ರಾಮ ಪಂಚಾಯತಿ 1 ಹುದ್ದೆ
ಸೊರಬ ತಾಲ್ಲೂಕು – ಭಾರಂಗಿ ಗ್ರಾಮ ಪಂಚಾಯತಿ1 ಹುದ್ದೆ
ಸೊರಬ ತಾಲ್ಲೂಕು – ಹರೀತಿ ಗ್ರಾಮ ಪಂಚಾಯತಿ1 ಹುದ್ದೆ
ಶಿಕಾರಿಪುರ ತಾಲ್ಲೂಕು – ಮುದ್ದನಹಳ್ಳಿ ಗ್ರಾಮ ಪಂಚಾಯತಿ1 ಹುದ್ದೆ
ಶಿಕಾರಿಪುರ ತಾಲ್ಲೂಕು – ಅಂಬಾರಗೊಪ್ಪ ಗ್ರಾಮ ಪಂಚಾಯತಿ1 ಹುದ್ದೆ
ಭದ್ರಾವತಿ ತಾಲ್ಲೂಕು – ವೀರಾಪುರ ಗ್ರಾಮ ಪಂಚಾಯತಿ1 ಹುದ್ದೆ
ಭದ್ರಾವತಿ ತಾಲ್ಲೂಕು – ಕೂಡ್ಲಿಗೆರೆ ಗ್ರಾಮ ಪಂಚಾಯತಿ1 ಹುದ್ದೆ
ತೀರ್ಥಹಳ್ಳಿ ತಾಲ್ಲೂಕು – ಹೊಸಹಳ್ಳಿ ಗ್ರಾಮ ಪಂಚಾಯತಿ 1 ಹುದ್ದೆ
ತೀರ್ಥಹಳ್ಳಿ ತಾಲ್ಲೂಕು – ಬಾಂಡ್ಯಕುಕ್ಕೆ ಗ್ರಾಮ ಪಂಚಾಯತಿ 1 ಹುದ್ದೆ
ಶಿವಮೊಗ್ಗ ತಾಲ್ಲೂಕು – ಚೋರಡಿ ಗ್ರಾಮ ಪಂಚಾಯತಿ 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
  • ಲೈಬ್ರರಿ ಸೈನ್ಸ್ ಸೆರ್ಟಿಫಿಕೇಷನ್ ಕೋರ್ಸ್ ಗಳಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಕಂಪ್ಲೀಟ್ ಮಾಡಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ನಿವಾಸಿ ಆಗಿರಬೇಕು.
  • ಅಭ್ಯರ್ಥಿಗಳಿಗೆ ಕನ್ನಡವನ್ನು ಓದಲು ಬರೆಯಲು ಹಾಗೂ ಮಾತನಾಡಲು ಕಡ್ಡಾಯವಾಗಿ ಬರಬೇಕು.

ವಯೋಮಿತಿ ವಿವರ:

ಶಿವಮೊಗ್ಗ ಗ್ರಾಮ ಪಂಚಾಯಿತಿಯ 14 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಇಲಾಖೆಯ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • 2A, 2B, 3A ಹಾಗೂ 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷ
  • ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ
  • ವಿಧವೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಅರ್ಜಿ ಶುಲ್ಕ:

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಶಿವಮೊಗ್ಗ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಮೇಲ್ವಿಚಾಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,201/- ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆಯನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಶಿವಮೊಗ್ಗ ಜಿಲ್ಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಅಥವಾ ಅಂಚೆ ಮೂಲಕ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಅಂಕಗಳ ಲೆಕ್ಕಾಚಾರ ಮಾಡಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
  • ಇಬ್ಬರು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದರೆ, ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ19-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಶಿವಮೊಗ್ಗ ಜಿಲ್ಲಾ ಪಂಚಾಯತಿ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯತಿಯಲ್ಲಿ ವಾಸವಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment