ಸರ್ಕಾರಿ ಸಂಸ್ಥೆಯಲ್ಲಿ ವೃತ್ತಿ ಜೀವನ ಪ್ರಾರಂಭಿಸಬೇಕೆಂದು ಕನಸ್ಸು ಕಾಣುತ್ತಿರುವ ಸಾಕಷ್ಟು ಉದ್ಯೋಗಾಕಾಂಷಿಗಳಿಗೆ ಬಂಪರ್ ಅವಕಾಶ! ಕರ್ನಾಟಕ ಹೈಕೋರ್ಟ್ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಹ ಆಹ್ವಾನಿಸಲಾಗಿದೆ.
High Court Recruitment in Kannada
ಜಸ್ಟ್ 10 ನೇ ತರಗತಿಯಲ್ಲಿ ಪಾಸ್ ಆದ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 22-04-2026 ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಮೇ 21, 2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು, ಧಾರವಾಡ ಹಾಗೂ ಕಲಬುರಗಿಯಲ್ಲಿ ವೃತ್ತಿಜೀವನ ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಪ್ರಸ್ತುತ ಈ ಒಂದು ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ವಿವರಗಳನ್ನು ಸ್ವಷ್ಟವಾಗಿ ನೀಡಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಕಿರು ಪರಿಚಯ:
| ನೇಮಕಾತಿ ಸಂಸ್ಥೆಗಳ ಹೆಸರು | ಕರ್ನಾಟಕ ಹೈಕೋರ್ಟ್, ಬೆಂಗಳೂರು |
| ಹುದ್ದೆಗಳ ಹೆಸರು | ಜವಾನ, ಸ್ವೀಪರ್, ಕಾವಲುಗಾರ, ಅಸಿಸ್ಟೆಂಟ್ ಬೈಂಡರ್, ಲಿಫ್ಟ್ ಅಟೆಂಟೆಂಡೆಂಟ್ ಹಾಗೂ ಇನ್ನಿತರ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | 101 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು, ಕಲಬುರಗಿ, ಧಾರವಾಡ |
| ನೇಮಕಾತಿ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-05-2026 |
ಹುದ್ದೆಯ ವಿವರ:
ಕರ್ನಾಟಕ ಹೈಕೋರ್ಟ್ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳನ್ನು ಎರಡು ವಿಭಾಗಗಳ ಅಡಿಯಲ್ಲಿ ಭರ್ತಿಮಾಡಿಕೊಳ್ಳಲಿದ್ದು, ಅವುಗಳ ವಿವರವನ್ನು ಈ ಕೆಳಗೆ ನೀಡಲಾಗಿದೆ.
- ಕಲ್ಯಾಣ ಕರ್ನಾಟಕ ವೃಂದ
- ಜವಾನ (ಹೌಸ್ ಕೀಪಿಂಗ್), ಸ್ವೀಪರ್ ಹಾಗೂ ಜವಾನ : ಒಟ್ಟು 8 ಹುದ್ದೆಗಳು
- ಉಳಿಕೆ ಮೂಲ ವೃಂದ
- ಅಸಿಸ್ಟೆಂಟ್ ಬೈಂಡರ್ : 1 ಹುದ್ದೆಗಳು
- ದರ್ಜಿ : 1 ಹುದ್ದೆಗಳು
- ಧೋಬಿ : 1 ಹುದ್ದೆಗಳು
- ಲಿಫ್ಟ್ ಅಟೆಂಡರ್ : 5 ಹುದ್ದೆಗಳು
- ಕಾವಲುಗಾರ, ಜವಾನ, ಸ್ವೀಪರ್, ಜವಾನ (ಹೌಸ್ ಕೀಪಿಂಗ್) : 85 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
- ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಗ್ರೂಪ್ ಡಿ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯವಾಗಿ ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಮೇಲಿನ ಶೈಕ್ಷಣಿಕ ಅರ್ಹತೆ ಜೊತೆಗೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅನುಭವವನ್ನು ಹೊಂದಿರಬೇಕು.
- ಲಿಫ್ಟ್ ಅಟೆಂಡರ್ ಹುದ್ದೆಗಳಿಗೆ ಲಿಫ್ಟ್ ಮೆಕ್ಯಾನಿಸಮ್ ನಲ್ಲಿ ಅನುಭವ ಹೊಂದಿರಬೇಕು.
- ಅಸಿಸ್ಟೆಂಟ್ ಬೈಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೈಂಡಿಂಗ್ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
- ಧೋಬಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೋಬಿ ಕೆಲಸದಲ್ಲಿ ಅನುಭವ ಹೊಂದಿರಬೇಕು.
- ದರ್ಜಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದರ್ಜಿ ಕೆಲಸದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಹೈಕೋರ್ಟ್ ನ ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಟ 40 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪ್ರವರ್ಗ 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಪ್ರವರ್ಗ 1 ರ ಅಭ್ಯರ್ಥಿಗಳಿಗೆ – 5 ವರ್ಷ
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಪ್ರವರ್ಗ 1 ರ ಅಭ್ಯರ್ಥಿಗಳಿಗೆ – ರೂ. 100
- ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ – ರೂ. 200
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಗೇಟ್ ವೇ ವಿಧಾನ ಅನುಸರಿಸಿ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭಗಳನ್ನು ಹಿಂದಿರುಗಿಸುವುದಿಲ್ಲ.
ವೇತನ ಶ್ರೇಣಿ:
- ಕರ್ನಾಟಕ ಹೈಕೋರ್ಟ್ ನ ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನ ಹಾಗೂ ಭತ್ಯೆಗಳನ್ನು ನೀಡಲಾಗುತ್ತದೆ.
- ಜವಾನ ಕಾವಲುಗಾರ, ಸ್ವೀಪರ್, ಸಹಾಯಕ ಬೈಂಡರ್, ಹೌಸ್ ಕೀಪಿಂಗ್ ಮತ್ತು ಧೋಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 19,900/- ದಿಂದ ರೂ. 63,200/- ವರೆಗೆ ವೇತನವನ್ನು ನೀಡಲಾಗುತ್ತದೆ.
- ಲಿಫ್ಟ್ ಅಟೆಂಡರ್ ಹಾಗೂ ದರ್ಜಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 21,700/- ದಿಂದ ರೂ. 69,100/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಕರ್ನಾಟಕದ ಹೈಕೋರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ಅಲ್ಲಿ ಕಾಣುವ ಗ್ರೂಪ್ ಡಿ ರಿಕ್ರೂಟ್ಮೆಂಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರಗಳು ಹಾಗೂ ಶೈಕ್ಷಣಿಕ ವಿವರಗಳು ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಅನುಭವ ಪ್ರಮಾಣಪತ್ರ, ಪಾಸ್ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ನಿಗದಿತ ಸೈಜ್ ಗಳಲ್ಲಿ ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
- ಎಲ್ಲ ವಿವರಗಳು ಸರಿ ಇದೆಯೇ ಎಂದು ಪರಿಶೀಲಿಸಿ ನಂತರ ಸಬ್ಮೀಟ್ ಬಟನ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ:
ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ಸಂದರ್ಶನ:
ಮೀಸಲಾತಿ ನಿಯಮಗಳನ್ನು ಅನ್ವಹಿಸಿ ಒಟ್ಟು ಹುದ್ದೆಗಳ 10 ಪಟ್ಟು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇಲಾಖೆಯು ನಡೆಸುವ ಈ ಒಂದು ಸಂದರ್ಶನಕ್ಕೆ 10 ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗವಹಿಸುವ ಸಂದರ್ಭದಲ್ಲಿ ಎಲ್ಲ ಅಗತ್ಯ ದಾಖಲೆಗಳೊಂದಿಗೆ ನಡತೆ ಪ್ರಮಾಣಪತ್ರಗಳನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ.
ಅಂತಿಮವಾಗಿ ಮೆರಿಟ್ ಪಟ್ಟಿ ಹಾಗೂ ಮೀಸಲಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 22-04-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 22-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-05-2026 |
| ಶುಲ್ಕ ಪಾವತಿಸಲು ಕೊನೆಯ ದಿನಾಂಕ | 21-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಕರ್ನಾಟಕ ಉಚ್ಚನ್ಯಾಯಾಲಯವು 2025-26 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕಡಿಮೆ ಶೈಕ್ಷಣಿಕ ಅರ್ಹತೆ ಹೊಂದಿದ್ದರೂ, ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ ಅರ್ಹ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- IFFCO: ₹65,000 ವೇತನ! ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ । ಏಪ್ರಿಲ್ 30 ಕೊನೆಯ ದಿನಾಂಕ
- NMPA: ₹2 ಲಕ್ಷ ವೇತನ! ನವ ಮಂಗಳೂರು ಬಂದರು ನೇಮಕಾತಿ 2026 | ಮೇ 4 ಕೊನೆಯ ದಿನ
- PACS: ಕೃಷಿ ಪತ್ತಿನ ಸಹಕಾರ ಸಂಘ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ! ಇಂದೇ ಅಪ್ಲೈ ಮಾಡಿ
- CUK: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!
- KVAFSU: ಪಶು ವೈದ್ಯಕೀಯ & ಮೀನುಗಾರಿಕೆ ಕ್ಷೇತ್ರದಲ್ಲಿ ನೇಮಕಾತಿ! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ