ಸರ್ಕಾರಿ ವಲಯದಲ್ಲಿ ಗೌರವಾನ್ವಿತ ಉದ್ಯೋಗದ ಕನಸ್ಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್! HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯು ಬೆಳಗಾವಿ ಜಿಲ್ಲೆಯ ಕೆನೆಗಲಾ ಘಟಕದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
HLL Lifecare Driver Recruitment 2026
ಜಸ್ಟ್ SSLC ಅಲ್ಲಿ ಪಾಸ್ ಆದ ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ಥಿರ ಮಾಸಿಕ ವೇತನ ಹಾಗೂ ಉತ್ತಮ ಕೆಲಸದ ವಾತಾವರಣವನ್ನು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿನ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನಿತರ ಎಲ್ಲಾ ಮಾಹಿತಿಯನ್ನು ಓದಿಕೊಂಡು ನಂತರ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಗಳ ಹೆಸರು | HLL ಲೈಫ್ ಕೇರ್ ಲಿಮಿಟೆಡ್ |
| ಹುದ್ದೆಗಳ ಹೆಸರು | ಡ್ರೈವರ್ |
| ಹುದ್ದೆಗಳ ಸಂಖ್ಯೆ | 01 ಹುದ್ದೆ |
| ಉದ್ಯೋಗ ಸ್ಥಳ | ಕೆನಗಲಾ ಫ್ಯಾಕ್ಟರಿ, ಬೆಳಗಾವಿ ಜಿಲ್ಲೆ, ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-05-2026 |
ಹುದ್ದೆಯ ವಿವರ:
HLL ಲೈಫ್ ಕೇರ್ ಸಂಸ್ಥೆಯು ತನ್ನ ಕೆನಗಲಾ ಘಟಕದಲ್ಲಿ ಖಾಲಿ ಇರುವ ಹುದ್ದೆಯ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಡ್ರೈವರ್ | 1 ಹುದ್ದೆ |
ಗಮನಿಸಿ: ಈ ನೇಮಕಾತಿಯು ಮೊದಲು ಎರಡು ವರ್ಷಗಳ ಅವಧಿಯಲ್ಲಿ ಒಪ್ಪಂದದ ಆಧಾರದ ಮೇಲೆ ನಡೆಯುತ್ತದೆ. ಅಭ್ಯರ್ಥಿಗಳು ಕಾರ್ಯಕ್ಷಮತೆ ಹಾಗೂ ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ ಅವಧಿಯನ್ನು ವಿಸ್ತರಿಸಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಯಾವುದೇ ರಾಜ್ಯದ ಸಾರಿಗೆ ಪ್ರಾಧಿಕಾರದಿಂದ ಪಡೆದ ಬ್ಯಾಡ್ಜ್ ಹೊಂದಿರಬೇಕು. ಜೊತೆಗೆ ಕಡ್ಡಾಯವಾಗಿ 10 ವರ್ಷಗಳ ಕಾಲ ಚಾಲಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವಯೋಮಿತಿ ವಿವರ:
HLL ಲೈಫ್ ಕೇರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-04-2026 ಕ್ಕೆ ಅನ್ವಯವಾಗುವಂತೆ ಗರಿಷ್ಟ 50 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಅರ್ಜಿ ಶುಲ್ಕ:
HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯು ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೇ ಉಚಿತವಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಡೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನ ರೂ. 7500 ರಿಂದ ರೂ. 15,000 ನೀಡಲಾಗುತ್ತದೆ. ಅಂದಾಜು ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ ರೂ. 13,500
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು HLL ಲೈಫ್ ಕೇರ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನಿಗದಿತ ಅರ್ಜಿ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಮತ್ತು ಅನುಭವದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ನಿಗದಿತ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ನಿಮ್ಮ ರೆಸೂಮ್ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವುಗಳನ್ನು ಒಂದು ಲೋಕೋಟೆಗೆ ಹಾಕಿ.
- ಲೋಕೋಟೆಯ ಮೇಲೆ ಅಪ್ಲಿಕೇಶನ್ ಫಾರ್ ದ ಪೋಸ್ಟ್ ಆಫ್ ಡ್ರೈವರ್ ಎಂದು ಬರೆಯಿರಿ.
- ನಂತರ ಈ ಲೋಕೋಟೆಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ.
ಜನರಲ್ ಮ್ಯಾನೇಜರ್, (ಆಪರೇಷನ್ಸ್) ಅಂಡ್ ಯುನಿಟ್ ಚೀಫ್,
HLL ಲೈಫ್ ಕೇರ್ ಲಿಮಿಟೆಡ್,
ಕೆನಗಲಾ 591225
ಹುಕ್ಕೇರಿ ತಾಲ್ಲೂಕು,
ಬೆಳಗಾವಿ ಜಿಲ್ಲೆ, ಕರ್ನಾಟಕ
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
- ಸಂದರ್ಶನ ಅಥವಾ ಪರೀಕ್ಷೆ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಲಿಖಿತ ಅಥವಾ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ ಇಲ್ಲವೇ ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ವೈದ್ಯಕೀಯ ತಪಾಸಣೆ:
ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಆಸ್ಪತ್ರೆಯ ಮಟ್ಟದ ವೈದ್ಯಕೀಯ ಸಂಸ್ಥೆಯಿಂದ ವೈದ್ಯಕೀಯ ಸದೃಢ ಪ್ರಮಾಣಪತ್ರ ಹೊಂದಿರಬೇಕು.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 22-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯು ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನೀವೇನಾದರೂ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದು, ಲಘು ವಾಹನ ಚಾಲನಾ ಪರವಾನಗಿ ಹೊಂದಿದ್ದರೆ ಇಂದೇ ಇಮೇಲ್ ಮೂಲಕ ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- SBTSSN: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ । ಏಪ್ರಿಲ್ 30 ಕೊನೆಯ ದಿನಾಂಕ
- Court Job : ₹69,100/- ವೇತನ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ । ಇಂದೇ ಅಪ್ಲೈ ಮಾಡಿ
- IFFCO: ₹65,000 ವೇತನ! ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ । ಏಪ್ರಿಲ್ 30 ಕೊನೆಯ ದಿನಾಂಕ
- NMPA: ₹2 ಲಕ್ಷ ವೇತನ! ನವ ಮಂಗಳೂರು ಬಂದರು ನೇಮಕಾತಿ 2026 | ಮೇ 4 ಕೊನೆಯ ದಿನ
- PACS: ಕೃಷಿ ಪತ್ತಿನ ಸಹಕಾರ ಸಂಘ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ! ಇಂದೇ ಅಪ್ಲೈ ಮಾಡಿ