ನಮಸ್ಕಾರ ಸ್ನೇಹಿತರೆ, ಹಾವೇರಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯು ಆತ್ಮ ಯೋಜನೆಯಡಿಯಲ್ಲಿ ಖಾಲಿ ಇರುವ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕೃಷಿ ಅಥವಾ ತತ್ಸಮಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Haveri Agriculture Department Recruitment 2026
ಈ ನೇಮಕಾತಿಯಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣ ನೇರಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಉದ್ಯೋಗ ಮಾಡುವ ಅವಕಾಶ ಸಿಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಭ್ಯರ್ಥಿಗಳು ಹುದ್ದೆಗಳ ಕುರಿತು ಪ್ರಸ್ತುತ ಲೇಖನದಲ್ಲಿ ನೀಡಲಾಗುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ನಿಗದಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಹಾವೇರಿ |
| ಹುದ್ದೆಯ ಹೆಸರು | ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರು |
| ಹುದ್ದೆಯ ಸಂಖ್ಯೆ | ಒಟ್ಟು 7 ಹುದ್ದೆಗಳು |
| ಉದ್ಯೋಗ ಸ್ಥಳ | ಹಾವೇರಿ – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-06-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯು ಆತ್ಮ ಯೋಜನೆಯಡಿಯಲ್ಲಿ ವಿವಿಧ ತಾಂತ್ರಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಒಟ್ಟು 7 ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದ್ದು, ಕೃಷಿ ಅಥವಾ ತತ್ಸಮಾನ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಕರ್ನಾಟಕ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯು ಪ್ರಸ್ತುತ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು | 1 ಹುದ್ದೆ |
| ಸಹಾಯಕ ತಾಂತ್ರಿಕ ವ್ಯವಸ್ಥಾಪಕರು | 6 ಹುದ್ದೆಗಳು |
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳನ್ನು ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದ್ದು, ಒಟ್ಟು 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳನ್ನು ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ 4 ಹುದ್ದೆಗಳನ್ನು, ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 1 ಹುದ್ದೆಗಳನ್ನು ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 1 ಹುದ್ದೆಗಳನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ಅರ್ಹತೆ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು:
- ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 2 ವರ್ಷಗಳ ಕ್ಷೇತ್ರ ಅನುಭವವನ್ನು ಹೊಂದಿರಬೇಕು.
- ಅಥವಾ ಕೃಷಿ ಪದವೀಧರರಾಗಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು:
- ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
- ಇದರೊಂದಿಗೆ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷಗಳ ಕ್ಷೇತ್ರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷದೊಳಗೆ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಈಗಾಗಲೇ ಆತ್ಮ ಯೋಜನೆಯಡಿಯಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಆತ್ಮ ಯೋಜನೆಯಡಿಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಗುತ್ತಿಗೆ ಆಧಾರಿತ ನಿಯಮಾನುಸಾರ ಮಾಸಿಕ ಅತ್ಯಾಕರ್ಷಕ ವೇತನಗಳನ್ನು ಹಾಗೂ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬಿಟಿಎಂ ಹಾಗೂ ಏಟಿಎಂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ.
- ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲ ವಿವರಗಳನ್ನು ಒಳಗೊಂಡಿರುವಂತಹ ರೆಸೂಮ್ ಅನ್ನು ಸಿದ್ಧಪಡಿಸಿಕೊಂಡು ಅದಕ್ಕೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
- ನಂತರ ರೆಸೂಮ್ ನೊಂದಿಗೆ ಈ ಕೆಳಗೆ ತಿಳಿಸಲಾದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಿ.
- ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ಅನುಭವ ಪ್ರಮಾಣಪತ್ರ, ಕಂಪ್ಯೂಟರ್ ಜ್ಞಾನದ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳು.
- ನಂತರ ಸಿದ್ದಪಡಿಸಿದ ರೆಸೂಮ್ ಹಾಗೂ ಅಗತ್ಯ ದಾಖಲೆಗಳನ್ನು ಒಂದು ಲಕೋಟೆಗೆ ಹಾಕಿ, ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಖುದ್ದಾಗಿ ಭೇಟಿ ನೀಡಿ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ:
ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆ,
ಜಿಲ್ಲಾಡಳಿತ ಭವನ, ದೇವಗಿರಿ,
ಹಾವೇರಿ ತಾಲ್ಲೂಕು – 581110
ಆಯ್ಕೆ ಪ್ರಕ್ರಿಯೆ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಕಾರ್ಯ ಅನುಭವ ಹಾಗೂ ನಿಯಮಾನುಸಾರ ನಡೆಸುವ ಸಂದರ್ಶನದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ನೇರ ಗುತ್ತಿಗೆ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಜೂನ್ 2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಹಾವೇರಿ ಜಿಲ್ಲೆಯ ಕೃಷಿ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಮಾಡುವ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- ESI: ಅಬಕಾರಿ ಇಲಾಖೆಯ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟ! ಡಿಗ್ರಿ ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- VAO: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026! 12ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗಾವಕಾಶ
- Air Force: ಭಾರತೀಯ ವಾಯುಪಡೆಯಲ್ಲಿ ಬೃಹತ್ ನೇಮಕಾತಿ! PUC ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ । ಜುಲೈ 26 ಕೊನೆಯ ದಿನಾಂಕ
- GramPanchayat Application: ಗ್ರಾಮ ಪಂಚಾಯತಿ ಭರ್ಜರಿ ನೇಮಕಾತಿ 2026! PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 8 ಕೊನೆಯ ದಿನಾಂಕ
- SBI Link: ರೂ. 85,920/- ವೇತನ! ಎಸ್ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ